HOME » NEWS » District » SRIHARI GOLASANGI AND BASANAGOUDA PATIL YATNAL AT VIJAYAPURA CITY DEVELOPMENT AUTHORITY MEETING MVSV SNVS

ವಿಜಯಪುರ ನಗರಾಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದ ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿದ್ದೇನು ಗೊತ್ತಾ?

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ (ವಿಡಿಎ) ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಾಲ್ಗೊಂಡು ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಸೂಚನೆ ನೀಡಿದರು.

news18-kannada
Updated:February 9, 2021, 3:24 PM IST
ವಿಜಯಪುರ ನಗರಾಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದ ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿದ್ದೇನು ಗೊತ್ತಾ?
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಶ್ರೀಹರಿ ಗೊಳಸಂಗಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು
  • Share this:
ವಿಜಯಪುರ: ವಿಜಯಪುರ ನಗರದ ನಾನಾ ಕಡೆ 21 ಬಸ್ ತಂಗುದಾಣಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ (ವಿಡಿಎ) ಅಧ್ಯಕ್ಷ ಶ್ರೀಹರಿ ಗೊಳಸಂಗಿ ತಿಳಿಸಿದರು. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಉದ್ಯಾನವನ ಜಾಗೆಯಲ್ಲಿ ವಾಕಿಂಗ್ ಟ್ರ್ಯಾಕ್‍ಗಳನ್ನು ನಿರ್ಮಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯಪುರ ನಗರದ ಇಟಗಿ ಪೆಟ್ರೋಲ್ ಬಂಕ್ ಹತ್ತಿರ ತರಕಾರಿ ಪ್ಲಾಟ್‍ಪಾರ್ಮ್‍ಗಳನ್ನು ತೆರೆಯಲು ಯೋಜನೆ ರೂಪಿಸಲಾಗಿದೆ.  ಇನ್ನೂ ಅನೇಕ ಅಭಿವೃದ್ಧಿ ಪರ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಗರದ ನಾನಾ ಸರಕಾರಿ ಕಟ್ಟಡಗಳ ಬಾಕಿ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಬೇಕು. ಬಿಡುಗಡೆ ಮಾಡಲಾದ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು.  ಟೆಂಡರ್ ಕಾಮಗಾರಿಗಳ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಸಂಭಂಧಪಟ್ಟ ಅಧಿಕಾರಿಗಳಿಗೆ ಅಪ್ಪಣೆ ಮಾಡಿದರು.

ಇದನ್ನೂ ಓದಿ: Siddaramaiah: ದಲಿತರು, ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ; ಸಿದ್ದರಾಮಯ್ಯ ಎಚ್ಚರಿಕೆ

ವಿಜಯಪುರ ನಗರದ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಮುಂಬರುವ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೇ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ವಿಜಯಪುರ ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೂ ಗಮನ ಹರಿಸುವಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಜಯಪುರ ನಗರದಲ್ಲಿ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಕೆಲಸ ಕಾರ್ಯಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣ ಮಾಡಬೇಕು. ಜಿಲ್ಲಾ ಸರಕಾರಿ ಆಸ್ಪತ್ರೆಯ ಮುಂದೆ ದ್ವಿಚಕ್ರ ವಾಹನ ಮತ್ತು ಸೈಕಲ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುಲು ಕೂಡ ಸೂಕ್ತ ಕ್ರಮ ಕೈಗೊಳ್ಳುವಂತೆ ಯತ್ನಾಳ ತಿಳಿಸಿದರು.

ವಿಜಯಪುರ ನಗರದ ಪ್ರಮುಖ ವೃತ್ತಗಳಲ್ಲಿ ಹೈಮಾಸ್ಥ ವಿದ್ಯುತ್ ದೀಪಗಳನ್ನು ಅಳವಡಿಸಬೇಕು.  ಉದ್ಯಾನ ವನಗಳಲ್ಲಿ ಅವಶ್ಯಕತೆ ಇರುವ ಕಡೆ ಸಿಮೆಂಟ್ ಆಸನಗಳ ವ್ಯವಸ್ಥೆ ಅಳವಡಿಸಬೇಕು ಎಂದು ಯತ್ನಾಳ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹೇಳಿದರು.

ಇದನ್ನೂ ಓದಿ: ಸಾಂಪ್ರದಾಯಿಕ ಭೂತಾರಾಧನೆಗೂ ಡಿಜಿಟಲ್ ಟಚ್; ಇಲ್ಲಿ ವ್ಯವಹಾರವೆಲ್ಲವೂ ಕ್ಯಾಶ್ ಲೆಸ್ಈ ಸಭೆಯಲ್ಲಿ ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಣ ಜಾಧವ, ಸಂಗಣ್ಣ ಕರಡಿ, ವಿಕ್ರಮ ಗಾಯಕವಾಡ, ರೇವಣಸಿದ್ಧಪ್ಪ ಜಿರ್ಲಿ, ಸರೋಜಿಸಿ ಏವೂರ, ವಿಡಿಎ ಆಯುಕ್ತ ವಿಜಯಕುಮಾರ ಅಜೂರೆ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀಹರಿ ಗೊಳಸಂಗಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಳಿಕ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜೊತೆಗೂಡಿ ವಿಜಯಪುರ ನಗರದ ಅಭಿವೃದ್ಧಿ ಮತ್ತು ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಮೂಲಕ ತಮ್ಮ ಅವಧಿಯಲ್ಲಿ ಜನ ಮಾನಸದಲ್ಲಿ ಉಳಿಯುವಂಥ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ.  ಈ ಮೂಲಕ ಶ್ರೀಹರಿ ಗೊಳಸಂಗಿ ವಿಜಯಪುರ ನಗರದಲ್ಲಿ ಮನೆ ಮಾತಾಗುತ್ತಿದ್ದಾರೆ.

ವರದಿ: ಮಹೇಶ ವಿ. ಶಟಗಾರ
Published by: Vijayasarthy SN
First published: February 9, 2021, 3:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories