ಚಾಮರಾಜನಗರ (ಜೂ. 20); ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸ್ಯಾಟ್ಲೈಟ್ ಫೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಸ್ಯಾಟ್ಲೈಟ್ ಫೋನನ್ನು ನಕ್ಸಲೀಯರು ಬಳಸಿದ್ದಾರಾ ಅಥವಾ ಇನ್ನಿತರ ಸಮಾಜಘಾತುಕ ಶಕ್ತಿಗಳು ಬಳಸಿವೆಯಾ ಎಂಬುದು ಇನ್ನು ಖಚಿತವಾಗಿಲ್ಲ. ಒಟ್ಟಿನಲ್ಲಿ ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದ್ದು, ಈ ಬಗ್ಗೆ ಕೇಂದ್ರ ಆಂತರಿಕ ಭದ್ರತಾ ಪಡೆ, ನಕ್ಸಲ್ ನಿಗ್ರಹ ದಳ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಗಳಿಂದ ತೀವ್ರ ನಿಗಾ ವಹಿಸಲಾಗಿದೆ.
ಮಹದೇಶ್ವರಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟ್ಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಖಚಿತಪಡಿಸಿರುವ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಕಡೆ ಸ್ಯಾಟ್ಲೈಟ್ ಫೋನ್ ಬಳಸಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಕೂಲಂಕಷ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ
ಸ್ಯಾಟ್ಲೈಟ್ ಫೋನ್ಗಳನ್ನು ಒಮ್ಮೊಮ್ಮೆ ವಿದೇಶಿ ಪ್ರಯಾಣಿಕರು ಬಳಸಿರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಯಾರು ಬಳಕೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಮುಂದಿನ ಕ್ರಮ ವಹಿಸಿವುದಾಗಿ ಅವರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ