ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ಒಂದು ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡಬಾರದು ಎಂದು ವಸತಿ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.
ಸ್ವಾತಂತ್ರ್ಯೋತ್ಸವ ಆಚರಣೆಗೆಂದು ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಡಿಕೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, "ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಆಸ್ಪತ್ರೆಯಲ್ಲಿದ್ದರು. ಅವರು ಈ ಘಟನೆಗೆ ಹೇಗೆ ಪ್ರತಿಕ್ರಿಯಿಸಿದ್ದಾರೆ ಗೊತ್ತಿಲ್ಲ. ಆದರೆ, ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾತ್ರ ಮಾಡಬಾರದು. ಅವರಿಗೂ ಪರಿಜ್ಞಾನ ಇದೆ ಎಂದು ಭಾವಿಸಿದ್ದೇನೆ" ಎಂದು ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಗಲಭೆ ವೇಳೆ ಶೂಟೌಟ್ನಲ್ಲಿ ಮೃತಪಟ್ಟವರ ಕುಟುಂಬಗಳ ಭೇಟಿ ಮಾಡಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸಾಂತ್ವನ ಹೇಳಿರುವ ವಿಷಯಕ್ಕೆ, "ನೋಡಿ ಯಾರು ಯಾರ ಮನೆಗಾದರೂ ಹೋಗಲಿ, ನಾವೆಲ್ಲರೂ ಭಾರತೀಯರು. ದೇಶದ ಭದ್ರತೆ, ಅಖಂಡತೆ ಕಾಪಾಡುವುದು ನಮ್ಮ ಕರ್ತವ್ಯ. ಆದರೆ, ತಪ್ಪು ಮಾಡಿದವನಿಗೆ ಯಾರು ಸಪೋರ್ಟ್ ಮಾಡಬಾರದು. ಯಾರೇ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಆರೋಪಿಗಳ ರಕ್ಷಣೆಗೆ ನಿಲ್ಲಬಾರದು. ಗಲಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅವರೆಲ್ಲರನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು" ಎಂದು ಆಗ್ರಹಿಸಿದರು.
ಇದನ್ನೂ ಓದಿ : ಬೆಂಗಳೂರು ಗಲಭೆಯ ಪ್ರೊಡ್ಯೂಸರ್-ಡೈರಕ್ಟರ್ ಜಮೀರ್ ಅಹಮದ್; ಸಿ.ಟಿ. ರವಿ ಆರೋಪ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ