ಕೋಲಾರದಲ್ಲಿ ತಹಶೀಲ್ದಾರ್‌ ಕೊಲೆ; ಜಮೀನು ವ್ಯಾಜ್ಯಕ್ಕೆ ಬಿತ್ತು ಸರ್ಕಾರಿ ಅಧಿಕಾರಿಯ ಹೆಣ

ತಾಲೂಕಿನಲ್ಲಿ ಒಳ್ಳೆ ಹೆಸರು ಮಾಡಿ, ಜನರ ವಿಶ್ವಾಸ ಗೆದ್ದಿದ್ದ ಅಧಿಕಾರಿ ಚಂದ್ರಮೌಳೇಶ್ವರ, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ರಾತ್ರಿ ಹಗಲು ದುಡಿದಿದ್ದರು. ಆದರೆ, ಕೊನೆಗೆ ಜಮೀನು ವ್ಯಾಜ್ಯಕ್ಕೆ ಹೀಗೆ ಕೊಲೆಯಾಗುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ದಕ್ಷ ಅಧಿಕಾರಿಯ ಸಾವಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

news18-kannada
Updated:July 9, 2020, 8:03 PM IST
ಕೋಲಾರದಲ್ಲಿ ತಹಶೀಲ್ದಾರ್‌ ಕೊಲೆ; ಜಮೀನು ವ್ಯಾಜ್ಯಕ್ಕೆ ಬಿತ್ತು ಸರ್ಕಾರಿ ಅಧಿಕಾರಿಯ ಹೆಣ
ಚಾಕು ಇರಿತಕ್ಕೆ ಮೃತಪಟ್ಟಿರುವ ಅಧಿಕಾರಿ ಚಂದ್ರಮೌಳೇಶ್ವರ್‌.
  • Share this:
ಕೋಲಾರ (ಜುಲೈ 09); ಜಮೀನು ವ್ಯಾಜ್ಯಕ್ಕಾಗಿ ನಿವೃತ್ತ ಶಿಕ್ಷಕರೊಬ್ಬರು ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ಇಂದು ನಡೆದಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸರ್ವೇ ನಡೆಸುವ ಸಲುವಾಗಿ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಇಂದು ಮಧ್ಯಾಹ್ನದ ವೇಳೆಗೆ ಕಳವಂಚಿ ಗ್ರಾಮಕ್ಕೆಬ ತೆರಳಿದ್ದರು. ಈ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್‌‌ಗೆ ಇರಿದಿದ್ದಾರೆ.

ರಾಮಮೂರ್ತಿ ಹಾಗೂ ಆರೋಪಿ ವೆಂಕಟಪತಿ ಎಂಬುವರ ನಡುವೆ ಜಮೀನು ವ್ಯಾಜ್ಯವಿದ್ದು, ರಾಮಮೂರ್ತಿ ಬಂಗಾರಪೇಟೆ ತಹಶೀಲ್ದಾರ್‌‌ಗೆ ಇಬ್ಬರ ಜಮೀನನ್ನು ಹದ್ದುಬಸ್ತು ಮಾಡುವಂತೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಇಂದು ತಹಶೀಲ್ದಾರ್ ಚಂದ್ರಮೌಳೇಶ್ವರ್, ಕಾಮಸಮುದ್ರ ಪೊಲೀಸ್ ಠಾಣೆಯ ಪೇದೆ ಜೊತೆ ಗ್ರಾಮಕ್ಕೆ ಭೇಟಿ ನೀಡಿದ್ದರು. ನಂತರ ಸರ್ವೇ ನಡೆಸಿದ ಅವರು ವೆಂಕಟಪತಿ ಜಮೀನಿನಲ್ಲಿ ಕಲ್ಲು ಹೂಳಿಸಿದ್ದಾರೆ. ಇದಕ್ಕೆ ಕೋಪಗೊಂಡ ವೆಂಕಟಪತಿ ಏಕಾಏಕಿ ತಹಶೀಲ್ದಾರ್ ಎದೆ ಭಾಗಕ್ಕೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ತಹಶೀಲ್ದಾರ್ ಗೆ ತೀವ್ರ ರಕ್ತ ಸ್ರಾವವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಕೋಲಾರದಲ್ಲಿ ತಹಶೀಲ್ದಾರ್‌ ಕೊಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಯಡಿಯೂರಪ್ಪ ಆಶ್ವಾಸನೆ
ತಾಲೂಕಿನಲ್ಲಿ ಒಳ್ಳೆ ಹೆಸರು ಮಾಡಿ, ಜನರ ವಿಶ್ವಾಸ ಗೆದ್ದಿದ್ದ ಅಧಿಕಾರಿ ಚಂದ್ರಮೌಳೇಶ್ವರ, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ರಾತ್ರಿ ಹಗಲು ದುಡಿದಿದ್ದರು. ಆದರೆ, ಕೊನೆಗೆ ಜಮೀನು ವ್ಯಾಜ್ಯಕ್ಕೆ ಹೀಗೆ ಕೊಲೆಯಾಗುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ದಕ್ಷ ಅಧಿಕಾರಿಯ ಸಾವಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
Published by: MAshok Kumar
First published: July 9, 2020, 8:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading