news18-kannada Updated:June 23, 2020, 4:03 PM IST
ಸಾಂದರ್ಭಿಕ ಚಿತ್ರ.
ಕೊಡಗು(ಜೂ.23): ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹೊಡೆದುಕೊಂಡು ಪೊಲೀಸ್ ಅಧಿಕಾರಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತ ಎಎಸ್ಐನನ್ನು ಎಂ.ಎಸ್ ಈರಪ್ಪ ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೋಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಮೇ 30 ರಂದು ಅಷ್ಟೇ ನಿವೃತ್ತಿ ಹೊಂದಿದ್ದರು. ಆದರೀಗ, ತಮ್ಮ ಮನೆಯಲ್ಲೇ ಒಂಟಿ ನಳಿಕೆ ಗನ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು, ಶೂಟ್ ಮಾಡಿಕೊಂಡಿದ್ದರಿಂದ ಕೊಠಡಿಯ ಬಾಗಿಲಿನಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ: ‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ - ಸೋನಿಯಾ ಗಾಂಧಿ
ಈ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಶನಿವಾರಸಂತೆ ಪೋಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
First published:
June 23, 2020, 3:54 PM IST