ಹಾಸನ: ಹಾಸನ ಮತ್ತು ಅರಸೀಕೆರೆ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದರೂ ಕೂಡ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಹಾಸನ ಹಾಗೂ ಅರಸೀಕೆರೆ ನಗರಸಭೆಯ ಅಧ್ಯಕ್ಷ ಸ್ಥಾನ ಎಸ್‌ಟಿಗೆ ಮೀಸಲಾಗಿತ್ತು. ಎಸ್‌ಟಿ ಅಭ್ಯರ್ಥಿಗಳು ಬಿಜೆಪಿಯಿಂದ ಮಾತ್ರ ಜಯಗಳಿಸಿದ್ದರು. ಹೀಗಾಗಿ ಜೆಡಿಎಸ್ ಹೆಚ್ಚಿನ ಸ್ಥಾನ ಗೆದ್ದಿದ್ದರೂ, ಎರಡೂ ನಗರಸಭೆಯ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲೋಗೋದು ಖಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಕಾನೂನು ಬಾಹಿರ ಎಂದು ಜೆಡಿಎಸ್ ಮುಖಂಡರು ಈ ಹಿಂದೆಯೇ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಆದರೆ ಮತ್ತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತೆರವುಗೊಳಿಸಿದ್ದು, ನಾಳೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಪರಿಣಾಮ ಜೆಡಿಎಸ್ ಮುಖಂಡರು ಈ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಇಂದು ಸುಪ್ರೀಂಕೋರ್ಟ್ನಿಂದ ಮರು ವಿಚಾರಣೆಗೆ ಆದೇಶ ನೀಡಲಾಗಿದೆ. ನಾಳೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ನಡೆಸಬಹುದು. ಆದರೆ ಯಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎಂದು ಫಲಿತಾಂಶ ಪ್ರಕಟಿಸುವಂತಿಲ್ಲ.
ಇದನ್ನೂ ಓದಿ: ಯಾರ್ರೀ ಮುನಿರತ್ನ, ನಮಗೆ ಯಾವತ್ತಿದ್ದರೂ ಜನಗಳೇ ಗಾಡ್ಫಾದರ್: ಎಚ್.ಡಿ. ಕುಮಾರಸ್ವಾಮಿ
ಚುನಾವಣೆ ನಡೆಸಿದ ಬಳಿಕ ಇಡೀ ಕಡತವನ್ನ ಹೈಕೋರ್ಟ್ಗೆ ಸಲ್ಲಿಸಬೇಕು. ನಂತರ ಮತ್ತೆ ಹೈಕೋರ್ಟ್ನಲ್ಲಿ ಮರು ವಿಚಾರಣೆ ನಡೆಸಿ ಆದೇಶ ಪ್ರಕಟಿಸುವಂತೆ ತಿಳಿಸಿದೆ. ಇದರಿಂದಾಗಿ ಜೆಡಿಎಸ್‌ಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಬಿಜಿಪಿ ಪಕ್ಷಕ್ಕೆ ಕೊಂಚ ನೋವು ತಂದಿದೆ.
ವರದಿ: ಡಿಎಂಜಿ ಹಳ್ಳಿ ಅಶೋಕ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ