ಶಿವಮೊಗ್ಗ; ಕುಷ್ಟರೋಗಿಗಳ ಆತ್ಮಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ; ಎಂ.ಎಲ್. ವೈಶಾಲಿ

ಕುಷ್ಟರೋಗ ಗುಣಪಡಿಸಬಹುದಾದ ರೋಗ. ಗಾಂಧೀಜಿಯವರ ಆಶಯದಂತೆ ಕುಷ್ಟರೋಗ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್​ ಕಾರ್ಯಾಲಯ.

ಶಿವಮೊಗ್ಗ ಜಿಲ್ಲಾ ಪಂಚಾಯತ್​ ಕಾರ್ಯಾಲಯ.

  • Share this:
ಶಿವಮೊಗ್ಗ: ಪ್ರತಿಯೊಬ್ಬರೂ ಕುಷ್ಟರೋಗಿಗಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಅವರ ಆತ್ಮಗೌರವಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕು. ಕುಷ್ಟರೋಗಿಗಳಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡುಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದ್ದಾರೆ. ಇಂದು  ಜಿಲ್ಲಾ ಪಂಚಾಯತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಟರೋಗ ಜಾಗೃತಿ ಆಂದೋಲನದ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. 2021ರ ಜನವರಿ 31 ರಿಂದ ಫೆಬ್ರವರಿ 13ರವರೆಗೆ ಕುಷ್ಟರೋಗದ ಕುರಿತು ಜನರಲ್ಲಿ ಅರಿವು ಮೂಡಿಸಲು ನಡೆಸಲಾಗುತ್ತಿರುವ ಸ್ಪರ್ಶ್ ಜಾಗೃತಿ ಆಂದೋಲನದ ಕಾರ್ಯ ಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುಷ್ಟರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಲು ಅಧಿಕಾರಿಗಳು ತಮ್ಮ ಜಬಾಬ್ದಾರಿ ಅರಿತು ಕಾರ್ಯ ನಿರ್ವಹಿಸುವಂತೆ ಸೂಚಿನೆ ನೀಡಿದರು. ಕುಷ್ಟರೋಗಿಗಳಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡುವಂತೆ ಅವರು ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಈ ವೇಳೆ ಮಾತನಾಡಿರುವ ಅವರು, "ಕುಷ್ಟರೋಗ ಗುಣಪಡಿಸಬಹುದಾದ ರೋಗ. ಗಾಂಧೀಜಿಯವರ ಆಶಯದಂತೆ ಕುಷ್ಟರೋಗ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕಾದ ಅಗತ್ಯವಿದೆ. ನಮ್ಮ ಸುತ್ತಮುತ್ತಲ ಪರಿಸರದಲ್ಲಿ, ನೆರೆ-ಹೊರೆಯವರಲ್ಲಿ ಹಾಗೂ ಸಮುದಾಯದಲ್ಲಿ ಕುಷ್ಟರೋಗಿಗಳು ಕಂಡುಬಂದರೆ ಅವರಿಗೆ ಆರೋಗ್ಯ ಇಲಾಖೆಯಲ್ಲಿ ದೊರೆಯುವ ಉಚಿತ ಚಿಕಿತ್ಸೆ ಕೊಡಿಸುವಲ್ಲಿ ಶ್ರಮಿಸಬೇಕು" ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕುಷ್ಟರೋಗ ನಿರ್ಮೂಲನ ಅಧಿಕಾರಿ ಡಾ. ಶಮಾ ಅವರು ಮಾತನಾಡಿ, "ದೇಹದ ಮೇಲಿನ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರಬಣ್ಣದ ಮಚ್ಚೆಗಳು, ಕೈ ಅಥವಾ ಕಾಲುಗಳಲ್ಲಿ ಸ್ಪರ್ಶಜ್ಞಾನವಿಲ್ಲದಿರುವ ಜೋವು ಹಿಡಿಯುವ, ಮುಖದ ಮೇಲೆ, ಕಿವಿಯ ಮೇಲೆ ಮಚ್ಚೆಯಂತಹ ಹೊಳಪು ಇರುವುದು ಕುಷ್ಟರೋಗದ ಲಕ್ಷಣಗಳಾಗಿವೆ.

ಈ ರೀತಿಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ  ಜಿಲ್ಲಾ ಕುಷ್ಠರೋಗ ನಿರ್ಮೂಲಕ ಕೇಂದ್ರ ಸೇರಿದಂತೆ ಎಲ್ಲಾ ಆಸ್ಪತ್ರೆಗಳಿಗೆ ತೆರಳು ವೈದ್ಯರಿಂದ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಅಲ್ಲದೆ, ಈ ರೋಗಕ್ಕೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದರಿಂದ ರೋಗ ಗುಣವಾಗಲಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತೊಂದು ಗರಿ : Venture Capital ನಲ್ಲಿ ಬೆಂಗಳೂರು No.1

"ಚಿಕಿತ್ಸೆ ಪಡೆಯದ ರೋಗಿಗಳ ಮೂಗಿನ ದ್ರವದಿಂದ, ಉಸಿರಾಟ ಮೂಲಕ ಆರೋಗ್ಯವಂತರಿಗೆ ಹರಡುವ ಅಪಾಯವಿದೆ. ರೋಗದ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

ಇದರಿಂದಾಗಿ ಭವಿಷ್ಯದಲ್ಲಿ ಉಂಟಾಗಬಹುದಾದ ಅಂಗವಿಕಲತೆಯನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.  ಸಕಾಲಿಕ ಚಿಕಿತ್ಸೆಯಿಂದ ಕಾಯಿಲೆಯನ್ನು ಪೂರ್ಣಪ್ರಮಾಣದಲ್ಲಿ ಗುಣಪಡಿಸಲು ಅವಕಾಶವಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಈ ರೋಗಕ್ಕೆ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.
Published by:MAshok Kumar
First published: