• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆಗೆ ಲೈಂಗಿಕ ಕಿರುಕುಳ; ಆರೋಪಿಯನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆಗೆ ಲೈಂಗಿಕ ಕಿರುಕುಳ; ಆರೋಪಿಯನ್ನು ಬಂಧಿಸಿದ ಪೊಲೀಸರು

ಆರೋಪಿ

ಆರೋಪಿ

ಆಸ್ಪತ್ರೆಯಲ್ಲಿಯೇ ಮಹಿಳೆಯ ಮೇಲೆ ಸಿಬ್ಬಂದಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ವಾರ್ಡ್ ಬಾಯ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರಲಾಗಿತ್ತು.

  • Share this:

ಹುಬ್ಬಳ್ಳಿ (ಜೂನ್ 01); ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಹಿನ್ನೆಲೆಯಲ್ಲಿ ಸಿಬ್ಬಂದಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಅಶೋಕ್ ಹಲಗಿ(20) ಬಂಧಿ ವ್ಯಕ್ತಿಯಾಗಿದ್ದಾನೆ. ಪಾರ್ಶ್ವವಾಯು ಪೀಡಿತೆ, ಕೊರೋನಾ ಸೋಂಕಿಗೆ ಗುರಿಯಾಗಿದ್ದ ಸಿರಗುಪ್ಪ ಮೂಲದ 52 ವರ್ಷದ ಮಹಿಳೆಯನ್ನು ವಿದ್ಯಾನಗರದ ಇರೋ ಬಾಲಾಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಮಹಿಳೆಯ ಮೇಲೆ ಸಿಬ್ಬಂದಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ವಾರ್ಡ್ ಬಾಯ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರಲಾಗಿತ್ತು. ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಹಿಳೆಯ ಮಗ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಆದರೆ ಈ ವಿಷಯವನ್ನು ಆಸ್ಪತ್ರೆಯ ಮುಖ್ಯಸ್ಥ ಡಾ. ಕ್ರಾಂತಿ ಕಿರಣ್ ಅಲ್ಲಗಳೆದಿದ್ದರು. ನಮ್ಮ ಆಸ್ಪತ್ರೆಯಲ್ಲಿ ಈ ರೀತಿಯ ಘಟನೆ ನಡೆದೇ ಇಲ್ಲ. ಇಲ್ಲಿರೋ ಸಿಬ್ಬಂದಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿರಲು ಸಾಧ್ಯವಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ. ಸಿಸಿ ಕ್ಯಾಮರಾ ಸೇರಿದಂತೆ ಎಲ್ಲಿಯೂ ಈ ರೀತಿಯ ಅನುಚಿತ ವರ್ತನೆ ಕಂಡು ಬಂದಿಲ್ಲ ಎಂದಿದ್ದರು.


ಇದನ್ನು ಇಲ್ಲಿಗೇ ಮರೆತುಬಿಡಿ ಎಂದು ಮಹಿಳೆ ಪುತ್ರನಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಆದರೆ ಮಹಿಳೆಯ ಪುತ್ರ ನೀಡಿದ ದೂರಿನ ಆಧಾರದ ಮೇಲೆ ವಿದ್ಯಾನಗರ ಠಾಣೆ ಪೊಲೀಸರು ಆರೋಪಿ ಸಿಬ್ಬಂದಿಯನ್ನು ಬಂಧಿಸಿ, ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಬ್ಲಾಕ್​ ಫಂಗಸ್​: ಭಾರತದ ನೀತಿಯನ್ನು ಪ್ರಶ್ನಿಸಿ ಕೇಂದ್ರದ ಎದುರು 3 ಪ್ರಶ್ನೆಗಳನ್ನಿಟ್ಟ ರಾಹುಲ್ ಗಾಂಧಿ!


ಮತ್ತೆ ಮದ್ಯ ಮಾರಾಟ, ಹೋಟೆಲ್ ಪಾರ್ಸಲ್ ಗೆ ಅವಕಾಶ:


ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಧಾರವಾಡ ಜಿಲ್ಲೆಯಲ್ಲಿ ಫುಲ್ ಲಾಕ್ ಡೌನ್ ಮತ್ತು 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದೀಗ ನಿಷೇಧಾಜ್ಞೆ ಜಾರಿಯ ನಂತರ ಧಾರವಾಡ ಜಿಲ್ಲೆಯಲ್ಲಿ ಹೋಟೆಲ್ ಗಳ ಪಾರ್ಸಲ್ ವ್ಯವಸ್ಥೆ ಹಾಗೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಹೋಟೆಲ್ ಮಾಲೀಕರ ಸಂಘದ ಮನವಿ ಮೇರೆಗೆ ಎರಡಕ್ಕೂ ಬೆಳಗಿನ ವೇಳೆಯಲ್ಲಿ ಅವಕಾಶ ನೀಡಲಾಗಿದೆ. ಹಣ್ಣು, ತರಕಾರಿಕೆ ಅವಕಾಶ ನೀಡಿದ ಅವಧಿಯಲ್ಲಿಯೇ ಮದ್ಯ ಮಾರಾಟಕ್ಕೆ ಕಾಲಾವಕಾಶ ಕಲ್ಪಿಸಲಾಗಿದೆ. ಹೋಟೆಲ್ ಪಾರ್ಸಲ್ ಗೆ ಮಾತ್ರ ಸಮಯದ ನಿರ್ಬಂಧ ಹಾಕಿಲ್ಲ. ಆದರೆ, ತರಕಾರಿ ಮಾರಾಟಕ್ಕೆ ಮತ್ತಷ್ಟು ಸಮಯ ನೀಡಬೇಕು ಎಂಬ ಕೂಗು ಸಹ ಕೇಳಿ ಬರುತ್ತಿದೆ.


ಇದನ್ನೂ ಓದಿ: Karnataka Covid Death: ರಾಜ್ಯದಲ್ಲಿ ಇಳಿಯುತ್ತಿರುವ ಕೊರೋನಾ ಕೇಸ್; ಇಂದು 14,304 ಜನರಲ್ಲಿ ಸೋಂಕು ಪತ್ತೆ, 464 ಜನ ಸಾವು!


ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಬೆಳಿಗ್ಗೆಯೇ ಅಂಗಡಿಗಳ ಮುಂದೆ ಸರತಿಯಲ್ಲಿ ನಿಂತಿದ್ದರು. ಹುಬ್ಬಳ್ಳಿಯ ಬಹುತೇಕ ಕಡೆ ಸರತಿಯಲ್ಲಿ ನಿಂತು ಮದ್ಯ ಖರೀದಿಸಿದ ದೃಶ್ಯಗಳು ಕಂಡು ಬಂದಿತು. ಸಾಮಾಜಿಕ ಅಂತರದಲ್ಲಿ ನಿಂತು ಜನ ಮದ್ಯ ಖರೀದಿಸಿಕೊಂಡು ಹೋದರು. ಇಂದಿನಿಂದ ಹೋಟೆಲ್ ಪಾರ್ಸಲ್ ಜೊತೆಗೆ ಮದ್ಯದ ಅಂಗಡಿಗಳಿಗೂ ಅನುಮತಿ ಕೊಟ್ಟಿರೋದ್ರಿಂದ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ.


(ವರದಿ - ಶಿವರಾಮ ಅಸುಂಡಿ)


ನ್ಯೂಸ್​​​18 ಕನ್ನಡ ಕಳಕಳಿ : ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

First published: