Lok Sabha BY Election 2021: ಬೆಳಗಾವಿ ಲೋಕಸಭಾ ಉಪ ಚುನಾವಣೆ ದಂಗಲ್‌ಗೆ ಸಾಹುಕಾರ್ ಸತೀಶ್ ಜಾರಕಿಹೊಳಿ ಎಂಟ್ರಿ!

ಸದ್ಯ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಶಾಸಕರಾಗಿರುವ ಸತೀಶ್, ಬೆಳಗಾವಿ ಉಪ ಚುನಾವಣೆ ಅಭ್ಯರ್ಥಿಯಾಗುವುದು ನಿಶ್ಚಿತವಾಗಿದೆ.

ಮಾಜಿ ಸಚಿವ ಸತೀಶ್ ಜಾರಕಿಹೊಳಿ.

ಮಾಜಿ ಸಚಿವ ಸತೀಶ್ ಜಾರಕಿಹೊಳಿ.

  • Share this:
ಬೆಳಗಾವಿ: ಕುಂದಾನಗರಿ ಬೆಳಗಾವಿ ಲೋಕಸಭೆ ಉಪ ಚುನಾವಣೆ ಅಖಾಡ ರಂಗೇರುತ್ತಿದೆ. ಆಯಾ ಪಕ್ಷಗಳು ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿವೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಹಿರಿಯ ನಾಯಕರ ಸಭೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆರ್.ವಿ. ದೇಶಪಾಂಡೆ, ಹೆಚ್.ಕೆ.ಪಾಟೀಲ್, ಈಶ್ವರ್ ಖಂಡ್ರೆ, ಸಲೀಂ‌‌ಅಹ್ಮದ್ ಸೇರಿ ಅನೇಕ ನಾಯಕರು ಚರ್ಚೆ ನಡೆಸಿದರು. ಅಂತಿಮವಾಗಿ ಬೆಳಗಾವಿಯಿಂದ‌ ಸತೀಶ್ ಜಾರಕಿಹೊಳಿಯೇ ಸ್ಪರ್ಧೆ ಮಾಡಬೇಕೆಂಬ ಸರ್ವಾನುಮತದ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲ ನಾಯಕರೂ ಸತೀಶ್ ಜಾರಕಿಹೊಳಿಯೇ ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಹೀಗಾಗಿ ಸತೀಶ್ ಸಾಹುಕಾರ್ ಹೆಸರನ್ನು ಹೈಕಮಾಂಡ್‌ಗೆ ಕಳಿಸಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಸದ್ಯ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಶಾಸಕರಾಗಿರುವ ಸತೀಶ್, ಬೆಳಗಾವಿ ಉಪ ಚುನಾವಣೆ ಅಭ್ಯರ್ಥಿಯಾಗುವುದು ನಿಶ್ಚಿತವಾಗಿದೆ. ಸಭೆ ಬಳಿಕ ಮಾತನಾಡಿದ ಸತೀಶ್, "ಬೆಳಗಾವಿ ಲೋಕಸಭೆ ಟಿಕೆಟ್ ಬಗ್ಗೆ ಸಮಗ್ರ ಚರ್ಚೆಯಾಗಿದೆ. ನನ್ನ‌ ಜೊತೆ ಇನ್ನಿಬ್ಬರ ಹೆಸರು ರವಾನಿಸಲಾಗಿದೆ. ನನಗಿಷ್ಟ ಇದೆ ಇಲ್ಲ ಅನ್ನೋದು ಅಲ್ಲ. ಪಕ್ಷ ಬಯಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ. ನಾನು ಕೂಡ ಒಮ್ಮೆ ಹೈಕಮಾಂಡ್ ಭೇಟಿ ಮಾಡುತ್ತೇನೆ. ನಂತರ ಚುನಾವಣೆ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುತ್ತೇನೆ. ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಹೆಸರು ಕೂಡ ದೆಹಲಿಗೆ ಕಳಿಸಿದ್ದಾರೆ. ಅವರು ಈ ಸಭೆಗೆ ಬಂದಿಲ್ಲ ಅಂತ ಅಸಮಾಧಾನ ಇಲ್ಲ" ಎಂದು ಪರೋಕ್ಷವಾಗಿ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ದಿನೇಶ್ ಗುಂಡೂರಾವ್, ಬೆಳಗಾವಿ ಲೋಕಸಭೆ ಅಭ್ಯರ್ಥಿ‌ ಘೋಷಣೆ ಮಾತ್ರ ಬಾಕಿ ಇದೆ. ಎಲ್ಲ ನಾಯಕರು ಒಂದೇ ಹೆಸರನ್ನು ಹೇಳಿದ್ದಾರೆ. ಎಲ್ಲರ ಒಮ್ಮತದ ತೀರ್ಮಾನದಂತೆ ಹೈಕಮಾಂಡ್ ಗೆ ಕಳಿಸಲಾಗಿದೆ. ಸತೀಶ್​ ಜಾರಕಿಹೊಳಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುಳಿವು ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ‌ಖಂಡ್ರೆ ಮಾತನಾಡಿಯೂ ಅದನ್ನೇ ಪುನರುಚ್ಚರಿಸಿದರು. ಒಬ್ಬರ ಹೆಸರನ್ನೇ ಅಂತಿಮ‌ ಮಾಡಲಾಗಿದೆ.‌‌ ಹೈಕಮಾಂಡ್ ಸಮ್ಮತಿ ಪಡೆದ ನಂತರ ಘೋಷಣೆ ಮಾಡುತ್ತೇವೆ ಎಂದರು.

ಸಭೆಗೆ ಪ್ರಕಾಶ್ ಹುಕ್ಕೇರಿ ಗೈರು:

ಬೆಳಗಾವಿ ಬೈ ಎಲೆಕ್ಷನ್ ಟಿಕೆಟ್ ಬಗ್ಗೆ ನಡೆದ ಸಭೆಗೆ ಆಕಾಂಕ್ಷಿಯಾಗಿರುವ ಪ್ರಕಾಶ್ ಹುಕ್ಕೇರಿ ಗೈರು ಅಸಮಾಧಾನದ ಅನುಮಾನ‌‌ ಮೂಡಿಸಿದೆ. ಬಹುತೇಕ ನಾಯಕರು ಸತೀಶ್ ಜಾರಕಿ ಹೊಳಿಗೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದರಿಂದ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರಾ ಎನ್ನುವ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: CoronaVirus: ಕೊರೋನಾ ಎರಡನೇ ಅಲೆ ಆತಂಕದಲ್ಲೂ ಮಾಸ್ಕ್, ಸಾಮಾಜಿಕ ಅಂತರ ಮರೆತ ಕೊಡಗು ಪ್ರವಾಸಿಗರು

ಬಿಜೆಪಿ ಇಂದ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ, ನಾನು ಚುನಾವಣೆಗೆ ನಿಲ್ಲಲ್ಲ. ಅವರನ್ನ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದ್ರೆ ಕಾಂಗ್ರೆಸ್ ನಿಂದ ನಾನೂ ಕೂಡಾ ಆಕಾಂಕ್ಷಿ' ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಆಂಕಾಕ್ಷಿಯಾಗಿದ್ರೂ ಇಂದಿನ ಸಭೆಗೆ ಗೈರಾಗಿದ್ದಾರೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡಿದರೆ ಬೆಳಗಾವಿ ಚುನಾವಣೆ ಅಖಾಡ ಮತ್ತಷ್ಟು ಕಾವು ಪಡೆದುಕೊಳ್ಳುವುದಂತೂ ಗ್ಯಾರಂಟಿ. ಬಿಜೆಪಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸವುದು ಎನ್ನುವುದರ ಮೇಲೆ‌ ಎಲ್ಲವೂ ನಿರ್ಧಾರವಾಗಲಿದೆ.
Published by:MAshok Kumar
First published: