ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಕ್ರಮವಹಿಸಿ; ಅಧಿಕಾರಿಗಳಿಗೆ ಲಕ್ಷ್ಮಣ ಸವದಿ ಸೂಚನೆ

ಪ್ರತಿ ಮೂರು ತಿಂಗಳಿಗೊಮ್ಮೆ ಪ್ಲಾನ್‌ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಿ. ನಷ್ಟದಲ್ಲಿರುವ ಮಾರ್ಗಗಳು ಯಾವ ಕಾರಣಕ್ಕೆ ಆದಾಯ ಬರುವುದಿಲ್ಲ? ಎಂಬುದನ್ನು ಪತ್ತೆಮಾಡಿ. ಆ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಲಾಭ ತರುವ ಮಾರ್ಗಗಳಾಗಿ ಪರಿವರ್ತಿಸುವಂತೆ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.

news18-kannada
Updated:May 29, 2020, 6:24 PM IST
ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಕ್ರಮವಹಿಸಿ; ಅಧಿಕಾರಿಗಳಿಗೆ ಲಕ್ಷ್ಮಣ ಸವದಿ ಸೂಚನೆ
ಡಿಸಿಎಂ ಲಕ್ಷ್ಮಣ ಸವದಿ.
  • Share this:
ಹಾವೇರಿ (ಮೇ 29); ಕೋವಿಡ್ ಲಾಕ್‌ಡೌನ್ ಸಡಿಲಿಕೆ ನಂತರ ತ್ರೈಮಾಸಿಕ ಯೋಜನೆಗಳನ್ನು ರೂಪಿಸಿಕೊಂಡು ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಕೆಸಲ ನಿರ್ವಹಿಸಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.

ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿರುವ ಲಕ್ಷ್ಮಣ ಸವದಿ, "ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ದಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣಿಕವಾಗಿ ಶ್ರಮಿಸುವ ನಿಟ್ಟಿನಲ್ಲಿ ಕಾರ್ಯಕೈಗೊಳ್ಳಬೇಕು" ಎಂದು ಸಲಹೆ ನೀಡಿದ್ದಾರೆ.

"ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್‌ಗಳು ಓಡಾಡುತ್ತಿವೆ? ಈ ಪೈಕಿ ಯಾವ ರೂಟ್‌ಗಳು ಲಾಭದಾಯಕ? ಯಾವ ಮಾರ್ಗಗಳಲ್ಲಿ ನಷ್ಟ ಉಂಟಾಗುತ್ತಿದೆ? ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳು ಓಡಾಡುತ್ತವೆ? ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಮಾರ್ಗಗಳಲ್ಲಿ ಲಾಭ ತರುವ ನಿಟ್ಟಿನಲ್ಲಿ ಯೋಜನೆಯನ್ನು ತಯಾರಿಸಿ.

ಪ್ರತಿ ಮೂರು ತಿಂಗಳಿಗೊಮ್ಮೆ ಪ್ಲಾನ್‌ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಿ. ನಷ್ಟದಲ್ಲಿರುವ ಮಾರ್ಗಗಳು ಯಾವ ಕಾರಣಕ್ಕೆ ಆದಾಯ ಬರುವುದಿಲ್ಲ? ಎಂಬುದನ್ನು ಪತ್ತೆಮಾಡಿ. ಆ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಲಾಭ ತರುವ ಮಾರ್ಗಗಳಾಗಿ ಪರಿವರ್ತಿಸುವಂತೆ" ಸೂಚನೆ ನೀಡಿದ್ದಾರೆ.

ಇದಲ್ಲದೆ, "ನಿರ್ವಹಣಾ ಮತ್ತು ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು. ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸವನ್ನು ಕೈಗೊಳ್ಳಬೇಕು. ಪರವಾನಿಗೆ ಪಡೆಯದೆ ಬಸ್, ಟ್ರ್ಯಾಕ್ಸ್, ಟೆಂಪೋಟ್ರಾವೆಲ್ಸ್ ಓಡಾಟಕ್ಕೆ ಕಡಿವಾಣ ಹಾಕಬೇಕು. ಇಂತಹ ವಾಹನಗಳ ಪರಿವಾನಗಿಗಳನ್ನು ರದ್ದುಮಾಡಿ ಮೊಕದ್ದಮೆ ದಾಖಲಿಸಬೇಕು" ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯಸಭಾ ಸಚಿವಾಲಯದ ಸಿಬ್ಬಂದಿಗೆ ಕೊರೋನಾ ಪಾಸಿಟಿವ್; ಸಂಸತ್ ಭವನ ಸೀಲ್‌ಡೌನ್
First published: May 29, 2020, 6:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading