HOME » NEWS » District » SMART CITY AND OTHER DEVELOPMENT WORK WILL BE COMPLETED VERY SOON MINISTER BHYRATI BASAVARAJ ASSURED HK

ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ : ಸಚಿವ ಭೈರತಿ ಬಸವರಾಜ್

ಹುಬ್ಬಳ್ಳಿ ಮೀನು ಮಾರುಕಟ್ಟೆಯಲ್ಲಿ ವ್ಯಾಪರಸ್ಥರು ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಅಲ್ಲಿ ವಾಸಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ

news18-kannada
Updated:September 6, 2020, 4:15 PM IST
ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ : ಸಚಿವ ಭೈರತಿ ಬಸವರಾಜ್
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ 
  • Share this:
ಹುಬ್ಬಳ್ಳಿ (ಸೆಪ್ಟೆಂಬರ್​. 06): ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆ ಅಡಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು. ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಮತ್ತು ಮಹಾನಗರ ಪಾಲಿಕೆ ಅಡಿಯಲ್ಲಿ ನಡೆಯುತ್ತಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಈ ಕುರಿತು ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಗೋಕುಲ ಕೈಗಾರಿಕಾ ವಸಹಾತು ಪ್ರದೇಶದಲ್ಲಿ 18.5‌ಕೋಟಿ ರೂ ವೆಚ್ಚದಲ್ಲಿ ಮುಖ್ಯರಸ್ತೆ, 8.5 ಕೋಟಿ ರೂ ವೆಚ್ಚದಲ್ಲಿ ಉಪರಸ್ತೆಗಳನ್ನು ಕಾಂಕ್ರಿಟ್ ನಿಂದ ನಿರ್ಮಿಸಲಾಗುತ್ತಿದೆ.‌ ಕಾಮಗಾರಿ ಪ್ರಗತಿ ಹಂತದಲ್ಲಿ ಇದ್ದು, ಅಕ್ಟೋಬರ್ ವೇಳೆಗೆ ಪೂರ್ಣಗೊಳಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಡಿ 7.5 ಕೋಟಿ ವೆಚ್ಚದಲ್ಲಿನಿರ್ಮಿಸಲಾಗುತ್ತಿರುವ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಮುಖ್ಯ ಕಟ್ಟಡ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ ಎಂದರು.

17.50‌ಕೋಟಿ ರೂ ವೆಚ್ಚದಲ್ಲಿ ಇಂದಿರಾ ಗಾಜಿನ ಮನೆಯ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.‌ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಕಾಮಗಾರಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ‌. ಇಂದಿರಾ ಗಾಜಿನ ಮನೆಯ ವಾಯು ವಿಹಾರಿಗಳ ಸಂಘದೊಂದಿಗೆ ಪಾಲಿಕೆ ಆಯುಕ್ತರು ಹಾಗೂ ‌ಸ್ಮಾರ್ಟ್ ಸಿ.ಟಿ ಅಧಿಕಾರಿ ಸಭೆ ನಡೆಸಿ ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಕೂಡಲೇ ಮೂಲಭೂತ ಸೌಕರ್ಯಗಳಾದ ಶೌಚಾಲಯ, ದೀಪದ ವ್ಯವಸ್ಥೆಯನ್ನು ಉದ್ಯಾನವನದಲ್ಲಿ ಕಲ್ಪಿಸಲಾಗುವುದು ಎಂದರು ತಿಳಿಸಿದರು.

ಚಿಟಗುಪ್ಪಿ ಆಸ್ಪತ್ರೆಯಲ್ಲಿ 19.50 ಕೋಟಿ ವೆಚ್ಚದ, 100 ಹಾಸಿಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹುಬ್ಬಳ್ಳಿ ಮೀನು ಮಾರುಕಟ್ಟೆಯಲ್ಲಿ ವ್ಯಾಪರಸ್ಥರು ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಅಲ್ಲಿ ವಾಸಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. 5 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣ ಮಾಡಿ, ಬೀದಿ ಬದಿಯ ವ್ಯಾಪಾರಸ್ಥರನ್ನು ಸ್ಥಳಾಂತರಿಸಲಾಗುವುದು ಎಂದರು.

ತೋಳನ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು. ಕೆರೆಯ ಕೋಳಚೆ ನೀರು ಶುದ್ಧೀಕರಣ ಘಟಕ ಪೂರ್ಣಗೊಂಡಿದೆ. ಘಂಟಿಕೇರಿಯ ಸರಕಾರಿ ಮಾದರಿ ಕನ್ನಡ ಶಾಲೆ ಕಟ್ಟಡ ದುರಸ್ತಿ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಜನತಾ ಬಜಾರ್ ಸ್ಥಳಾಂತರ ಕಾರ್ಯನಡೆದಿದೆ. ಚೆನ್ನಮ್ಮ ವೃತ್ತದ ಟ್ರಾಫಿಕ್ ಐ ಲ್ಯಾಂಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಇಲಾಖೆಯಿಂದ ಯೋಜನೆ ಅನುಷ್ಠಾನಕ್ಕೆ ಸಂಪೂರ್ಣವಾಗಿ ಸಹಕಾರ ನೀಡಲಾಗುವುದು. ಅಕ್ಟೋಬರ್‌ 5 ರಂದು ಪೂರ್ಣಗೊಂಡ ಕಾಮಗಾರಿಗಳನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ಹಸಿರು ಬಣ್ಣಕ್ಕೆ ತಿರುಗಿದ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ; ನಿರ್ವಹಣೆ ಇಲ್ಲದೇ ಸೊರಗಿದ ಸುವರ್ಣಸೌಧ

ಕೊರೋನಾ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರದಲ್ಲಿ 34 ಕೋಟಿ ರೂಪಾಯಿ ಕರ ಸಂಗ್ರಹವಾಗಿದೆ. 4 ಕೋಟಿ ರೂಪಾಯಿ ಕರ ಸಂಗ್ರಹದಲ್ಲಿ ವ್ಯತ್ಯಾಸವಾಗಿದೆ. ರಾಜ್ಯದ ಬಳ್ಳಾರಿ, ಕಲಬುರ್ಗಿ , ವಿಜಯಪುರ ಹಾಗೂ ಮೈಸೂರು ಜಿಲ್ಲೆಗಳನ್ನು ಸ್ಮಾರ್ಟ್ ಸಿಟಿ ಅಡಿಯಲ್ಲಿ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
Youtube Video
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಇತರೆ ಸದಸ್ಯರು ಉಪಸ್ಥಿತರಿದ್ದರು.
Published by: G Hareeshkumar
First published: September 6, 2020, 3:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories