• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಸಹ್ಯಾದ್ರಿ ಕಾಲೇಜು ಅಭಿವೃದ್ಧಿ ಕಾಮಗಾರಿಗಳಿಗೆ ತಕ್ಷಣ ಒಂದು ಕೋಟಿ ರೂ ಹಣ ಬಿಡುಗಡೆ: ಸಿಎಂ ಯಡಿಯೂರಪ್ಪ

ಸಹ್ಯಾದ್ರಿ ಕಾಲೇಜು ಅಭಿವೃದ್ಧಿ ಕಾಮಗಾರಿಗಳಿಗೆ ತಕ್ಷಣ ಒಂದು ಕೋಟಿ ರೂ ಹಣ ಬಿಡುಗಡೆ: ಸಿಎಂ ಯಡಿಯೂರಪ್ಪ

ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, 2022 ರ ಆರಂಭದಲ್ಲಿ ವಿಮಾನ ಹಾರಾಟ ಆರಂಭಗೊಳ್ಳುವ ನಿರೀಕ್ಷೆ ಹೊಂದಲಾಗಿದೆ

  • Share this:

ಶಿವಮೊಗ್ಗ(ನವೆಂಬರ್​.29): ಸಹ್ಯಾದ್ರಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಸರ್ಕಾರದಿಂದ ನೆರವು ನೀಡುವಂತೆ ಸಿಎಂ ಗೆ ಕುವೆಂಪು ವಿವಿ ವತಿಯಿಂದ ಮನವಿ ಮಾಡಿಕೊಳ್ಳಾಗಿದೆ. ಸಹ್ಯಾದ್ರಿ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕುವೆಂಪು ವಿಶ್ವವಿದ್ಯಾಲಯ ಪ್ರಸ್ತಾವನೆ ಸಲ್ಲಿಸಿದೆ. ಕಾಲೇಜಿನ ಹೊರಾಂಗಣ ಕ್ರೀಡಾಂಗಣ, ಲ್ಯಾಬೋರೇಟರಿ, ಗ್ರಂಥಾಲಯ ಮೊದಲಾದ ವಿಭಾಗದ ಉನ್ನತೀಕರಣ ಕಾಮಗಾರಿಗಳಿಗೆ ಸದ್ಯಕ್ಕೆ ಒಂದು ಕೋಟಿ  ಹಣವನ್ನು ಬಿಡುಗಡೆ ಮಾಡುವ ಬರವಸೆಯನ್ನು ಸಿಎಂ ನೀಡಿದರು. ಶಿವಮೊಗ್ಗ ನಗರದಲ್ಲಿರುವ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ಪ್ರವೇಶ ದ್ವಾರ ಮತ್ತು ವಿದ್ಯಾರ್ಥಿ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು ಕಾಲೇಜಿನ ಹೊರಾಂಗಣ ಕ್ರೀಡಾಂಗಣ, ಲ್ಯಾಬೋರೇಟರಿ, ಗ್ರಂಥಾಲಯ ಮೊದಲಾದ ವಿಭಾಗದ ಉನ್ನತೀಕರಣ ಕಾಮಗಾರಿಗಳಿಗೆ ತಕ್ಷಣಕ್ಕೆ 1 ಕೋಟಿ ಹಣ ಬಿಡುಗಡೆ ಮಾಡುತ್ತೇನೆ, ಅದನ್ನು ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. 


ಸಹ್ಯಾದ್ರಿ ಕಾಲೇಜು 80 ವರ್ಷಗಳ ಸುಧೀರ್ಘ ಇತಿಹಾಸವನ್ನು ಹೊಂದಿದೆ. ಮಲೆನಾಡಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಹ್ಯಾದ್ರಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಕಾಲೇಜುಗಳು ಅನೇಕ ಗಣ್ಯ ಮಹನಿಯರನ್ನು ನಾಡಿಗೆ, ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ  ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟವನ್ನು ಹಾಗೂ ಅವರ ಸೃಜನಶೀಲ ಚಟುವಟಿಕೆಗಳನ್ನು ಸದಾ ಬೆಂಬಲಿಸುತ್ತಾ ಬಂದಿದೆ ಎಂದು ತಿಳಿಸಿದರು.


ವೃತ್ತಿಪರತೆಯನ್ನು ಕೌಶಲಗಳೊಂದಿಗೆ ಕಲಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಹೊಸ ಹೊಸ ವೈಜ್ಞಾನಿಕ ತಿಳುವಳಿಕೆ ಹಾಗೂ ಅರಿವಿನ ವಿಸ್ತಾರಕ್ಕೆ ಪೂರಕವಾಗಿ ಬೆಳೆಯುತ್ತಲೇ ಇರುವ ಸಹ್ಯಾದ್ರಿ ಕಾಲೇಜು ತನ್ನ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕೆ ಪಾರಂಪರಿಕ  ಮಾದರಿಯ ಕಟ್ಟಡ ವಿನ್ಯಾಸಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಹೇಳಿದರು.


ಇನ್ನು ಮಲೆನಾಡು ಭಾಗದ ಪ್ರಮುಖ ನಗರವಾಗಿರುವ ಶಿವಮೊಗ್ಗ ನಗರ ಸೇರಿದಂತೆ ಇಡೀ ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಸ್ತೆ, ಸೇತುವೆಯಂತಹ ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕೃಷಿ ಮತ್ತು ನೀರಾವರಿ ಪ್ರದೇಶ ವಿಸ್ತರಣೆಯಂತಹ ಹತ್ತು ಹಲವು ಕಾಮಗಾರಿಗಳು ಬರದಿಂದ ನಡೆಯುತ್ತಿವೆ. ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, 2022 ರ ಆರಂಭದಲ್ಲಿ ವಿಮಾನ ಹಾರಾಟ ಆರಂಭಗೊಳ್ಳುವ ನಿರೀಕ್ಷೆ ಹೊಂದಲಾಗಿದೆ ಎಂದರು.


ಇದನ್ನೂ ಓದಿ : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅನ್ನೋಕೆ ಸಿದ್ಧರಾಮಯ್ಯ ಯಾರು; ವಿಜಯೇಂದ್ರ ಕಿಡಿ


ವಿಮಾನ ನಿಲ್ದಾಣದ ಮೊದಲ ಹಂತದ ಕಾಮಗಾರಿಗಳಿಗೆ ಈಗಾಗಲೇ 220 ಕೋಟಿ ರೂ. ಮಂಜೂರು ಮಾಡಲಾಗಿದೆ. ಏರ್​ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್-ವೇ ಉದ್ದವನ್ನು 3,200 ಮೀಟರ್ ಗಳಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.


ಶಿವಮೊಗ್ಗ ನಗರದ ಸಂಚಾರ ದಟ್ಟಣೆಯನ್ನು ಸುಧಾರಿಸಲು ಹಲವಾರು ಯೋಜನೆಗಳನ್ನುರೂಪಿಸಲಾಗಿದೆ. 450 ಕೋಟಿ ರೂ.ಗಳ ವೆಚ್ಚದಲ್ಲಿ ಹೊರವರ್ತುಲ ರಸ್ತೆ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಹಲವು ದಶಕಗಳ ಕನಸಾಗಿದ್ದ ಕಳಸವಳ್ಳಿ-ಸಿಗಂದೂರು ಬೃಹತ್ ಸೇತುವೆ ನಿರ್ಮಾಣ ಕಾಮಗಾರಿ 423 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲುಮಾರ್ಗ ನಿರ್ಮಾಣದ ಭೂಸ್ವಾಧೀನ ಕಾರ್ಯ ಚುರುಕಿನಿಂದ ನಡೆಯುತ್ತಿದೆ ಎಂದು ತಿಳಿಸಿದರು. ಶಿವಮೊಗ್ಗ.

Published by:G Hareeshkumar
First published: