ಕೋಟೆನಾಡಿನ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷದ ಆಚರಣೆಗೆ ನಿರ್ಬಂಧ: ದಿನ ನಿತ್ಯದ ಚಟುವಟಿಕೆಗಳಿಗಷ್ಟೆ ಅವಕಾಶ

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ,2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ಚಿತ್ರದುರ್ಗ: ಹೊಸ ವರ್ಷ ಬಂತು ಅಂದರೆ ಸಾಕು ಚಿಕ್ಕವರು ದೊಡ್ಡವರು, ಯುವಕ ಯುವತಿಯರು ಪಾರ್ಟಿ ಮಾಡಿ,ಕುಣಿದು ಕುಪ್ಪಳಿಸೋದು ಸಾಮಾನ್ಯವಾಗಿದೆ. ಆದರೆ ಈ ಸಾರಿ  ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಹೊಸ ವರ್ಷ ಆಚರಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷವನ್ನು ಅತ್ಯಂತ ಸರಳವಾಗಿ ಆಚರಿಸುವುದು ಸೂಕ್ತವಾಗಿದ್ದು, ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಅವಶ್ಯವಾಗಿದೆ. ಹೊಸ ವರ್ಷ ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.

2020ರ ಡಿಸೆಂಬರ್ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ ಇತ್ಯಾದಿ ನಿಷೇಧಿಸಿದೆ. ಆದರೆ ಕ್ಲಬ್, ಪಬ್,ರೆಸ್ಟೋರೆಂಟ್‍ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳ್ನು ಕೈಗೊಳ್ಳಲು ನಿರ್ಬಂಧವಿಲ್ಲ.ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಸ್ಥಳ, ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರ ಸೇರಲು ಜಾಗ್ರತೆ ವಹಿಸುವುದು.

ಇದನ್ನೂ ಓದಿ : Grama Panchayath Election Results Live: ಗ್ರಾಮ ಪಂಚಾಯಿತಿ ಚುನಾವಣೆ - ಮತ ಎಣಿಕೆ ಪ್ರಾರಂಭ

ಇನ್ನೂ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಅವಕಾಶ ನೀಡಿದ್ದು ಚಿತ್ರದುರ್ಗ ಜಿಲ್ಲೆಯ ಪ್ರವಾಸಿ ತಾಣಗಳಾದ ಕಲ್ಲಿನಕೋಟೆ,ಚಂದ್ರವಳ್ಳಿ, ಆಡುಮಲ್ಲೇಶ್ವರ, ಜೋಗಿಮಟ್ಟಿ, ವಾಣಿವಿಲಾಸ ಸಾಗರ ಗಳಲ್ಲಿ ಹೊಸ ವರ್ಷ ಆಚರಣೆ, ಪಾರ್ಟಿಗಳನ್ನ ನಿರ್ಭಧಿಸಿ ಎಂದಿನಂತೆ ನಡೆಯವ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾಗುವ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ,2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನಿನಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶದಲ್ಲಿ  ತಿಳಿಸಿದ್ದಾರೆ.
Published by:MAshok Kumar
First published: