ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಎಲ್ಲರ ಸಹಕಾರ ಅಗತ್ಯ; ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಅಪ್ರಾಪ್ತೆ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರ ಕೆ.ಬಿ. ಶಿವಕುಮಾರ್​ ತಿಳಿಸಿದ್ದಾರೆ.

ಎಲ್ಲಾ ಸಮಾಜದವರನ್ನೂ ಕರೆದು ಸಭೆ ನಡೆಸುತ್ತಿರುವ ಶಿವಮೊಗ್ಗ ಜಿಲ್ಲಾಧಿಕಾರಿ.ಕೆ.ಬಿ. ಶಿವಕುಮಾರ್​.

ಎಲ್ಲಾ ಸಮಾಜದವರನ್ನೂ ಕರೆದು ಸಭೆ ನಡೆಸುತ್ತಿರುವ ಶಿವಮೊಗ್ಗ ಜಿಲ್ಲಾಧಿಕಾರಿ.ಕೆ.ಬಿ. ಶಿವಕುಮಾರ್​.

  • Share this:
ಶಿವಮೊಗ್ಗ; ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ. ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್​ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಡಿಸೆಂಬರ್ ಮೂರರಂದು ನಡೆದ ಗಲಾಟೆಯನ್ನು ತಟ್ಟಗಾಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.  ಜಿಲ್ಲಾಡಳಿತ ಸಭಾಂಗಣದಲ್ಲಿ ಇಂದು ಶಾಂತಿ ಸಮಿತಿ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ. ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ" ಎಂದು ತಿಳಿಸಿದ್ದಾರೆ.

"ಅಪ್ರಾಪ್ತೆ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವಾರು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು.

ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್ ಗಳ ಸಭೆಯನ್ನು ಅದಷ್ಟು ಬೇಗ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು" ಎಂದು ಅವರು ಎಲ್ಲರಲ್ಲೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ : Farmers Protest; ಅಮಿತ್​ ಶಾ ಜೊತೆಗಿನ ಭೇಟಿ; ಹೌದು-ಇಲ್ಲ ಎಂದಷ್ಟೇ ಉತ್ತರಿಸಿ ಎಂಬ ಬೇಡಿಕೆ ಮುಂದಿಟ್ಟ ರೈತ ಮುಖಂಡರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾತನಾಡಿ, "ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು" ಎಂದು ಮನವಿ ಮಾಡಿದ್ದಾರೆ.

ವಿವಿಧ ಸಮುದಾಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಹಲವಾರು ಸಲಹೆಗಳನ್ನು ಸಭೆಯ ಮುಂದು ಅಭಿಪ್ರಾಯ ವ್ಯಕ್ತಪಡಿಸಿದರು.  ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು  ನಿಯಂತ್ರಿಸಲು ಸಾಧ್ಯ. 144 ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು.
Published by:MAshok Kumar
First published: