ಎಲ್ಲಾ ಜಿಲ್ಲೆಗಳಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್, ಹಾಸಿಗೆ ಹಂಚಿಕೆಗೆ ಸಮರ್ಪಕ ವ್ಯವಸ್ಥೆ : ಸಚಿವ ಕೆ.ಸುಧಾಕರ್
RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಆಂಬ್ಯುಲೆನ್ಸ್ ಲಭ್ಯತೆ ಹೆಚ್ಚಿಸುವುದು, ರಾಪಿಡ್ ಆಂಟಿಜೆನ್ ಟೆಸ್ಟ್ ಗಾಗಿ ಮೊಬೈಲ್ ಟೆಸ್ಟಿಂಗ್ ವಾಹನ ಸಜ್ಜುಗೊಳಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ (ಜುಲೈ 13): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಹಕಾರಿಯಾಗುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ ವಿತರಿಸಲಾಗಿದೆ. ಅಲ್ಲದೆ, ಹಾಸಿಗೆ ಹಂಚಿಕೆಗೂ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವ ಕೆ, ಸುಧಾಕರ್ ತಿಳಿಸಿದ್ದಾರೆ.
ಇಂದು ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾಹಿತಿ ನೀಡಿರುವ ಸಚಿವ ಸುಧಾಕರ್, "ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್ ಗಳನ್ನು ಗುರುತಿಸುವುದು ಮತ್ತು ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ.
ಅಲ್ಲದೆ, ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ ರೋಗಿಗಳಿಗೆ ಹಾಸಿಗೆ ಸೀಮಿತಗೊಳಿಸಿದ್ದು, ಇದನ್ನು ಹಂಚಲು ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು" ಎಂದು ತಿಳಿಸಿದ್ದಾರೆ.
"ಇದರ ಜೊತೆಗೆ ರೋಗಲಕ್ಷಣವಿರುವ ಸೋಂಕಿತರ ಪತ್ತೆಗಾಗಿ, ರೋಗಲಕ್ಷಣವಿದ್ದವರಿಗೆ ಆಸ್ಪತ್ರೆ, ಅಂಬುಲನ್ಸ್ ಸಂಯೋಜನೆಗಾಗಿ ಮತ್ತು ಇತರೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸಾಹಾಯವಾಣಿ ಕಲ್ಪಿಸಲಾಗುವುದು.
RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಆಂಬ್ಯುಲೆನ್ಸ್ ಲಭ್ಯತೆ ಹೆಚ್ಚಿಸುವುದು, ರಾಪಿಡ್ ಆಂಟಿಜೆನ್ ಟೆಸ್ಟ್ ಗಾಗಿ ಮೊಬೈಲ್ ಟೆಸ್ಟಿಂಗ್ ವಾಹನ ಸಜ್ಜುಗೊಳಿಸಲಾಗುವುದು" ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ