ಬೆಂಗಳೂರು(ಜುಲೈ 06): ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ಸುಮಲತಾ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಸದ್ಯಕ್ಕೆ ಅವರು ತಮ್ಮ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ಧಾರೆ.
ಜುಲೈ 4ರಂದು ಸುಮಲತಾ ಅವರಿಗೆ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತಂತೆ. ಕೊರೋನಾಪೀಡಿತ ಪ್ರದೇಶಗಳಲ್ಲಿ ಓಡಾಟ ನಡೆಸಿದ್ದ ಹಿನ್ನೆಲೆಯಲ್ಲಿ ಅವರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದಾರೆ. ಇವತ್ತು ಅದು ಪಾಸಿಟಿವ್ ರಿಸಲ್ಟ್ ಬಂದಿದೆ.
“ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ” ಎಂದು ಸುಮಲತಾ ಅಂಬರೀಷ್ ಅವರು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ