ಶಿವಮೊಗ್ಗದಲ್ಲಿ ಕೊರೋನಾ ವ್ಯಾಪಕ - ನಾಳೆಯಿಂದ ಅರ್ಧ ದಿನ ಲಾಕ್ ಡೌನ್ ; ವ್ಯಾಪಾರ ವಹಿವಾಟಿಗೆ ಷರತ್ತುಬದ್ಧ ಅನುಮತಿ

ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲೀಕರ ಜವಾಬ್ದಾರಿಯಾಗಿದೆ.

ಉಸ್ತುವಾರಿ ಸಚಿಬ ಕೆ ಎಸ್ ಈಶ್ವರಪ್ಪ

ಉಸ್ತುವಾರಿ ಸಚಿಬ ಕೆ ಎಸ್ ಈಶ್ವರಪ್ಪ

  • Share this:
ಶಿವಮೊಗ್ಗ(ಜುಲೈ.15): ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿವೆ. ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಜುಲೈ 16 ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿ ಕೊಡಲು ತೀರ್ಮಾನಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2 ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲೀಕರ ಜವಾಬ್ದಾರಿಯಾಗಿದೆ.

ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸಭೆಯಲ್ಲಿ ಸೂಚಿಸಲಾಗಿದೆ.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ‌ಸಚಿವರು ಸೂಚಿಸಿದ್ದಾರೆ.

ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲಿಕರ ಸಂಘ, ಅಟೋ ಕಾಂಪ್ಲೆಕ್ಸ್ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲಿಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ : Coronavirus Latest Updates : ಬೀದರ್ ಸಂಸದ ಭಗವಂತ ಖೂಬಾಗೆ ಸೋಂಕು ; ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಸಹೋದರನನ್ನೂ ನೀಡದ ಕೊರೋನಾ

ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್​ನಲ್ಲಿ ಸಂಜೆ 6 ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಇತ್ಯಾದಿ ಸಲಹೆಗಳನ್ನು ಸಾರ್ವಜನಿಕರು ನೀಡಿದರು.

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.
Published by:G Hareeshkumar
First published: