ಬೆನ್ನಿಗೆ ಚೂರಿ ಹಾಕಿದರು ಎಂದು ಸಿದ್ದರಾಮಯ್ಯನವರಿಗೆ ಈಗ ಎಲ್ಲಾ ಅರ್ಥವಾಗಿದೆ; ಸಚಿವ ವಿ.ಸೋಮಣ್ಣ ವ್ಯಂಗ್ಯ

ಸಿದ್ದರಾಮಯ್ಯ ಅವರು ತಮ್ಮ ನೋವನ್ನು ನಿನ್ನೆ ಹೇಳಿಕೊಂಡಿದ್ದಾರೆ. ಅದಕ್ಕೆ ನಾವು ಅಷ್ಟು ಬೆಲೆ ಕೊಡಬೇಕಿಲ್ಲ‌. ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ. ಮಾಜಿ ಮುಖ್ಯಮಂತ್ರಿಗಳು. ಅವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಮಾತಾನಾಡಿರುವುದು ಸರಿ ಇದೆ ಎಂದರು.

ವಿ ಸೋಮಣ್ಣ

ವಿ ಸೋಮಣ್ಣ

  • Share this:
ಕೊಡಗು: ಬೆನ್ನಿಗೆ ಚೂರಿ ಹಾಕಿದರು ಎನ್ನೋದು ಸಿದ್ದರಾಮಯ್ಯ ಅವರಿಗೆ ಈಗ ಅರ್ಥವಾಗಿದೆ. ಬೆನ್ನಿಗೆ ಚೂರಿ ಹಾಕುತ್ತಾರೆ ಎನ್ನೋ ಪಕ್ಷದಲ್ಲಿ ಸಿದ್ಧರಾಮಯ್ಯ ಇನ್ನೂ ಯಾಕೆ ಇದ್ದಾರೋ ಗೊತ್ತಿಲ್ಲ. ಅವರು ಚೆನ್ನಾಗಿ ಯೋಚಿಸಿ ಮುಂದೆ ಒಳ್ಳೆಯ ಹೆಜ್ಜೆ ಇಡಲಿ ಎಂದು ವಸತಿ ಸಚಿವ ವಿ ಸೋಮಣ್ಣ ಸಿದ್ದರಾಮಯ್ಯ ಅವರನ್ನು ಕಿಚಾಯಿಸಿದ್ದಾರೆ.

ಕೊಡಗಿನ ಸುಂಟಿಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಿದ್ದವರು. ಅವರ ಪಕ್ಷವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸಿದ್ಧವರು. ಅಂತಹವರಿಗೆ ಅವರ ಪಕ್ಷದಲ್ಲಿ ಬೆನ್ನಿಗೆ ಚೂರಿ ಹಾಕುವುದಾದರೆ ಅಂತ ಪಕ್ಷದಲ್ಲಿ ಯಾಕಿದ್ದಾರೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ತಮ್ಮ ನೋವನ್ನು ನಿನ್ನೆ ಹೇಳಿಕೊಂಡಿದ್ದಾರೆ. ಅದಕ್ಕೆ ನಾವು ಅಷ್ಟು ಬೆಲೆ ಕೊಡಬೇಕಿಲ್ಲ‌. ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ. ಮಾಜಿ ಮುಖ್ಯಮಂತ್ರಿಗಳು. ಅವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಮಾತಾನಾಡಿರುವುದು ಸರಿ ಇದೆ ಎಂದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸಿದ್ದರಾಮಯ್ಯ ನಾಲ್ಕು ಬಾರಿ ಆ ಕ್ಷೇತ್ರದಲ್ಲಿ ಹಿಂದೆ ಗೆದ್ದಿದ್ದರು. ಆದರೆ ಇಂದಿಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ದೀಪದ ಕೆಳಗೆ ಕತ್ತಲು ಅನ್ನೋ ಹಾಗೆ ಆ ಕಡೆ ಕೃಷ್ಣರಾಜ ಜಲಾಶಯ, ಈ ಕಡೆ ಕಬಿನಿ ಜಲಾಶಯವಿದೆ. ಆದರೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಕೊರತೆ ಇದೆ. ಆ ಸಮಸ್ಯೆಯನ್ನು ಸಿದ್ದರಾಮಯ್ಯ ಅವರು ಹಿಂದೆ ಬಗೆಹರಿಸಲಿಲ್ಲ. ಈಗ ಜನರನ್ನು ದೂರಿದರೆ ಏನು ಪ್ರಯೋಜನ ಎಂದು ಟೀಕಿಸಿದರು.

ಇದನ್ನು ಓದಿ: ರೈತರ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಷಡ್ಯಂತ್ರಕ್ಕೆ ತಕ್ಕ ಉತ್ತರ ಕೊಡಿ; ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ

ಜನರವರಿಯಿಂದ ಶಾಲೆ ಆರಂಭ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ಎಂಟು ತಿಂಗಳಿಂದ ತರಗತಿಗಳಿಲ್ಲದೆ ಮಕ್ಕಳ ಕಲಿಕೆಗೆ ತೀವ್ರ ತೊಂದರೆಯಾಗಿತ್ತು. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆಗೆ ಸಿಲುಕುವಂತಾಗಿತ್ತು. ಆನ್‌ಲೈನ್ ತರಗತಿಗಳಿಗೂ ಸರಿಯಾಗಿ ಆಗದೆ ಸಮಸ್ಯೆಯಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಶಿಕ್ಷಣ ಮತ್ತು ಆರೋಗ್ಯ ತಜ್ಞರ ಅಭಿಪ್ರಾಯ ಕೇಳಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ ವಾತಾವರಣದಲ್ಲಿ ಚಳಿಯು ಸ್ವಲ್ಪ ಕಡಿಮೆ ಆಗಿದೆ. ಹೀಗಾಗಿ ಕೋವಿಡ್ ಹರಡುವ ಆತಂಕವು ಕಡಿಮೆ ಇದೆ. ಸದ್ಯ ಶಾಲೆ ಆರಂಭಿಸುವುದು ಒಳ್ಳೆಯದು. ಒಂದು ವೇಳೆ ಶಾಲೆ ಆರಂಭವಾದ ಬಳಿಕ ಕೋವಿಡ್ ಹೆಚ್ಚಾದಲ್ಲಿ ಸರ್ಕಾರ ಸರಿಯಾದ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಇನ್ನು ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮತ್ತೆ ಕೋವಿಡ್ ಹೆಚ್ಚುತ್ತಿರುವುದರ ಬಗ್ಗೆ ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು, ನಂತರ ಶಾಲೆ ಆರಂಭಿಸಲು ಸೂಚಿಸುತ್ತೇನೆ ಎಂದರು.
Published by:HR Ramesh
First published: