ಬೌದ್ದಿಕ ದಾರಿದ್ಯ್ರದಿಂದಾಗಿ ಬಿಜೆಪಿ ನಾಯಕರು ನಳಿನ್ ಎಂಬ ನಕಲಿ ಶ್ಯಾಮನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದ್ದಾರೆ; ಸಿದ್ದರಾಮಯ್ಯ ಕಿಡಿ

ಹಿಂದೂ ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ಸಿದ್ದರಾಮಯ್ಯ ನಳಿನ್ ಕುಮಾರ್‌ ಕಟೀಲ್ ಅವರನ್ನು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ.

ಸಿದ್ದರಾಮಯ್ಯ.

  • Share this:
    ಬೆಂಗಳೂರು (ಆಗಸ್ಟ್‌ 21); ಬಿಜೆಪಿ ವರಿಷ್ಠರು ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಅಥವಾ ಬೌದ್ದಿಕ ದಾರಿದ್ಯ್ರದಿಂದಾಗಿ ನಳಿನ್ ಕುಮಾರ್‌ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಗುರುವಾರ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, "ಬಿಜೆಪಿ ವಿರುದ್ಧ ಅನಗತ್ಯವಾದ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರಾವಳಿಯಲ್ಲಿ 23 ಹಿಂದುಗಳ ಹತ್ಯೆಯಾಗಿತ್ತು" ಎಂದು ದೂರಿದ್ದರು.



    ಕಟೀಲ್ ಅವರ ಆರೋಪಕ್ಕೆ ಇಂದು ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, "ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಕುಮಾರ್‌ ಕಟೀಲ್‌ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು" ಎಂದು ತಿರುಗೇಟು ನೀಡಿದ್ದಾರೆ.



    ಮತ್ತೋಂದು ಟ್ವೀಟ್‌ನಲ್ಲಿ ನಳಿನ್ ಕುಮಾರ್‌ ಕಟೀಲ್‌ ಎದುರು ಸಾಕಷ್ಟು ಪ್ರಶ್ನೆಗಳನ್ನಿಟ್ಟಿರುವ ಸಿದ್ದರಾಮಯ್ಯ, " ಹಿಂದೂ ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ?



    ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್‌ ಕಟೀಲ್ ಅವರೇ, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ?



    ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ?



    ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ



    2013-18ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ ,ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?





    ಕಟೀಲ್ ಅವರೇ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ" ಎಂದು ವಾಗ್ದಾಳಿ ನಡೆಸಿದ್ಧಾರೆ.
    Published by:MAshok Kumar
    First published: