ಭಾರೀ ಮಳೆಗೆ ಜೇವರ್ಗಿಯಲ್ಲಿ ಕೊಚ್ಚಿಹೋದ ಸೇತುವೆ: ಪರೀಕ್ಷಾ ಕೇಂದ್ರ ತಲುಪಲು ವಿದ್ಯಾರ್ಥಿಗಳ ಹರಸಾಹಸ

ಜೇವರ್ಗಿ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳ ಉಕ್ಕಿ ಹರಿಯುತ್ತಿವೆ. ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎದುರಿನ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಪರೀಕ್ಷಾ ಕೇಂದ್ರಪರೀಕ್ಷಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಹಾಳಾಗಿದೆ.

news18-kannada
Updated:July 2, 2020, 11:21 AM IST
ಭಾರೀ ಮಳೆಗೆ ಜೇವರ್ಗಿಯಲ್ಲಿ ಕೊಚ್ಚಿಹೋದ ಸೇತುವೆ: ಪರೀಕ್ಷಾ ಕೇಂದ್ರ ತಲುಪಲು ವಿದ್ಯಾರ್ಥಿಗಳ ಹರಸಾಹಸ
ಮಳೆಗೆ ಕೊಚ್ಚಿಹೋದ ಸೇತುವೆ
  • Share this:
ಕಲಬುರ್ಗಿ(ಜು.02): ಕಲಬುರ್ಗಿ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಭಾರೀ  ಮಳೆಯಿಂದ ಹಳ್ಳದ ಸೇತುವೆ ಕೊಚ್ಚಿಹೋಗಿ ಎಸ್​ಎಸ್​ಎಲ್​​ಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾದ ಘಟನೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ಸೇತುವೆಗೆ ಹಾನಿಯಾಗಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾದರು. ಪರ್ಯಾಯ ವ್ಯವಸ್ಥೆ ಕಲ್ಲಿಸಿದ ನಂತರ ವಿದ್ಯಾರ್ಥಿಗಳು ನಿರಾಳಗೊಂಡಿದ್ದಾರೆ.

ಜೇವರ್ಗಿ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳ ಉಕ್ಕಿ ಹರಿಯುತ್ತಿವೆ. ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎದುರಿನ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಪರೀಕ್ಷಾ ಕೇಂದ್ರಪರೀಕ್ಷಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಹಾಳಾಗಿದೆ.

ಇನ್ನು, ಇಂದು ಎಂದಿನಂತೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಹಳ್ಳ ದಾಟದೆ ಕಂಗಾಲಾಗಿದ್ದಾರೆ. ಇದ್ದಕ್ಕಿದ್ದಂತೆ ಪರೀಕ್ಷಾ ಕೇಂದ್ರ ಬದಲು ಮಾಡೋದು ಕಷ್ಟ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ.

ಇದನ್ನೂ ಓದಿ: Coronavirus Updates: ಭಾರತದಲ್ಲಿ ಕೋವಿಡ್​​-19 ಕಾವು: ಒಂದೇ ದಿನ 19 ಸಾವಿರ ಕೇಸ್​​ ಪತ್ತೆ, 6 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಕೊನೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ನೆರವಿಗೆ ಬಂದಿದ್ದಾರೆ. ಹಳ್ಳಕ್ಕೆ ಅಡ್ಡಲಾಗಿ ಏಣಿಯನ್ನಿಟ್ಟಿದ್ದಾರೆ. ಹಗ್ಗದ ಸಹಾಯದಿಂದ ಏಣಿಯ ಮೇಲೆ ನಡೆದುಕೊಂಡು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಿದ್ದಾರೆ.

ಪರೀಕ್ಷಾ ಕೇಂದ್ರದ ಸಿಬ್ಬಂದಿಯೂ ಅದೇ ಮಾದರಿಯಲ್ಲಿ ಹಳ್ಳ ದಾಟಿದ್ದಾರೆ. ಏಕಾಏಕಿ ಹಳ್ಳದ ಸೇತುವೆ ಕೊಚ್ಚಿ ಹೋಗಿದ್ದರಿಂದ ನೂರಾರು ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ಈಗ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ನಂತರ ವಿದ್ಯಾರ್ಥಿಗಳು ನಿರಾಳರಾಗಿ ಪರೀಕ್ಷಾ ಕೋಣೆಗೆ ಎಂಟ್ರಿ ಕೊಟ್ಟಿದ್ದಾರೆ.
First published: July 2, 2020, 11:20 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading