ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿರುವ ಲಕ್ಷಣ ಕಾಣಿಸುತ್ತಿದೆ; ಜಿಲ್ಲಾಧಿಕಾರಿ ಕಳವಳ

ಇಡೀ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ, ನಾವೇ ಎಲ್ಲರಿಂದ ದೂರ ಇರಬೇಕಾಗುತ್ತದೆ. ಜಿಲ್ಲೆಯಲ್ಲಿ ನಿಯಮ ಮೀರಿದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಕೋವಿಡ್ ಪ್ರಕರಣ ಹಾಸನದಲ್ಲಿ ಸಮುದಾಯಕ್ಕೆ ಹರಡಿರುವ ಲಕ್ಷಣ ಕಾಣಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
ಹಾಸನ ; ಮಾರಕ ಕೊರೋನಾ ಸೋಂಕು ಹಾಸನ ಜಿಲ್ಲೆಯಲ್ಲಿ ಸಮುದಾಯಕ್ಕೆ ಹರಡಿರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಕಳವಳ ವ್ಯಕ್ತಪಡಿಸಿದ್ದಾರೆ.

ಇಂದು ಕೊರೋನಾ ವಿಚಾರವಾಗಿ ಸುದ್ದಿಗಾರರರೊಂದಿಗೆ ಮಾತಾನಾಡಿದ ಅವರು, ಇಂದು ಹಾಸನ ಜಿಲ್ಲೆಯಲ್ಲಿ 28 ಹೊಸ ಕೋವಿಡ್ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ ಹಾಸನ ತಾಲೂಕಿನ 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈತ ಬೆಂಗಳೂರಿನಿಂದ ಬಂದಿದ್ದು, ಉಸಿರಾಟದ ತೊಂದರೆ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಇದುವರೆಗೂ ಹಾಸನದಲ್ಲಿ 58 ಕಂಟೈನ್ಮೆಂಟ್ ಜೋನ್ ಇದೆ. ಅದರ ಜೊತೆಗೆ ಇಂದು 13 ಹೊಸ ಕಂಟೈನ್ಮೆಂಟ್ ಜೋನ್ ಮಾಡಬೇಕಿದೆ. ಇದರಲ್ಲಿ 11 ಕಂಟೈನ್ಮೆಂಟ್ ಜೋನ್‍ಗಳ ನಿಗದಿತ ದಿನ ಈಗಾಗಲೇ ಮುಗಿದಿದೆ. ನಮ್ಮ ನಿಮ್ಮ ಸುತ್ತಮುತ್ತ ಪಾಸಿಟಿವ್ ಇರುವವರು ಇರಬಹುದು. ಎಚ್ಚರದಿಂದಿರಿ. ಹೆಚ್ಚು ಹೆಚ್ಚು ಪರೀಕ್ಷೆ ಮಾಡಿದಾಗ ಕೊರೋನಾ ಪಾಸಿಟಿವ್ ಬರುತ್ತಿರುವುದು ಇದಕ್ಕೆ ಉತ್ತಮ ಉದಾಹರಣೆ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ: ಕೊರೋನಾ ಮೃತದೇಹಗಳನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡಿದ್ದು ಖಂಡನೀಯ; ಸಿಎಂ ಯಡಿಯೂರಪ್ಪ

ಇಡೀ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ, ನಾವೇ ಎಲ್ಲರಿಂದ ದೂರ ಇರಬೇಕಾಗುತ್ತದೆ. ಜಿಲ್ಲೆಯಲ್ಲಿ ನಿಯಮ ಮೀರಿದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಕೋವಿಡ್ ಪ್ರಕರಣ ಹಾಸನದಲ್ಲಿ ಸಮುದಾಯಕ್ಕೆ ಹರಡಿರುವ ಲಕ್ಷಣ ಕಾಣಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
First published: