• Home
  • »
  • News
  • »
  • district
  • »
  • ಯಡಿಯೂರಪ್ಪ ಕೆಜಿಪಿಯಿಂದ ವಾಸ್ಸಾಗದಿದ್ದಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿತ್ತಾ?: ಸುಂದರೇಶ್ ಪ್ರಶ್ನೆ

ಯಡಿಯೂರಪ್ಪ ಕೆಜಿಪಿಯಿಂದ ವಾಸ್ಸಾಗದಿದ್ದಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿತ್ತಾ?: ಸುಂದರೇಶ್ ಪ್ರಶ್ನೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್

ಯಡಿಯೂರಪ್ಪ ಕೆಜೆಪಿ ಬಿಟ್ಟು ಬಿಜೆಪಿಗೆ ಬಾರದೇ ಹೋಗಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿತ್ತಾ? ಬಿಜೆಪಿಗೆ ಈಗಲೂ ತಾಕತ್ತಿದ್ದರೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ನೋಡಲಿ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸವಾಲು ಹಾಕಿದ್ದಾರೆ.

ಮುಂದೆ ಓದಿ ...
  • Share this:

ಶಿವಮೊಗ್ಗ(ಆ. 27): ಸಚಿವ ಈಶ್ವರಪ್ಪ ವಿರುದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಸುಂದರೇಶ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಹೆಚ್.ಎಸ್. ಸುಂದರೇಶ್, ಈಶ್ವರಪ್ಪ ಹೇಳಿಕೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ ನಾಯಕತ್ವ ಇಲ್ಲ, ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಖಾರದ ಪ್ರತಿಕ್ರಿಯೆ ನೀಡಿದ್ದಾರೆ.


ಯಡಿಯೂರಪ್ಪ ಕೆಜೆಪಿ ಬಿಟ್ಟು ಬಿಜೆಪಿಗೆ ಬಾರದೇ ಹೋಗಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿತ್ತಾ ಎಂದು ಈಶ್ವರಪ್ಪಗೆ ಸುಂದರೇಶ್ ಪ್ರಶ್ನೆ ಮಾಡಿದರು. ಬಿಜೆಪಿಗೆ ಈಗಲೂ ತಾಕತ್ತಿದ್ದರೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ನೋಡಲಿ ಎಂದು ಸವಾಲು ಹಾಕಿದರು.


ಬಿಜೆಪಿಯಲ್ಲಿಯೂ ಕೂಡ ಯಡಿಯೂರಪ್ಪರನ್ನು ಹೊರತುಪಡಿಸಿ ನಾಯಕತ್ವದ ಕೊರತೆ ಇದೆ. ಈಶ್ವರಪ್ಪ ಕೇವಲ ಬೇಡವಾದ ಸಂಗತಿಗಳನ್ನೇ ಮಾತನಾಡುತ್ತಾ ಬರುತ್ತಿದ್ದಾರೆ. ಈಶ್ವರಪ್ಪ ಕೇವಲ ಬಾಲಿಷ ಹೇಳಿಕೆಗಳನ್ನು ನೀಡುತ್ತಾ ಎಲ್ಲಾ ವಿಚಾರಗಳಲ್ಲಿಯೂ ರಾಜಕೀಯ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದರು.


ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ಪಿಂಚಣಿ ಯೋಜನೆಗೆ ಹಸಿರು ನಿಶಾನೆ ತೋರಿದ ಸಚಿವ ಕೆ.ಸುಧಾಕರ್


70 ವರ್ಷದಿಂದ ಆಡಳಿತ ನಡೆಸಿಕೊಂಡು ಬಂದಿರುವ ಕಾಂಗ್ರೆಸ್​ಗೆ ನಾಯಕತ್ವ ಇಲ್ಲ ಎಂದು ಹೇಳುವ ಈಶ್ವರಪ್ಪ ಕೇವಲ ಸುಳ್ಳು ಹೇಳಿಕೊಂಡೇ ಓಡಾಡುತ್ತಿದ್ದಾರೆ. ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಜನರು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದು ಹೆಚ್.ಎಸ್. ಸುಂದರೇಶ್ ಅಭಿಪ್ರಾಯ ಪಟ್ಟರು.
ಯಡಿಯೂರಪ್ಪ ಅವರಿಂದಲೇ ಕರ್ನಾಕ ರಾಜ್ಯದಲ್ಲಿ ಇಂದು ಬಿಜೆಪಿ ಅಧಿಕಾರದಲ್ಲಿದೆ. ಅವರನ್ನು ಕೈ ಬಿಟ್ಟು ನೋಡಲಿ, ಬಿಜೆಪಿಗೆ 40 ಸೀಟಲ್ಲ, 35 ಸೀಟುಗಳನ್ನು ಕೂಡ ಗೆಲ್ಲುವುದಕ್ಕೆ ಆಗೋಲ್ಲ ಎಂದು ಲೇವಡಿ ಮಾಡಿದರು.


ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಭಾವೈಕ್ಯತೆಯ ಸಂದೇಶ; ಒಂದೇ ಪೆಂಡಾಲ್‌ನಲ್ಲಿ ಗಣೇಶ ಮೂರ್ತಿ, ಮೊಹರಂ ಪಂಜಾಗಳ ಪ್ರತಿಷ್ಠಾಪಣೆ‌


ರಾಜಕೀಯ ಕ್ಷೇತ್ರದಲ್ಲಿ ಎಲ್ಲಾ ವರ್ಗದವರಿಗೆ ಅವಕಾಶ ಸಿಗಬೇಕು ಎಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಸಮಯದಲ್ಲಿ ಮೀಸಲಾತಿ ಜಾರಿಗೆ ತಂದಿತ್ತು. ಇದರಿಂದಾಗಿ ಎಲ್ಲಾ ವರ್ಗದವರು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿತ್ತು. ಅದರೆ ಬಿಜೆಪಿ ಮೀಸಲಾತಿ ವಿರೋಧಿಯಾಗಿದೆ ಎಂದು ಶಿವಮೊಗ್ಗ ಕಾಂಗ್ರೆಸ್ ಅಧ್ಯಕ್ಷರು ಟೀಕಿಸಿದರು.


ಗ್ರಾಮ ಪಂಚಾಯತ್ ಚುನಾವಣೆಗೆ ಸೂಕ್ತ ರೀತಿಯಲ್ಲಿ ಮೀಸಲಾತಿ ಪ್ರಕಟಿಸಿಲ್ಲ.  ಈ ಬಾರಿಯ ಗ್ರಾಮ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಆಗ್ರಹಿಸಿದರು.


ಇದನ್ನೂ ಓದಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಇನ್ಸ್​ಪೆಕ್ಟರ್​; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ನ್ಯಾಯಾಲಯ


ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ವರ್ಷ ನೆರೆಯಿಂದ ಆಸ್ತಿ ಕಳೆದುಕೊಂಡಿದ್ದ ಜನರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ ಸುಂದರೇಶ್, ಮೊದಲು ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿ ಎಂದು ಒತ್ತಾಯಿಸಿದರು.


ವರದಿ: ಹೆಚ್.ಆರ್. ನಾಗರಾಜ

Published by:Vijayasarthy SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು