ಬೆಂಗಳೂರು (ಆಗಸ್ಟ್ 28); ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ಸರ್ಕಾರ ನೀಡುತ್ತಿರುವ ಬೆಂಬಲವೇ ರಾಜ್ಯದಲ್ಲಿ ದಲಿತರ ಕೊಲೆಗಳಿಗೆ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ದೇವಸ್ಥಾನದಲ್ಲಿ ತಮಗೆ ಸರಿಸಮಾನಾಗಿ ಕುಳಿತಿದ್ದಾರೆ ಎಂಬ ಕಾರಣಕ್ಕೆ ವಿಜಯಪುರದ ಸಿಂದಗಿ ತಾಲೂಕಿನಲ್ಲಿ 28 ವರ್ಷದ ಯುವಕ ಅನಿಲ ಇಂಗಳಗಿ ಅವರನ್ನು ಮೇಲ್ಜಾತಿಗೆ ಸೇರಿದ ಕೆಲವರು ನಿನ್ನೆ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆ ಮಾಡಿದ್ದರು. ದಲಿತ ಯುವಕನ ಕೊಲೆ ಇದೀ ರಾಜ್ಯದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.
ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ,
ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ @BJP4Karnataka ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ.
ಬಾಯಲ್ಲಿ ಸಮಾನತೆಯ ಮಂತ್ರ,
ಆಚರಣೆಯಲ್ಲಿ ಅಸಮಾನತೆಯ ಕುತಂತ್ರ.
2/2 pic.twitter.com/qJoCEoXh5B
— Siddaramaiah (@siddaramaiah) August 28, 2020
ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು. @CMofKarnataka ಅವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು.
ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ.
1/2 pic.twitter.com/tJu7rcOfZX
— Siddaramaiah (@siddaramaiah) August 28, 2020
ಹತ್ಯೆಗೀಡಾದ ಯುವಕ ಬೂದಿಹಾಳ ಪಿ.ಹೆಚ್. ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯಲ್ಲಿ ಮೇಲೆ ತಮಗೆ ಸರಿಸಮಾನಾಗಿ ಕುಳಿತಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಮೇಲ್ಜಾತಿಯ ಸಿದ್ದು ಸುಭಾಸ ಬಿರದಾರ ಎಂಬವರು ಆಕ್ಷೇಪಿಸಿ ಜಾತಿ ನಿಂದನೆ ಮಾಡಿದ್ದರು ಎಂದು ವರದಿ ಮಾಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ