Sexual Harassment: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ ಪಟ್ಟಣದ ಮೇಗಲ ಉಪ್ಪಾರ ಬೀದಿಯ ನಿವಾಸಿ ಚಂದ್ರು ಅಲಿಯಾಸ್ ಚಂದ್ರಶೇಖರ್ ಮೋಟರ್ ಬೈಕ್ ಷೋ ರೂಂವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು  ಈತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ  ಆಕೆಯ ಹಿಂದೆ ಬಿದ್ದಿದ್ದ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಚಾಮರಾಜನಗರ (ಸೆ.15): ಲವ್ ಮಾಡುವುದಾಗಿ ಅಪ್ರಾಪ್ತ ಬಾಲಕಿಯ(Minor Girl) ಹಿಂದೆ ಬಿದ್ದು ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ(Sexual Harassment)  ಎಸಗಿದ್ದ ಯುವಕನಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 6.25 ಲಕ್ಷ ರೂಪಾಯಿ ದಂಡ ವಿಧಿಸಿ ಚಾಮರಾಜನಗರ(chamarajanagar) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವವನ್ನು ವಿಧಿಸಲಾಗಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 7.5 ಲಕ್ಷ ರೂಪಾಯಿ ಪರಿಹಾರ ರೂಪದಲ್ಲಿ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ. ಚಾಮರಾಜನಗರದ  ಮೇಗಲ ಉಪ್ಪಾರ ಬೀದಿಯ ಚಂದ್ರು ಅಲಿಯಾಸ್ ಚಂದ್ರಶೇಖರ್ ಹಾಗೂ ಕೋಡಿಮೋಳೆ ಗ್ರಾಮದ ಮಹದೇವಮ್ಮ ಎಂಬಾಕೆ  ಕಠಿಣ ಶಿಕ್ಷೆಗೆರೆ ಗುರಿಯಾದ ಆರೋಪಿಗಳಾಗಿದ್ದಾರೆ.

ಪ್ರಕರಣದ ವಿವರ:

ಚಾಮರಾಜನಗರ ಪಟ್ಟಣದ ಮೇಗಲ ಉಪ್ಪಾರ ಬೀದಿಯ ನಿವಾಸಿ ಚಂದ್ರು ಅಲಿಯಾಸ್ ಚಂದ್ರಶೇಖರ್ ಮೋಟರ್ ಬೈಕ್ ಷೋ ರೂಂವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು  ಈತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ  ಆಕೆಯ ಹಿಂದೆ ಬಿದ್ದಿದ್ದ.  ಪ್ರತಿ ದಿನ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ತಾನು ಸಹ ಅದೇ ಬಸ್ ಹತ್ತಿ ಆಕೆಯನ್ನು ಮಾತನಾಡಿಸುವುದು, ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳುವುದು ಮಾಡುತ್ತಿದ್ದ   ಚಂದ್ರು 2018ರ ಜುಲೈ 11 ರಂದು ಬಾಲಕಿ  ಶಾಲೆಗೆ ಹೋಗುತ್ತಿದ್ದಾಗ ಆಕೆಯನ್ನು ಶಾಲೆಯ ಬಳಿ ಇಳಿಯಲು ಬಿಡದೆ  ಮದುವೆಯಾಗುವುದಾಗಿ ಪುಸಲಾಯಿಸಿ ತನ್ನ ಜೊತೆಯಲ್ಲಿ ಬಲವಂತಾಗಿ ಕರೆದೊಯ್ದು ಕೋಡಿಮೋಳಿಯ  ಮಹದೇವಮ್ಮ ಎಂಬುವರ ಮನೆಯಲ್ಲಿ  ಇರಿಸಿದ್ದ. ಬಾಲಕಿ ಅಪ್ರಾಪ್ತೆ ಎಂದು ಗೊತ್ತಿದ್ದರೂ ಮಹದೇವಮ್ಮ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದಳು. ಈ ವೇಳೆ ಚಂದ್ರು ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ವಿಷಯ ತಿಳಿದು ಬಾಲಕಿಯ ತಾಯಿ ಚಾಮರಾಜನಗರ  ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ  ಪೊಲೀಸರು ಆರೋಪಿ ಚಂದ್ರವನ್ನು ಬಂಧಿಸಿ ಐಪಿಸಿ ಕಲಂ  114,341,363,366,368,376 ಹಾಗು ಪೋಕ್ಸೋ ಕಾಯ್ದೆ ಕಲಂ 4, 8, 12, 17 ರ ಅಡಿಯಲ್ಲಿ ಪ್ರಧಾನ ಜಿಲ್ಲಾ   ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನ್ ಪುರಿ  ಅವರು ಆರೋಪಿಗಳ ಮೇಲಿನ ಆರೋಪ ಸಾಕ್ಷ್ಯಾಧಾರ  ಹಾಗು ವೈದ್ಯಕೀಯ ಪರೀಕ್ಷಾ  ವರದಿಗಳಿಂದ  ಸಾಭೀತಾದ ಕಾರಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಮೊದಲ ಆರೋಪಿ ಚಂದ್ರುಗೆ ವಿಧಿಸಲಾಗಿರುವ 6.25 ಲಕ್ಷ ರೂಪಾಯಿ ದಂಡ ತೆರಲು ತಪ್ಪಿದಲ್ಲಿ ಮತ್ತೆ ಎರಡು ವರ್ಷ ಸಾದಾ ಶಿಕ್ಷೆ ಹಾಗೂ ಎರಡನೇ ಆರೋಪಿ ಮಹದೇವಮ್ಮಗೆ ವಿಧಿಸಲಾಗಿರುವ  2 ಲಕ್ಷ ರೂಪಾಯಿ ದಂತ ತೆರಲು ವಿಫಲಳಾದಲ್ಲಿ ಮತ್ತೆ  ಒಂದು ವರ್ಷ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.

ಇದನ್ನೂ ಓದಿ:DK Shivakumar: ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ವಾರೆಂಟ್ ಜಾರಿ ಮಾಡಿದ ಸುಳ್ಯ ನ್ಯಾಯಾಲಯ

ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Latha CG
First published: