HOME » NEWS » District » SHIPPING TO A NEIGHBORING STATE OF RATION RICE ILLEGAL EXPOSE FROM FOOD DEPARTMENT RAID HK

ಪಡಿತರ ಅಕ್ಕಿ ನೆರೆ ರಾಜ್ಯದ ಪಾಲು ; ಆಹಾರ ಇಲಾಖೆ ದಾಳಿಯಿಂದ ಬಯಲಾದ ಅಕ್ರಮ..!

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 88 ಕ್ವಿಂಟಾಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

news18-kannada
Updated:June 25, 2020, 6:58 PM IST
ಪಡಿತರ ಅಕ್ಕಿ ನೆರೆ ರಾಜ್ಯದ ಪಾಲು ; ಆಹಾರ ಇಲಾಖೆ ದಾಳಿಯಿಂದ ಬಯಲಾದ ಅಕ್ರಮ..!
ವಶಪಡಿಸಿಕೊಂಡ ಅಕ್ಕಿ
  • Share this:
ಬೆಳಗಾವಿ(ಜೂ.25): ಕೊರೋನಾ ವೈರಸ್ ಮಾಹಾಮಾರಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿತ್ತು. ಇಂತಹ ಕಷ್ಟದ ಸಂದರ್ಭದಲ್ಲಿ ಬಡವರ ಅನಕೂಲಕ್ಕಾಗಿ ರಾಜ್ಯ ಸರ್ಕಾರ 3 ತಿಂಗಳ ಮುಂಗಡ ಪಡಿತರ ವಿತರಣೆ ಮಾಡಿತ್ತು. ಬಡವರಿಗೆ ಅಕ್ಕಿ, ಗೋಧಿ ಹಾಗೂ ಬೆಳೆಯನ್ನು ನ್ಯಾಯ ಬೆಲೆ ಅಂಗಡಿಗಳ ಮೂಲಕ ನೀಡಲಾಗಿತ್ತು. ಈ ಪಡಿತರ ಅಕ್ಕಿ ನೆರೆ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಆಗಿದೆ.

ಮಹಾರಾಷ್ಟ್ರಕ್ಕೆ ಬೆಳಗಾವಿಯಿಂದ ಬಡವರಿಗೆ ನೀಡಿದ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟವಾಗಿದೆ.  ಇಲ್ಲಿ ಕಡಿಮೆ ಬೆಲೆಗೆ ಧಾನ್ಯವನ್ನು ಖರಿದೀಸಿ ಹೆಚ್ಚಿನ ಬೆಲೆಗೆ ಮಹಾರಾಷ್ಟ್ರದಲ್ಲಿ ಮಾರಾಟ ಮಾಡಿದ್ದಾರೆ. ಬೆಳಗಾವಿಯಲ್ಲಿ ಇಂತಹ ಮೂರು ಪ್ರಕರಣಗಳು ಸದ್ಯ ಬೆಳಕಿಗೆ ಬಂದಿವೆ.

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 88 ಕ್ವಿಂಟಾಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಒಟ್ಟು ಮೂರು ದಾಳಿ ಮಾಡಿ 88 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಅಥಣಿ ತಾಲೂಕಿನ ಮೂರು ಕಡೆಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮೂರು ಜನರ ವಿರುದ್ಧ ಅಕ್ರಮ ಅಕ್ಕಿ ಸಾಗಾಟ ಸಂಬಂಧ ಪ್ರಕರಣ ದಾಖಲಾಗಿದೆ. ಅಕ್ಕಿಯನ್ನು ಸಾಗಾಟ ಸಂಬಂಧ ಗೊಡೌನ್ ನಲ್ಲಿ ಸಂಗ್ರಹಿಸಲಾಗಿತ್ತು. ಅಧಿಕಾರಿಗಳು ಗೋಡೌನ್ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ನೆರವಾಗುವ ದೃಷ್ಠಿಯಿಂದ ಸರ್ಕಾರ ಅಕ್ಕಿ, ಬೆಳೆ ಹಾಗೂ ಗೋಧಿಯನ್ನು ವಿತರಣೆ ಮಾಡಿತ್ತು. ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿಗೆ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಇದನ್ನು ದಂಧೆಕೋರರು ಅಕ್ರಮವಾಗಿ ಸಾಗಾಟಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ : ಕೊರೋನಾ ಆತಂಕದ ನಡುವೆ ಆನೇಕಲ್​​ನಲ್ಲಿ ಯಶಸ್ವಿಯಾಗಿ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆ

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ನಡುವಿನ ಜನರ ಓಡಾಟಕ್ಕೆ ಪಾಸ್ ಕಡ್ಡಾಯ ಮಾಡಲಾಗಿದೆ. ಆದರೆ, ಆಹಾರ ಸಾಮಗ್ರಿಗಳ ಸಾಗಾಟಕ್ಕೆ ಯಾವುದೇ ಅಡೆತಡೆ ಇಲ್ಲ. ಹೀಗಾಗಿ ಇದನ್ನು ಬಳಸಿಕೊಂಡ ದಂಧೆಕೋರರು ಅಕ್ರಮ ಅಕ್ಕಿಯನ್ನು ಸಾಗಾಟ ಮಾಡಿ ಇದೀಗ ಸಿಕ್ಕಿ ಬಿದ್ದಿದ್ದಾರೆ.

 

ಅಕ್ರಮ ಧಾನ್ಯ ಸಾಗಾಟ ಸಂಬಂಧ ರಾಜ್ಯದ ಅಧಿಕಾರಿಗಳು ಕರ್ನಾಟಕ- ಮಹಾರಾಷ್ಟ್ರ ಹಾಗೂ ಕರ್ನಾಟಕ- ಗೋವಾ ನಡುವೆ ಮತ್ತಷ್ಟು ಬೀಗಿ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.
First published: June 25, 2020, 6:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading