HOME » NEWS » District » SUPERINTENDENT OF POLICE INAUGURATED BLOOD DONATION CAMP IN HASSAN MAK

ಹಾಸನದಲ್ಲಿ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಪೊಲೀಸ್‌ ವರಿಷ್ಠಾಧಿಕಾರಿ

ರಕ್ತದಾನ ಮಾಡುವುದು ಶ್ರೇಷ್ಠ ಕಾರ್ಯ. ಈ ನಿಟ್ಟಿನಲ್ಲಿ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಅಂತೆಯೇ ಈಗಿನ ಯುವ ಪೀಳಿಗೆ ಸ್ವಯಂ ಪ್ರೇರಿತರಾಗಿ ಹೆಚ್ಚು ಹೆಚ್ಚು ರಕ್ತದಾನ ಮಾಡಬೇಕು ಎಂದು ಹಾಸನ ಪೊಲೀಸ್‌ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

news18-kannada
Updated:June 17, 2020, 7:24 AM IST
ಹಾಸನದಲ್ಲಿ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಪೊಲೀಸ್‌ ವರಿಷ್ಠಾಧಿಕಾರಿ
ಹಾಸನ ರಕ್ತದಾನ ಶಿಬಿರದಲ್ಲಿ ರಕ್ತ ನೀಡಿದ ಪೊಲೀಸ್‌ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ.
  • Share this:
ಹಾಸನ ; ಮಹಾಭಾರತದಲ್ಲಿ ಕರ್ಣ ಶ್ರೇಷ್ಠ ದಾನಿಯಾದ್ರೆ, ಪ್ರಸ್ತುತ ಜೀವನಿಧಿಯಾದ ರಕ್ತದಾನ ಮಾಡುವವರೇ ಶ್ರೇಷ್ಠ ದಾನಿಗಳು ಎಂದು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ತಿಳಿಸಿದರು.

ಹಾಸನದಲ್ಲಿ ನಡೆದ ರಕ್ತದಾನ ಶಿಬಿರನಗರದ ರೆಡ್‍ಕ್ರಾಸ್ ಭವನದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು,

"ರಕ್ತದಾನ ಮಾಡುವುದು ಶ್ರೇಷ್ಠ ಕಾರ್ಯ. ಈ ನಿಟ್ಟಿನಲ್ಲಿ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಅಂತೆಯೇ ಈಗಿನ ಯುವ ಪೀಳಿಗೆ ಸ್ವಯಂ ಪ್ರೇರಿತರಾಗಿ ಹೆಚ್ಚು ಹೆಚ್ಚು ರಕ್ತದಾನ ಮಾಡಬೇಕು" ಎಂದರು.

ಬಳಿಕ ಜಿಲ್ಲಾ ಏಡ್ಸ್ ಮತ್ತು ಕ್ಷಯ ನಿಯಂತ್ರಣಾಧಿಕಾರಿ ನಾಗೇಶ್ ಆರಾಧ್ಯ ಮಾತನಾಡಿ, "ಪ್ರಸ್ತುತ ದಿನಗಳಲ್ಲಿಯೂ ಸಹ ಅನೇಕ ಜನರಿಗೆ ರಕ್ತದಾನದ ಬಗ್ಗೆ ತಪ್ಪು ತಿಳುವಳಿಕೆ ಇದೆ. ಆದ್ದರಿಂದ ಯುವ ಪೀಳಿಗೆ ರಕ್ತದಾನ ಮಾಡುವ ಮೂಲಕ ಈ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಲು ಮುಂದೆ ಬರಬೇಕು. ರಕ್ತಕ್ಕೆ ಪರ್ಯಾಯವಾದದ್ದು ಯಾವುದೂ ಇಲ್ಲ. ಹಾಗಾಗಿ ಎಲ್ಲರೂ ರಕ್ತದಾನ ಮಾಡಲು ಮುಂದಾಗಬೇಕು.

ಇದನ್ನೂ ಓದಿ: ಕೊರೋನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೂ ಪಂಜಾಬ್ ಮಾದರಿಯಾಗಲಿ; ನರೇಂದ್ರ ಮೋದಿ

ಈ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ರಕ್ತ ಶೇಖರಣೆಯಾಗಿರುವುದು ಸಂತೋಷದ ವಿಷಯ. ಕೆಲವರಿಗೆ ನಾವು ಉಚಿತವಾಗಿ ರಕ್ತದಾನ ಮಾಡಿದರೂ ಸಹ ನಮಗೆ ರಕ್ತದ ಅಗತ್ಯತೆ ಇದ್ದಾಗ ನಿರ್ದಿಷ್ಟ ಹಣ ಪಡೆದು ನೀಡಲಾಗುತ್ತದೆ. ಇದಕ್ಕೆ ಕಾರಣ ದಾನಿಗಳಿಂದ ಪಡೆದ ರಕ್ತವನ್ನು ನೇರವಾಗಿ ರೋಗಿಗಳಿಗೆ ನೀಡಲಾಗುವುದಿಲ್ಲ. ಅನೇಕ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರವೇ ನೀಡಬೇಕು. ಹಾಗಾಗಿ ಆ ಪರೀಕ್ಷೆಗೆ ತಗಲುವ ವೆಚ್ಚವನ್ನು ಮಾತ್ರ ಪಡೆಯಲಾಗುವುದು" ಎಂದು ಅವರು ಮಾಹಿತಿ ನೀಡಿದ್ದಾರೆ.
First published: June 17, 2020, 7:24 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories