HOME » NEWS » District » RS 1041 CRORE DRINKING WATER PROJECT IN DHARWAD DISTRICT SAYS MINISTER JAGADISH SHETTAR HK

ಧಾರವಾಡ ಜಿಲ್ಲೆಯಲ್ಲಿ1041 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರಿನ ಯೋಜನೆಗೆ ನೀಲನಕ್ಷೆ ಸಿದ್ಧ : ಸಚಿವ ಜಗದೀಶ್ ಶೆಟ್ಟರ್​

ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಕುಡಿಯುವ ನೀರಿನ ಯೋಜನೆ ಕುರಿತು ಎಲ್.ಎನ್.ಟಿ ಕಂಪನಿಯವರು ಅಧ್ಯಯನಕ್ಕಾಗಿ ಆರು ತಿಂಗಳ ಸಮಯವಕಾಶ ಕೋರಿದ್ದರು. ಅವರಿಗೆ ಮೂರು ತಿಂಗಳ ಸಮಯಾವಕಾಶ ನೀಡಲಾಗಿದೆ.

news18-kannada
Updated:September 30, 2020, 7:10 AM IST
ಧಾರವಾಡ ಜಿಲ್ಲೆಯಲ್ಲಿ1041 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರಿನ ಯೋಜನೆಗೆ ನೀಲನಕ್ಷೆ ಸಿದ್ಧ : ಸಚಿವ ಜಗದೀಶ್ ಶೆಟ್ಟರ್​
ಸಚಿವ ಜಗದೀಶ್ ಶೆಟ್ಟರ್
  • Share this:
ಹುಬ್ಬಳ್ಳಿ(ಸೆಪ್ಟೆಂಬರ್​ 30): ಧಾರವಾಡ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲು 1041‌ ಕೋಟಿ ರೂಪಾಯಿ ವೆಚ್ಚದಲ್ಲಿ ನೀಲನಕ್ಷೆ ತಯಾರಾಗಿದೆ. ಈ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಜರುಗಿಸಿದ್ದು, ಯೋಜನೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯ ಸರ್ಕೀಟ್ ಹೌಸ್‍ನಲ್ಲಿ ಜರುಗಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಎಸ್.ಟಿ.ಯು.ಪಿ ಕನ್ಸಲ್ಟೆಂಟ್ ನವರು ಯೋಜನೆಯ ಪ್ರಾಥಮಿಕ ಸಿದ್ದತಾ ವರದಿಯನ್ನು ವಿಸ್ತೃತವಾಗಿ ಜನಪ್ರತಿನಿಧಿಗಳೆದರು ಮಂಡಿಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೊಶಿಯವರು ವೆಬ್‍ನಾರ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಲಘಟಗಿ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು ಎಂದು ಸಚಿವರು ಹೇಳಿದರು.

900 ಕೋಟಿ ರೂಪಾಯಿ ಯೋಜನೆ ಅನುಷ್ಠಾನಕ್ಕೆ, 141 ಕೋಟಿ ರೂಪಾಯಿ 5 ವರ್ಷಗಳ ಕಾಲ ಯೋಜನೆ ನಿರ್ವಹಣೆಗೆ ಮೀಸಲಿರಿಸಲಾಗುವುದು. ಜಿಲ್ಲಾ ಪಂಚಾಯತ್​ ಸಿಇಒ ಸಭೆಯ ನಿರ್ಣಯದ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಿದ್ದಾರೆ. ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಒಪ್ಪಿಗೆ ಪಡೆದು ಸಚಿವ ಸಂಪುಟ ಸಭೆಯನ್ನು ಯೋಜನೆಯನ್ನು ಮಂಡಿಸಲಾಗುವುದು. ಸಚಿವ ಸಂಪುಟ ಒಪ್ಪಿಗೆ ನಂತರ ಯೋಜನೆಗೆ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಕುಡಿಯುವ ನೀರಿನ ಯೋಜನೆ ಕುರಿತು ಎಲ್.ಎನ್.ಟಿ ಕಂಪನಿಯವರು ಅಧ್ಯಯನಕ್ಕಾಗಿ ಆರು ತಿಂಗಳ ಸಮಯವಕಾಶ ಕೋರಿದ್ದರು. ಅವರಿಗೆ ಮೂರು ತಿಂಗಳ ಸಮಯಾವಕಾಶ ನೀಡಲಾಗಿದೆ. ಬರುವ ಮಾರ್ಚ್ ನಂತರ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು ಎಂದರು.

ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುವ ಜಾಗದಲ್ಲಿ ಅಗತ್ಯ ಮುಂಜಾಗೃತ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿ.ಟಿ ಎಂಡಿ ಅವರಿಗೆ ಸೂಚನೆ ನೀಡಿದ್ದೇನೆ. ಗ್ಲಾಸ್ ಹೌಸ್‌ನಲ್ಲಿ ನಡೆದ ದುರ್ಘಟನೆಯಲ್ಲಿ ಹೆಣ್ಣು ಮಗುವೊಂದು ಮೃತ ಪಟ್ಟಿರುವುದು ದುರದೃಷ್ಟಕರವಾಗಿದೆ. ಮೃತ ಮಗುವಿನ ಕುಟುಂಬದವರಿಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ : ಗುಂಡ್ಲುಪೇಟೆ ಎಪಿಎಂಸಿಯಲ್ಲಿ ಬಿಳಿಚೀಟಿ ಕಮಿಷನ್ ದಂಧೆ : ಮಧ್ಯವರ್ತಿಗಳಿಂದ ರೈತರ ಶೋಷಣೆ

ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಶಾಸಕರುಗಳಾದ ಪ್ರದೀಪ್ ಶೆಟ್ಟರ್, ಅಮೃತ ದೇಸಾಯಿ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ. ಸಿಇಒ ಡಾ.ಬಿ.ಸಿ.ಸತೀಶ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸ್ವಾವಲಂಬಿ ಸ್ವಯಂ ಉದ್ಯೋಗ ಯೋಜನೆಯಡಿ ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೌಶಲ್ಯ ಅಭಿವೃದ್ಧಿ ನಿಗಮದ 5 ಲಕ್ಷ ರೂಪಾಯಿ ಸಹಾಯ ಧನದಲ್ಲಿ ನೀಡಲಾದ ಸಂಚಾರಿ ಚಪ್ಪಲಿ ಮಾರಾಟ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಕುಂದಗೋಳ ತಾಲೂಕಿನ ರಾಮನಕೊಪ್ಪದ ಕಾಡಪ್ಪ ರಾಮಪ್ಪ ಮಾದರ ಅವರಿಗೆ ಹಸ್ತಾಂತರಿಸಿದರು.
Published by: G Hareeshkumar
First published: September 30, 2020, 7:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories