DK Shivakumar: ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ವಾರೆಂಟ್ ಜಾರಿ ಮಾಡಿದ ಸುಳ್ಯ ನ್ಯಾಯಾಲಯ

2016ರ ಫೆಬ್ರವರಿ 28 ರಂದು ಸುಳ್ಯ ತಾಲೂಕಿನ‌ ಬೆಳ್ಳಾರೆ ನಿವಾಸಿ, ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ, ಸಾಯಿ ಗಿರಿಧರ್ ರೈ, ತನ್ನೂರಿನಲ್ಲಿ ನಿರಂತರವಾಗಿ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

  • Share this:
ದಕ್ಷಿಣ ಕನ್ನಡ (ಸೆ.15): ಕಾಂಗ್ರೆಸ್ ನ ಟ್ರಬಲ್ ಶೂಟರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPPCC President DK Shivakumar)ಗೆ ದಕ್ಷಿಣ ಕನ್ನಡ(Dakshina Kannada District) ಜಿಲ್ಲೆಯ ಸುಳ್ಯ ನ್ಯಾಯಾಲಯ(Sulya Court) ವಾರೆಂಟ್ ಜಾರಿ ಮಾಡಿದೆ. 2016ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು, ಈ ವೇಳೆ ಸುಳ್ಯದ ವ್ಯಕ್ತಿಯೊಡನೆ ನಡೆದ ಫೋನ್ ವಾಕ್ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷ್ಯ ನುಡಿಯಲು ಡಿಕೆ ಶಿವಕುಮಾರ್ ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

2016ರ ಫೆಬ್ರವರಿ 28 ರಂದು ಸುಳ್ಯ ತಾಲೂಕಿನ‌ ಬೆಳ್ಳಾರೆ ನಿವಾಸಿ, ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ, ಸಾಯಿ ಗಿರಿಧರ್ ರೈ, ತನ್ನೂರಿನಲ್ಲಿ ನಿರಂತರವಾಗಿ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಪರಸ್ಪರ ಅವಾಚ್ಯ ಶಬ್ಧಗಳ ಬಳಕೆ ಕೂಡಾ ಮಾಡಿದ್ದರು. ಇದಾದ ಬಳಿಕ ಡಿಕೆ ಶಿವಕುಮಾರ್ ಮೆಸ್ಕಾಂ ಎಂಡಿ ಮೂಲಕ ಅಂದಿನ ಸುಳ್ಯ ಪ್ರಭಾರ ಎಇಇ ಹರೀಶ್ ನಾಯಕ್ ಎಂಬುವವರು ಸಾಯಿ ಗಿರಿಧರ್ ರೈ ವಿರುದ್ಧ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರಾತ್ರಿ ವೇಳೆ ಸಾಯಿ ಗಿರಿಧರ್ ಮನೆಗೆ ನುಗ್ಗಿದ ಸುಳ್ಯ ಪೊಲೀಸರು,ಸಾಯಿ ಗಿರಧರ್ ರೈ ಅವರ ಮನೆಯ ಹೆಂಚು ತೆಗೆದು ಮನೆಯ ಒಳಗೆ ಪ್ರವೇಶಿಸಿ, ಠಾಣೆಗೆ ಕರೆದುಕೊಂಡು ಹೋಗಿ ಬಂಧನ ಮಾಡಿದ್ದರು.

ಇದನ್ನೂ ಓದಿ:Cucumber Idli: ದಿನಾಲೂ ಅದೇ ಇಡ್ಲಿ ತಿಂದು ಬೇಜಾರಾಗಿದ್ರೆ, ಒಂದ್ಸಲ ಸೌತೆಕಾಯಿ ಇಡ್ಲಿ ಟ್ರೈ ಮಾಡಿ..!

ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇಂಧನ ಸಚಿವರು ತಮ್ಮ ಪ್ರಭಾವ ಬಳಸಿ ವಿದ್ಯುತ್ ಕೇಳಿದ ಜನಸಾಮಾನ್ಯನ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದರ ಬಗ್ಗೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಜನಸಾಮಾನ್ಯರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಆ ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ ಪ್ರಕರಣದ ಕೂಲಂಕುಷ ವಿಚಾರಣೆ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ರನ್ನು ನ್ಯಾಯಾಲಯ ಪ್ರಮಖ ಸಾಕ್ಷಿಯನ್ನಾಗಿ ಪರಿಗಣಿಸಿತ್ತು. ಕಳೆದ ಸಪ್ಟೆಂಬರ್ 9 ನೇ ತಾರೀಖಿನಂದು ಈ ಪ್ರಕರಣದ ಕುರಿತು ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆಗೆ ಹಾಜರಾಗುವಂತೆ ಸುಳ್ಯ ನ್ಯಾಯಾಲಯ ಡಿಕೆ ಶಿವಕುಮಾರ್​ಗೆ ಸಮನ್ಸ್ ನೀಡಿತ್ತು.

ಆದರೆ ಆ ದಿನ ಅನ್ಯ ಕಾರಣ ನೀಡಿ ಡಿ.ಕೆ ಶಿವಕುಮಾರ್ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಡಿ.ಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಸುಳ್ಯ ನ್ಯಾಯಾಲಯ ಡಿಕೆ ಶಿವಕುಮಾರ್ ವಿರುದ್ಧ ವಾರೆಂಟ್ ಹೊರಡಿಸಿದ್ದು, ಸೆಪ್ಟೆಂಬರ್29 ನೇ ತಾರೀಖಿನಂದು ನಡೆಯುವ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಲೇಬೇಕೆಂದು ಸೂಚನೆ ನೀಡಿದೆ..

ಈ ಮೂಲಕ ಕಾನೂನಿನ ಎದುರು ಯಾರು ಎಷ್ಟೇ ಪ್ರಭಾವಶಾಲಿಯಾದರೂ ಎಲ್ಲರೂ ಒಂದೇ ಅಂತಾ ನ್ಯಾಯಾಲಯ ನಿರೂಪಿಸಿದೆ.  ಡಿ.ಕೆ ಶಿವಕುಮಾರ್ ರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆತರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:UPSC Prelims 2021 Admit Card: ಯುಪಿಎಸ್​ಸಿ ಪ್ರಿಲಿಮ್ಸ್​​ಗೆ ಅಡ್ಮಿಟ್ ಕಾರ್ಡ್​ ಡೌನ್​ಲೋಡ್ ಮಾಡಿಕೊಳ್ಳಲು ಈ ಸರಳ ವಿಧಾನಗಳನ್ನು ಅನುಸರಿಸಿ

ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಕಣ್ಣಮುಚ್ಚಾಲೆ ಆಟಕ್ಕೆ ಇನ್ನೂ ಬ್ರೇಕ್ ಬಿದ್ದಿಲ್ಲ. ಸುಳ್ಯದಲ್ಲಿ ಪವರ್ ಸಬ್ ಸ್ಟೇಷನ್  ನಿರ್ಮಾಣ ಮಾಡಬೇಕೆಂದು ಹಲವು ವರ್ಷಗಳಿಂದ ಜನ ಬೇಡಿಕೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ದಿನದ ಬಹುತೇಕ ಗಂಟೆಗಳಲ್ಲಿ ವಿದ್ಯುತ್ ಸ್ಥಗಿತವಾಗುವುದರಿಂದ ಜನರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಲ್ಪ ಮಳೆ ಸುರಿದರೂ ಎರಡ್ಮೂರು ದಿನ ವಿದ್ಯುತ್ ಇಲ್ಲದೇ ಜನ ಹೈರಾಣಾಗಿದ್ದಾರೆ. ಸುಳ್ಯದ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಈ ಪ್ರಕರಣವಾದ ಬಳಿಕ ಹಲವು ಸರ್ಕಾರಗಳು ಬಂದು ಹೋದರೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ ಅನ್ನೋದೇ ದುರಂತವಾಗಿದೆ.
Published by:Latha CG
First published: