HOME » NEWS » District » SEARCH FOR A MOTHER WHO IS MISSING THE MOTHER AND SON MET TOGETHER AFTER THREE YEARS RSK HK

ನಾಪತ್ತೆಯಾಗಿದ್ದ ತಾಯಿಗಾಗಿ ಹುಡುಕಿ ಬಂದ ಕರುಳಬಳ್ಳಿ : ಮೂರು ವರ್ಷಗಳ ಬಳಿಕ ಒಂದಾದ ತಾಯಿ ಮಗ

ಕಳೆದು ಹೋದ ತಾಯಿಗಾಗಿ ಮೂರು ವರ್ಷಗಳಿಂದ ಹುಡುಕಾಡಿ ಬೇಸತ್ತಿದ್ದ ಮಗ ಮಹೇಶ್, ನಮ್ಮ ಪಾಲಿಗೆ ನಮ್ಮ ತಾಯಿ ಇನ್ನಿಲ್ಲ ಎಂದುಕೊಂಡಿದ್ದರಂತೆ. ಆದರೆ, ತನಲ್ ಸಂಸ್ಥೆಯು ಇವರಿಗೆ ಕರೆ ಮಾಡಿ ನಿಮ್ಮ ತಾಯಿ ಇದ್ದಾರೆ ಎಂದು ತಿಳಿಸಿದಾಗ ಮಗನ ಸಂತೋಷಕ್ಕೆ ಪಾರವೇ ಇರಲಿಲ್ಲ.

news18-kannada
Updated:October 31, 2020, 7:15 AM IST
ನಾಪತ್ತೆಯಾಗಿದ್ದ ತಾಯಿಗಾಗಿ ಹುಡುಕಿ ಬಂದ ಕರುಳಬಳ್ಳಿ : ಮೂರು ವರ್ಷಗಳ ಬಳಿಕ ಒಂದಾದ ತಾಯಿ ಮಗ
ತಾಯಿ ಮತ್ತು ಮಗ
  • Share this:
ಕೊಡಗು(ಅಕ್ಟೋಬರ್​. 31): ಕನ್ನಡದ ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ತಮ್ಮ ಕಾದಂಬರಿಯಲ್ಲಿ ಸಂಬಂಜ ಅನ್ನೋದು ದೊಡ್ದುಕನಾ ಅಂತಾ ಬರೆದಿದ್ದಾರೆ. ಅದು ಎಂದೆಂದಿಗೂ ಸುಳ್ಳಲ್ಲ ಎನ್ನುವುದು ಸಾಕಷ್ಟು ಬಾರಿ ಸಾಬೀತಾಗಿದೆ. ಅದರಲ್ಲೂ ಕರುಳಬಳ್ಳಿ ಸಂಬಂಧ ಎಷ್ಟೊಂದು ದೊಡ್ಡದು ಎನ್ನೋದನ್ನು ಮೂರು ವರ್ಷಗಳ ಹಿಂದೆ ಕಳೆದುಹೋಗಿ ಮತ್ತೆ ಹೊಂದಾದ ತಾಯಿ ಮಗನ ಈ ಕರುಣಾಜನಕ ಕಥೆ ಇದು. ಹೆತ್ತ ತಾಯಿಯನ್ನು ಹುಡುಕಿಕೊಂಡು ಹಾತೊರೆದು ಬರುತ್ತಿರುವ ಎದೆಯುದ್ದದ ಮಗ. ಲ್ಲಿದ್ದಾಳೋ, ಹೇಗಿದ್ದಾಳೋ ಅಂತಾ, ತನ್ನ ಹಡೆದವ್ವನಿಗಾಗಿ ಮಮ್ಮಲ ಮರುತ್ತಿರುವ ದೃಶ್ಯ. ಕಳೆದ ಮೂರು ವರ್ಷಗಳಿಂದ ತಾಯಿಗಾಗಿ ಹಾತೊರೆಯುತ್ತಿದ್ದ ಮಗನ ಕರುಳಹಿಂಡುವ ಕರುಣಾಜನಕ ದೃಶ್ಯ ಕಂಡಿದ್ದು ಮಡಿಕೇರಿಯಲ್ಲಿ. ತಾಯಿಯ ಕೈ ಕೈ ಹಿಡಿದು ಈಗಲಾದರೂ ಸಿಕ್ಕಿದೆಯಲ್ಲಾ ಎಂದು ಪೇಚಾಡುತ್ತಿರುವ ಮಗ ಮಹೇಶ್ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನ ಸಾಲಿಗ್ರಾಮದವರು. ಮಾನಸಿಕ ಅಸ್ವಸ್ಥರಾಗಿ ಊರಿನಿಂದ ತಪ್ಪಿಸಿಕೊಂಡಿದ್ದ ತಾಯಿ ಪಾರ್ವತಿಗಾಗಿ ಹುಡುಕಾಡದ ಊರುಗಳಿಲ್ಲ.

ತಾಯಿ ಸಿಕ್ಕರೆ ಸಾಕು ಎಂದು ಹರಕೆ ಕಟ್ಟದ ದೇವರುಗಳಿಲ್ಲ. ಆದರೆ ತಪ್ಪಿಸಿಕೊಂಡ ತಾಯಿ ಮಾತ್ರ ಸಿಕ್ಕಿರಲಿಲ್ಲ. ಅದ್ಹೇಗೋ ಮಡಿಕೇರಿಗೆ ಬಂದಿದ್ದ ಮಾನಸಿಕ ಅಸ್ವಸ್ಥರಾದ ಪಾರ್ವತಿ ಬೀದಿ ಬೀದಿಗಳಲ್ಲಿ ಓಡಾಡಿಕೊಂಡಿದ್ದರು. ಇದನ್ನು ಗಮನಿಸಿದ್ದ ಮಡಿಕೇರಿ ಪೊಲೀಸರು ತಲನ್ ಸಂಸ್ಥೆಯ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಅಂದಿನಿಂದ ಇವರನ್ನು ಶುಶ್ರೂಷೆ ಮಾಡುತ್ತಾ, ಚಿಕಿತ್ಸೆ ನೀಡುತ್ತಿದ್ದ ತನಲ್ ಸಂಸ್ಥೆ, ಇವರ ಹೆಸರು ಗೊತ್ತಾಗದೆ ಜಲಜಾ ಎನ್ನುವ ಹೆಸರಿಟ್ಟು ಸಲಹುತಿದ್ದರು. ತನ್ನ ನಿಯಮದ ಪ್ರಕಾರ ತನಲ್ ಸಂಸ್ಥೆ ಮುಖಂಡರು ಕೊನೆಗೂ ಪಾರ್ವತಿ ಅವರ ವಿಳಾಸ ಹುಡುಕಿ ತಾಯಿ ಮಕ್ಕಳನ್ನು ಹೊಂದಾಗಿಸಿದ್ದೇವೆ ಎನ್ನುತ್ತಾರೆ ಮೊಹಮ್ಮದ್.

ಇದನ್ನೂ ಓದಿ : ಕೋತಿಗೂ ನಾಯಿ ಮರಿಗೂ ಗೆಳೆತನ ; ನಾಯಿಯನ್ನು ತನ್ನ ಮಡಿಲಲ್ಲಿ ಹೊತ್ತೊಯ್ತಿರೋ ಕೋತಿ

ಕಳೆದು ಹೋದ ತಾಯಿಗಾಗಿ ಮೂರು ವರ್ಷಗಳಿಂದ ಹುಡುಕಾಡಿ ಬೇಸತ್ತಿದ್ದ ಮಗ ಮಹೇಶ್, ನಮ್ಮ ಪಾಲಿಗೆ ನಮ್ಮ ತಾಯಿ ಇನ್ನಿಲ್ಲ ಎಂದುಕೊಂಡಿದ್ದರಂತೆ. ಆದರೆ, ತನಲ್ ಸಂಸ್ಥೆಯು ಇವರಿಗೆ ಕರೆ ಮಾಡಿ ನಿಮ್ಮ ತಾಯಿ ಇದ್ದಾರೆ ಎಂದು ತಿಳಿಸಿದಾಗ ಹೆತ್ತವ್ವನಿಗಾಗಿ ಹಗಲುರಾತ್ರಿ ಹುಡುಕಾಡುತ್ತಿದ್ದ ಮಗನ ಸಂತೋಷಕ್ಕೆ ಪಾರವೇ ಇರಲಿಲ್ಲ. ಕೊನೆಗೂ ತನ್ನ ತಾಯಿ ಸಿಕ್ಕಳಲ್ಲಾ ಎಂದು ಸಾಲಿಗ್ರಾಮದಿಂದ ಮಡಿಕೇರಿಗೆ ಬಂದು ಇಂದು ತನ್ನ ತಾಯಿಯನ್ನು ಮನೆಗೆ ಕರೆದೊಯ್ದಿದ್ದಾರೆ. ನನ್ನ ತಾಯಿಯನ್ನು ಇನ್ನೆಂದೂ ಮಿಸ್ ಆಗದ ಹಾಗೆ ಕಣ್ಣಿಟ್ಟುನೋಡಿಕೊಳ್ಳುತೇನೆ ಎನ್ನುವಾಗ ಮಹೇಶ್ ಗದ್ಗತಿರಾಗಿದ್ದರು.

ಇವರಂತೆಯೇ ತನಲ್ ಸಂಸ್ಥೆಯಲ್ಲಿರುವ ಇನ್ನೂ ಹಲವರು, ಇಂದು ಸಂಸ್ಥೆ ಬಿಟ್ಟು ತಮ್ಮ ಮನೆಗೆ ಹೋಗುತ್ತಿದ್ದ ಪಾರ್ವತಿಗೆ, ಹೊರಗೆ ನಿಂತು ಕೈಬೀಸಿ ಬೀಳ್ಕೊಡುತ್ತಿದ್ದರು. ಮತ್ತೊಂದೆಡೆ ನಮ್ಮವರೂ ಯಾರದರೂ ನಮ್ಮನ್ನು ಮನೆಗೆ ಕರೆದೊಯ್ಯಲು ಬರಬಹುದಾ ಎನ್ನುವ ಆಸೆಗಣ್ಣಿನಿಂದಲೇ ದಾರಿ ಎದುರು ನೋಡುತ್ತಿದ್ದರು.
Published by: G Hareeshkumar
First published: October 30, 2020, 11:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories