• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಸಿದ್ದರಾಮಯ್ಯನವರ ನಾಯಕತ್ವಕ್ಕೆ ಕುತ್ತು ಬಂದಿದ್ದು, ಅವರಿಗೆ ಅಭದ್ರತೆ ಕಾಡುತ್ತಿದೆ: ಜಗದೀಶ್ ಶೆಟ್ಟರ್

ಸಿದ್ದರಾಮಯ್ಯನವರ ನಾಯಕತ್ವಕ್ಕೆ ಕುತ್ತು ಬಂದಿದ್ದು, ಅವರಿಗೆ ಅಭದ್ರತೆ ಕಾಡುತ್ತಿದೆ: ಜಗದೀಶ್ ಶೆಟ್ಟರ್

ಸಚಿವ ಜಗದೀಶ್ ಶೆಟ್ಟರ್.

ಸಚಿವ ಜಗದೀಶ್ ಶೆಟ್ಟರ್.

ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಯಲ್ಲಿ ಹಿಂದುಳಿದಿರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ ಹಾಗೂ ಕಲಬುರ್ಗಿಯನ್ನು ಕೇಂದ್ರವಾಗಿರಿಸಿಕೊಂಡು ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಕಾಯ್ದೆ ರಚಿಸಲಾಗುವುದು ಎಂದು ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ಹುಬ್ಬಳ್ಳಿ: ಸಿದ್ದರಾಮಯ್ಯನವರ ನಾಯಕತ್ವಕ್ಕೆ ಕುತ್ತು ಬಂದಿದ್ದು, ಅವರಿಗೆ ಅಭದ್ರತೆ ಕಾಡುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲದಕ್ಕೂ ಆರ್‌ಎಸ್‌ಎಸ್ ಟಾರ್ಗೆಟ್ ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ. ಕುರುಬ ನಾಯಕ, ಹಿಂದುಳಿದ ನಾಯಕ ಎಂದು ಬಿಂಬಿಸಿಕೊಂಡಿದ್ದರು. ಮೊನ್ನೆ ನಡೆದ ಕುರುಬ ಸಮಾಜಕ್ಕೆ ಅವರಿಗೆ ಹೋಗಲು ಆಗಲಿಲ್ಲ. ಅದರ ಮುಜುಗರ ತಪ್ಪಿಸಿಕೊಳ್ಳಲಿಕ್ಕೆ ಆರ್‌ಎಸ್‌ಎಸ್ ಹೆಸರು ಹೇಳ್ತಾ ಇದ್ದಾರೆ. ಮೀಸಲಾತಿ ಹೋರಾಟ ಇವತ್ತಿನದಲ್ಲ. ಆಯಾ ಸಮಾಜದ ಸ್ವಾಮೀಜಿಗಳು, ಹಿರಿಯರು ಮೀಸಲಾತಿ ಬಗ್ಗೆ ಈ ಹಿಂದೆಯೇ ಹೋರಾಟ ನಡೆಸಿದ್ದರು, ಈಗಲೂ ನಡೆಸುತ್ತಿದ್ದಾರೆ. ಸಂವಿಧಾನ ಬದ್ದವಾಗಿ ಕೇಂದ್ರ ಸರ್ಕಾರಕ್ಕೆ ವರದಿ ಕೊಡುವ ಸಮಾಲೋಚನೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಈ ಕುರಿತು ಪತ್ರ ಬರೆದಿದ್ದಾರೆ. ಆಯಾ ಆಯೋಗದವರು ಎಲ್ಲಾ ಪರಾಮರ್ಶೆ ಮಾಡಿಕೊಂಡು ಯೋಗ್ಯವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಆದಷ್ಟು ಬೇಗನೆ ಈ ಕುರಿತು ನಿರ್ಧಾರವನ್ನ ತೆಗೆದುಕೊಳ್ಳುತ್ತಾರೆ" ಎಂದು ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.


ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಕಾಯ್ದೆ ರಚನೆ:


ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಯಲ್ಲಿ ಹಿಂದುಳಿದಿರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ ಹಾಗೂ ಕಲಬುರ್ಗಿಯನ್ನು ಕೇಂದ್ರವಾಗಿರಿಸಿಕೊಂಡು ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಕಾಯ್ದೆ ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.


ನಗರದ ಡೆನಿಸನ್ಸ್ ಹೋಟೆಲ್‌ನಲ್ಲಿ ಕರ್ನಾಟಕ ಸಣ್ಣ ಕೈಗಾರಿಕಾ ಸಂಘ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘ ಸಹಯೋಗದಲ್ಲಿ ಆಯೋಜಿಸಲಾದ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಕೈಗಾರಿಕಾ ಅಭಿವೃದ್ದಿಯಲ್ಲಿ ಹಿಂದುಳಿದ ತಾಲೂಕುಗಳನ್ನು ವಲಯವಾರು ಗುಂಪುಗಳಾಗಿ ವಿಂಗಡಣೆ ಮಾಡಲಾಗಿದೆ. ಎರಡನೇ ಹಾಗೂ ಮೂರು ಸ್ತರದ ನಗರಗಳು ಹಾಗೂ ಗ್ರಾಮೀಣ ಭಾಗದಲ್ಲೂ ಕೈಗಾರಿಕೆ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಿ, ಸರ್ಕಾರದಿಂದ ಪ್ರತ್ಯೇಕ ಪ್ರೋತ್ಸಾಹ ಹಾಗೂ ರಿಯಾಯಿತಿಗಳನ್ನು ನೀಡಲಾಗುವುದು. ಬರುವ ಅಧಿವೇಶನದಲ್ಲಿ ವಿಶೇಷ ಹೂಡಿಕೆ ವಲಯ ಮಸೂದೆಯನ್ನು ಸದನದಲ್ಲಿ ಮಂಡಿಸಲಾಗುವುದು.


ರಾಜ್ಯ ಸರ್ಕಾರ ಈಗಾಗಲೇ ಭೂ ಸುಧಾರಣೆ ಹಾಗೂ ಕೈಗಾರಿಕೆ ಅನುವು ಕಾಯ್ದೆಗೆ ತಿದ್ದುಪಡಿ ತಂದಿದೆ. ಭೂ ಸುಧಾರಣೆ ಕಾಯ್ದೆಯಲ್ಲಿ 79ನೇ ವಿಧಿಯ ಎ ಹಾಗೂ ಬಿ ಅಂಶಗಳಿಗೆ ಸಡಲಿಕೆ ನೀಡಲಾಗಿದೆ. ಕೃಷಿ ವೃತ್ತಿ ಮಾಡದಿರುವವರು ಹಾಗೂ ಕೃಷಿ ಭೂಮಿ ಹೊಂದಿಲ್ಲದವರು ಕೂಡ ಜಮೀನು ಖರೀದಿಸಬಹುದಾಗಿದೆ. ಇದರಿಂದ ಕೈಗಾರಿಕೋಧ್ಯಮಿಗಳು ಅಗತ್ಯ ಭೂಮಿಯನ್ನ ಕೊಂಡುಕೊಳ್ಳಬಹುದಾಗಿದೆ. ಭೂ ಪರಿವರ್ತನೆಗೂ ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಬಾಗಲಕೋಟೆ; ಪ್ರೇಮಿಗಳ ದಿನದಂದೇ ಪ್ರೇಯಸಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿದ ಪ್ರೀಯಕರ!


ಕೈಗಾರಿಕೆ ಸ್ಥಾಪನೆಗೆ ಅನುಮೋದನೆ ಪಡೆದ ಕೈಗಾರಿಕೋಧ್ಯಮಿಗಳು ಸರ್ಕಾರ ನೀತಿ ನಿಯಮಗಳನುಸಾರ ಸ್ವಘೋಷಣೆ ಧೃಡೀಕರಣ ಪತ್ರಗಳನ್ನು ನೀಡಿ, ಸ್ವಂತ ಸ್ಥಳಗಳಲ್ಲಿ ಕೈಗಾರಿಕಾ ಸ್ಥಾಪನೆಗೆ ಸೌಲಭ್ಯಗಳ ನಿರ್ಮಾಣ ಕಾಮಗಾರಿಯನ್ನು ತಕ್ಷಣವೇ ಕೈಗೊಳ್ಳಬಹುದಾಗಿದೆ. ಮೂರು ವರ್ಷಗಳ ಅವದಿಯಲ್ಲಿ ಉಳಿದ ಪರವಾನಿಗೆ ಪತ್ತಗಳನ್ನು ಸಂಬಂದಪಟ್ಟ ಇಲಾಖೆಗಳಿಂದ ಪಡೆಯಬಹುದಾಗಿದೆ.


ಹೊಸ ಕೈಗಾರಿಕೆಗಳ ಸ್ಥಾಪನೆಯ ಪ್ರಸ್ತಾವನೆಗಳಲ್ಲಿ 15 ಕೋಟಿ ಒಳಗೆ ಜಿಲ್ಲಾಧಿಕಾರಿಗಳು ಹಾಗೂ ಮೇಲ್ಪಟ್ಟ ಉದ್ಯಮೆಗಳಿಗೆ ಸರ್ಕಾರದ ಹಂತದಲ್ಲಿ ಅನುಮೋದನೆ ನೀಡಬೇಕು. ಪ್ರಸ್ತಾವನೆಗಳನ್ನು ತಿಂಗಳ ಒಳಗಾಗಿ ಪರಿಶೀಲಿಸಿ ಅನುಮೋದನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ತಿಂಗಳು ಕೈಗಾರಿಕೆ ಇಲಾಖೆಗೆ ಬರುವ ಪ್ರಸ್ತಾವನೆಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಈ ಮೊದಲು ತ್ರೈಮಾಸಿಕ ಸಭೆಗಳನ್ನು ನಡೆಸಲಾಗುತ್ತಿತ್ತು. ಇದರಿಂದ ಉದ್ಯಮೆ ಸ್ಥಾಪನೆಗೆ ತೊಂದರೆಯಾಗುತ್ತಿತ್ತು ಎಂದು ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.

Published by:MAshok Kumar
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು