ಕೊಡಗು; ನಿವೇಶನ ನೀಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಗುಡಿಸಲು ಹಾಕಲು ಸಂತ್ರಸ್ಥರು ನಿರ್ಧಾರ

ಸಂತ್ರಸ್ಥರ ಪ್ರತಿಭಟನೆಗೆ ಮಣಿದಿದ್ದ ಜಿಲ್ಲಾಡಳಿತ ಮತ್ತು ಸರ್ಕಾರ ಕೊನೆಗೂ ಸಂತ್ರಸ್ಥರಿಗೆ ನಿವೇಶನ ನೀಡುವ ಭರವಸೆ ನೀಡಿತ್ತು. ಅದರಂತೆ ಅಭ್ಯತ್ ಮಂಗಲದಲ್ಲಿ ಎಂಟುವರೆ ಎಕರೆ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದನ್ನು ಗುರುತಿಸಿ ಅದನ್ನು ತೆರವುಗೊಳಿಸಿತ್ತು.

ಕೊಡಗಿನ ಹೋರಾಟಗಾರರು.

ಕೊಡಗಿನ ಹೋರಾಟಗಾರರು.

  • Share this:
ಕೊಡಗು (ಆಗಸ್ಟ್​ 31): ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಹಂಚಿಕೆ ಮಾಡಲು ನಿವೇಶನ ಗುರುತಿಸಿ ಎರಡು ವರ್ಷಗಳೇ ಕಳೆದರು ನಿವೇಶನ ಹಂಚಿಕೆ ಮಾಡಲು ಜಿಲ್ಲಾಡಳಿತ ಆಸಕ್ತಿ ತೋರಿಸುತ್ತಿಲ್ಲ ಎಂದು ಪ್ರವಾಹ ಸಂತ್ರಸ್ಥರು ಕೊಡಗಿನ ಅಭ್ಯತ್ ಮಂಗಲದಲ್ಲಿ ಪ್ರತಿಭಟನಾ ಧರಣಿ ಮಾಡಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಅಭ್ಯತ್ ಮಂಗಲದಲ್ಲಿ ನಿವೇಶನಕ್ಕಾಗಿ  ಗುರುತ್ತಿಸಿರುವ ಜಾಗದಲ್ಲೇ ಧರಣಿ ಕುಳಿತ ಪ್ರತಿಭಟನಾಕಾ ರರು ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019 ರಲ್ಲಿ ಉಕ್ಕಿ ಹರಿದಿದ್ದ ಕಾವೇರಿ ಪ್ರವಾಹದಲ್ಲಿ ನೂರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಕಾಳಜಿ ಕೇಂದ್ರ ಸೇರಿದ್ದವು. ಅದರಲ್ಲಿ ಮುಖ್ಯವಾಗಿ ನೆಲ್ಯಹುದಿಕೇರಿ, ಕುಂಬಾರಗುಂಡಿ ಮತ್ತು ಬರಡಿ ಗ್ರಾಮಗಳ 150 ಕುಟುಂಬಗಳು ಮನೆ ಕಳೆದುಕೊಂಡಿದ್ದವು. ಈ ವೇಳೆ ಶಾಶ್ವತ ಸೂರು ಒದಗಿಸುವಂತೆ ಆಗ್ರಹಿಸಿ ಸಂತ್ರಸ್ಥರು ನಿರಂತರ ಮೂರು ತಿಂಗಳ ಕಾಲ ಕಾಳಜಿ ಕೇಂದ್ರದಲ್ಲೇ ಕುಳಿತು ಪ್ರತಿಭಟನೆ ಮಾಡಿದ್ದರು.

ಮಳೆ ಪ್ರವಾಹ ಎಲ್ಲಾ ಮುಗಿದರೂ ತಮಗೆ ಸುರಕ್ಷಿತ ಸ್ಥಳದಲ್ಲಿ ಬದಲಿ ಮನೆ ನಿರ್ಮಿಸಿ ಕೊಡುವವರೆಗೆ ತಾವು ಕಾಳಜಿ ಕೇಂದ್ರ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ಸಂತ್ರಸ್ಥರ ಪ್ರತಿಭಟನೆಗೆ ಮಣಿದಿದ್ದ ಜಿಲ್ಲಾಡಳಿತ ಮತ್ತು ಸರ್ಕಾರ ಕೊನೆಗೂ ಸಂತ್ರಸ್ಥರಿಗೆ ನಿವೇಶನ ನೀಡುವ ಭರವಸೆ ನೀಡಿತ್ತು. ಅದರಂತೆ ಅಭ್ಯತ್ ಮಂಗಲದಲ್ಲಿ ಎಂಟುವರೆ ಎಕರೆ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದನ್ನು ಗುರುತಿಸಿ ಅದನ್ನು ತೆರವುಗೊಳಿಸಿತ್ತು.

ಅಲ್ಲದೆ ಆ ಜಾಗದಲ್ಲಿ 150 ಕುಟುಂಬಗಳಿಗೂ ನಿವೇಶನ ಹಂಚಿಕೆ ಮಾಡಲು ಮುಂದಾಗಿತ್ತು. ಆದರೆ ನಿವೇಶನ ಗುರುತ್ತಿಸಿ ಎರಡು ವರ್ಷಗಳೇ ಕಳೆದರು ಇಂದಿಗೂ ಬಡಾವಣೆ ನಿರ್ಮಾಣ ಆಗಿಲ್ಲ. ಜೊತೆಗೆ ನಿವೇಶನದ ಜಾಗಕ್ಕೆ ತೆರಳಲು ಬೇಕಾದ ಸಂಪರ್ಕ ಸೇತುವೆ ಅಥವಾ ರಸ್ತೆ ನಿರ್ಮಾಣ ಮಾಡಿಲ್ಲ. ಹೀಗಾಗಿ ನಿವೇಶನ ಗುರುತ್ತಿಸಿ ಎರಡು ವರ್ಷಗಳೇ ಕಳೆದರು  ಇಂದಿಗೂ ನಿವೇಶನ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಸಂತ್ರಸ್ಥರು ಗುರುತ್ತಿಸಿರುವ  ಜಾಗದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Yogi Aditynath| ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ, ಮಾಂಸ ಸಂಪೂರ್ಣ ನಿಷೇಧಿಸಿ ಆದೇಶಿಸಿದ ಯೋಗಿ ಸರ್ಕಾರ

ಈ ವೇಳೆ ಮಾತನಾಡಿದ ಸಂತ್ರಸ್ಥರ ಹೋರಾಟ ಸಮಿತಿ ಮುಖಂಡ ಪಿ. ಆರ್ ಭರತ್, ಎರಡು ವರ್ಷಗಳಿಂದ ಹಲವು ಭಾರಿ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ಆದರೆ ಜಿಲ್ಲಾಡಳಿತ ಅನುದಾನವಿಲ್ಲ ಎನ್ನುತ್ತಿದೆ. ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗೀಸ್ ಮಾತನಾಡಿ ಸ್ವತಃ ನಾನು ಕೂಡ ಸಂತ್ರಸ್ಥನಾಗಿದ್ದೇನೆ. ಎರಡು ವರ್ಷಗಳ ಹಿಂದೆ ಮನೆ ಕಳೆದುಕೊಂಡು ಇಂದಿಗೂ ಪ್ರವಾಹದಲ್ಲಿ ಅಳಿದುಳಿದ ಮುರುಕಲು ಮನೆಗಳಲ್ಲಿ ವಾಸಿಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು 20 ದಿನಗಳ ಒಳಗಾಗಿ ನಿವೇಶನ ಹಂಚಿಕೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಗುಡಿಸಲು ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Kerala Corona| ಕೇರಳದಿಂದ ಬೆಂಗಳೂರಿಗೆ ಆಗಮಿಸುವವರಿಗೆ ವಿಶೇಷ ರೂಲ್ಸ್ ಜಾರಿ ಮಾಡಿದ ಪಾಲಿಕೆ!

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸ ಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂ ಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾ ಬ್ದಾರಿ ಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published: