ಶಿವಮೊಗ್ಗ; ಭ್ರೂಣ ಹತ್ಯೆ ನಿಗಾ ವಹಿಸಲು ಸ್ಕ್ಯಾನಿಂಗ್ ಸೆಂಟರ್​ಗಳ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ

ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ  ಅಧಿಕಾರಿಗಳು ಸಭೆ ನಡೆಸಿದರು. ಪಿಸಿಪಿಎಂಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

news18-kannada
Updated:November 21, 2020, 4:33 PM IST
  • Share this:
ಶಿವಮೊಗ್ಗ; ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್​ಗಳ ಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ.  ಜಿಲ್ಲೆಯಲ್ಲಿ 9 ನೋಂದಾಯಿತ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್​ಗಳು ಮತ್ತು 90 ಖಾಸಗಿ ಸೆಂಟರ್​ಗಳಿವೆ. ಸರ್ಕಾರಿ ಸಂಸ್ಥೆಗಳಲ್ಲಿ ಒಟ್ಟು 24 ಸ್ಕ್ಯಾನಿಂಗ್ ಯಂತ್ರಗಳಿದ್ದು, ಖಾಸಗಿ ಸಂಸ್ಥೆಗಳಲ್ಲಿ 141 ಯಂತ್ರಗಳಿವೆ. ಶಿವಮೊಗ್ಗ ನಗರದಲ್ಲೇ 52 ಖಾಸಗಿ ಸ್ಕ್ಯಾನಿಂಗ್ ಸಂಸ್ಥೆಗಳಿದ್ದು 96 ಯಂತ್ರಗಳಿವೆ. ಪಿಸಿಪಿಎಂಡಿಟಿ ಕಾಯ್ದೆ ಪ್ರಕಾರ ಎಲ್ಲಾ ಸೆಂಟರ್​ಗಳು ಕಾರ್ಯನಿರ್ವಹಿಸಬೇಕಾಗಿದ್ದು, ಈ ಕುರಿತು ಸಮಿತಿ ವತಿಯಿಂದ ಪರಿಶೀಲನೆ ಕೈಗೊಳ್ಳಲಾಗುತ್ತಿದೆ. 

ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ  ಅಧಿಕಾರಿಗಳು ಸಭೆ ನಡೆಸಿದರು. ಪಿಸಿಪಿಎಂಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದ್ದಲ್ಲಿ ಪ್ರಥಮ ಅಪರಾಧಕ್ಕೆ 3 ವರ್ಷಗಳ ಜೈಲು ಮತ್ತು 10 ಸಾವಿರ ದಂಡ ವಿಧಿಸಲಾಗುವುದು. ಎರಡನೇ ಅಪರಾಧಕ್ಕೆ ಐದು ವರ್ಷಗಳವರೆಗೆ ಜೈಲು ಮತ್ತು 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು ಮತ್ತು ನ್ಯಾಯಾಲಯದಲ್ಲಿ ಅಪರಾಧ ನಿರ್ಣಯವಾಗುವ ತನಕ ಅವರ ನೋಂದಣಿ ತಡೆಹಿಡಿಯಲಾಗುವುದು. ಅಪರಾಧ ದೃಢಪಟ್ಟರೆ ಪ್ರಥಮ ಅಪರಾಧಕ್ಕೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ ಅವರ ಹೆಸರನ್ನು ಐದು ವರ್ಷಗಳ ಕಾಲ ತೆಗೆದು ಹಾಕಲಾಗುವುದು.

ಇದನ್ನೂ ಓದಿ : ಮಲ್ಲಿಕಾರ್ಜುನ ಖರ್ಗೆ ಗಬ್ಬರ್ ಸಿಂಗ್, ಶರಣಪ್ರಕಾಶ ಸಾಂಬಾ; ಮಾಲೀಕಯ್ಯ ಗುತ್ತೇದಾರ್​ ಲೇವಡಿ

ನಂತರದ ಅಪರಾಧಕ್ಕೆ ಶಾಶ್ವತವಾಗಿ ಹೆಸರನ್ನು ತೆಗೆದು ಹಾಕಲಾಗುವುದು ಎಂದು ಡಿಎಚ್ಒ ರಾಜೇಶ್ ಸುರಿಗಿಹಳ್ಳಿ ತಿಳಿಸಿದರು.  ಭ್ರೂಣ ಹತ್ಯೆಗೆ ಮಹಿಳೆ, ಆಕೆಯ ಪತಿ, ಸಂಬಂಧಿಕರು ಒತ್ತಾಯಿಸಿದರೆ ಅವರು ಸಹ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧಿಗಳಾಗುತ್ತಾರೆ. ಮೊದಲ ಅಪರಾಧಕ್ಕೆ 3 ವರ್ಷಗಳ ತನಕ ಜೈಲು ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳವರೆಗೆ ಜೈಲು ಮತ್ತು 1 ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ಈ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರ ಸೇರಿದಂತೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇನ್ನು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿಯನ್ನು ಆಯೋಜಿಸಬೇಕು. ಗ್ರಾಮೀಣ ಮಟ್ಟದಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಮೂಲಕ ಭ್ರೂಣ ಹತ್ಯೆ ತಡೆಯಲು ಸಾಧ್ಯವಿದೆ ಎಂದು ಸಮಿತಿ ಸದಸ್ಯೆ ಡಾ.ವೀಣಾ ಭಟ್  ಹೇಳಿದರು. ಶಿವಮೊಗ್ಗ.
Published by: MAshok Kumar
First published: November 21, 2020, 4:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading