ಕಲಬುರ್ಗಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಗೆಳೆಯರಿಂದಲೇ ದುಷ್ಕೃತ್ಯ ಶಂಕೆ

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಪಿ ಕಿಶೋರ್ ಬಾಬು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ಹಾಗೂ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದವು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಲೇ ರೌಡೀಶೀಟರ್ ಪಟ್ಟಿಗೆ ಸೇರ್ಪಡೆಗೊಂಡಿದ್ದ ಹಸನ್, ಶತ್ರುಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದ್ದ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಲಬುರ್ಗಿ; ಕಲಬುರ್ಗಿ ನಗರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಹಸನ್ ಅಲಿ(24) ಎಂದು ಗುರುತಿಸಲಾಗಿದೆ. ಸ್ನೇಹಿತರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕೊಲೆಯಾದ ರೌಡೀಶೀಟರ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಕಲಬುರ್ಗಿಯಲ್ಲಿ ರೌಡಿಶೀಟರ್​ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಕಲಬುರ್ಗಿ ನಗರದ ರಿಂಗ್​ ರಸ್ತೆಯ ಪೀರ್ ಬಂಗಾಲಿ ಮೈದಾನದಲ್ಲಿ ಘಟನೆ ಸಂಭವಿಸಿದೆ.

ಕೊಲೆಯಾದ ಹಸನ್ ಅಲಿ ಈ ಹಿಂದೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೊಲೆ ಪ್ರಕರಣ, ಬೈಕ್ ಕಳ್ಳತನ ಇತ್ಯಾದಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಹಸನ್ ಅಲಿ, ಆರು ತಿಂಗಳ ಹಿಂದಷ್ಟೆ ಜೈಲಿನಿಂದ ಬೇಲ್ ಮೇಲೆ ಬಿಡುಗಡೆಯಾಗಿದ್ದ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸ್ನೇಹಿತರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಸ್ನೇಹಿತರೇ ರೌಡಿಶೀಟರ್ ಹಸನ್ ಅಲಿಯನ್ನು ಹತ್ಯೆಗೈದಿದ್ದಾರೆ ಎನ್ನಲಾಗಿದೆ.

ಕೊಲೆಯಾದ ಹಸನ್ ಅಲಿ.


ಇದನ್ನು ಓದಿ; ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಪಿ ಕಿಶೋರ್ ಬಾಬು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ಹಾಗೂ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದವು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಲೇ ರೌಡೀಶೀಟರ್ ಪಟ್ಟಿಗೆ ಸೇರ್ಪಡೆಗೊಂಡಿದ್ದ ಹಸನ್, ಶತ್ರುಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದ್ದ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
First published: