ಫರ್ಮಾಸ್ಯುಟಿಕಲ್ ವಿತರಕಿಗೆ ಲೈಂಗಿಕ ಕಿರುಕುಳ ಆರೋಪ: ಹುಬ್ಬಳ್ಳಿ- ಧಾರವಾಡ ಪಾಲಿಕೆ ವೈದ್ಯಾಧಿಕಾರಿ ಮೇಲೆ ಹಲ್ಲೆ

ಇನ್ನೊಂದೆಡೆ ವೈದ್ಯಾಧಿಕಾರಿಯ ಬಂಧನಕ್ಕೆ ವಿರೋಧ ವ್ಯಕ್ತವಾಗಿದೆ.  ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

news18-kannada
Updated:June 20, 2020, 4:57 PM IST
ಫರ್ಮಾಸ್ಯುಟಿಕಲ್ ವಿತರಕಿಗೆ ಲೈಂಗಿಕ ಕಿರುಕುಳ ಆರೋಪ: ಹುಬ್ಬಳ್ಳಿ- ಧಾರವಾಡ ಪಾಲಿಕೆ ವೈದ್ಯಾಧಿಕಾರಿ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ.
  • Share this:
ಹುಬ್ಬಳ್ಳಿ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವೈದ್ಯಾಧಿಕಾರಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಫಾರ್ಮಾಸಿಟಿಕಲ್ ಏಜೆನ್ಸಿ ನಡೆಸುವ ಮಹಿಳೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವೈದ್ಯಾಧಿಕಾರಿ ಡಾ.‌ ಪ್ರಭು ಬಿರಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ.

ಮಹಿಳೆ‌ ಮಹಾನಗ ಪಾಲಿಕೆಯ ಆಸ್ಪತ್ರೆಗೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿದ್ದಾರೆ. ಬಿಲ್ ಕೇಳಲು ಹೋದಾಗ ವೈದ್ಯಾಧಿಕಾರಿ ಮಂಚಕ್ಕೆ ಕರೆದಿದ್ದಾರೆಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ಈ ವಿಷಯ ತಿಳಿಸಿದ್ದಾರೆ‌. ಹೀಗಾಗಿ ಮಹಾನಗರ ಪಾಲಿಕೆ ಆವರಣದ ಚಿಟಗುಪ್ಪಿ ಆಸ್ಪತ್ರೆ ಎದುರು ಜಮಾಯಿಸಿದ ಮಹಿಳೆಯ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಅಲ್ಲದೆ, ವೈದ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಉಪನಗರ ಠಾಣೆ ಪೊಲೀಸರು ಡಾ. ಪ್ರಭು ಬಿರಾದರ್‌ ಅವರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 354 A, D ಮತ್ತು 506 ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದೆಡೆ ವೈದ್ಯಾಧಿಕಾರಿಯ ಬಂಧನಕ್ಕೆ ವಿರೋಧ ವ್ಯಕ್ತವಾಗಿದೆ.  ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಎದುರು ಚಿಟಗುಪ್ಪಿ ಆಸ್ಪತ್ರೆ ಸಿಬ್ಬಂದಿ ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಚೀನಾ ಭಾರತದ ಗಡಿ ದಾಟಿಲ್ಲ ಎಂದರೇ ಘರ್ಷಣೆ ಏತಕ್ಕೆ? 20 ಭಾರತೀಯ ಸೈನಿಕರು ಸತ್ತದ್ದು ಹೇಗೆ?; ಮೋದಿಗೆ ಚಿದಂಬರಂ ಪ್ರಶ್ನೆ
ಸುಳ್ಳು ಆರೋಪ ಹೊರಿಸಿ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ. ಹಲ್ಲೆಕೋರರ ವಿರುದ್ಧವೂ ದೂರು ದಾಖಲಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪಾಲಿಕೆ ಆಯುಕ್ತರು ಮತ್ತು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
First published: June 20, 2020, 4:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading