ಮೊಬೈಲ್​ನಲ್ಲಿ​ ಗೇಮ್ ಆಡಬೇಡ ಎಂದು ಪೋಷಕರು ಬೈದಿದ್ದಕ್ಕೆ ನೇಣಿಗ ಶರಣಾದ ಬಾಲಕ

ನಿನ್ನೆ ಸಂಜೆ ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡದಂತೆ ಹೆತ್ತವರು ಬೈದಿದ್ದರು. ಇದರಿಂದ ಸಿಟ್ಟಾದ ಬಾಲಕ ರಾತ್ರಿ ಎಲ್ಲರೂ ಮಲಗಿದ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

news18-kannada
Updated:July 13, 2020, 10:13 AM IST
ಮೊಬೈಲ್​ನಲ್ಲಿ​ ಗೇಮ್ ಆಡಬೇಡ ಎಂದು ಪೋಷಕರು ಬೈದಿದ್ದಕ್ಕೆ ನೇಣಿಗ ಶರಣಾದ ಬಾಲಕ
ಪ್ರಾತಿನಿಧಿಕ ಚಿತ್ರ
  • Share this:
ಕಲಬುರ್ಗಿ; ಕೊರೋನಾ ಲಾಕ್ ಡೌನ್ ನಂತರ ಮನೆಯಲ್ಲಿರುವ ಮಕ್ಕಳು ಮೊಬೈಲ್​ಗೆ ಆಕರ್ಷಿತರಾಗುತ್ತಿದ್ದಾರೆ. ಅದರಲ್ಲಿಯೂ ಆನ್ ಲೈನ್ ಕ್ಲಾಸ್ ಇತ್ಯಾದಿಗಳ ಕಾರಣಕ್ಕಾಗಿ ಪೋಷಕರು ಸಹ ವಿದ್ಯಾರ್ಥಿಗಳಿಗೆ ಮೊಬೈಲ್ ಕೊಡುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಹೀಗೆ ಕೊಟ್ಟ ಮೊಬೈಲ್ ನಲ್ಲಿ ವಿದ್ಯಾರ್ಥಿಯೋರ್ವ ವೀಡಿಯೋ ಗೇಮ್ ಆಡುತ್ತಿದ್ದ. ವಿಡಿಯೋ ಗೇಮ್ ಆಡದಂತೆ ಪೋಷಕರು ಬೈದಿದ್ದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ಬಡಾವಣೆಯಲ್ಲಿ ನಡೆದಿದೆ.

ಬ್ರಹ್ಮಪುರದ ರಾಹುಲ್ ಸೊಲ್ಲಾಪುರ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಕಳೆದ ರಾತ್ರಿ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಸಂಜೆ ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡದಂತೆ ಹೆತ್ತವರು ಬೈದಿದ್ದರು. ಇದರಿಂದ ಸಿಟ್ಟಾದ ಬಾಲಕ ರಾತ್ರಿ ಎಲ್ಲರೂ ಮಲಗಿದ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನು ಓದಿ: ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ರಾಜ್ಯ ಸರ್ಕಾರ 2,200 ಕೋಟಿ ಲೂಟಿ ಹೊಡೆದಿದೆ: ಸಿದ್ದರಾಮಯ್ಯ ಗಂಭೀರ ಆರೋಪ

ಬಾಲಕನ ಸಾವಿಗೆ ಕುಟುಂಬ ಆಘಾತಗೊಂಡಿದೆ. ಚಿಕ್ಕ ವಯಸ್ಸಿನಲ್ಲಿಯೇ ಮಗ ಸಾವನ್ನಪ್ಪಿರೋದಕ್ಕೆ ಪೋಷಕರು ಕಣ್ಣೀರಲ್ಲೇ ಕೈತೊಳೆಯುವಂತಾಗಿದೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published by: HR Ramesh
First published: July 3, 2020, 5:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading