ಗದಗ ಜಿಲ್ಲೆಯಲ್ಲಿ ಸೋಂಕಿತರಿಗೆ ಬೆಡ್, ಆಕ್ಸಿಜನ್ ಕೊರತೆ ಇಲ್ಲ; ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟನೆ

ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆ ಇಲ್ಲ. ಆದರೆ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಕೊರತೆ ಇದೆ. ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆ ಇದೆ. ಹೀಗಾಗಿ ಸರ್ಕಾರ ರೆಮ್ ಡಿಸಿವಿರ್ ಕೊರತೆ ಇರುವ ಕಾರಣ ಅವಿನಾಶ್ ಎಂಬ IAS ಅಧಿಕಾರಿಯನ್ನು ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಿದೆ ಎಂದರು.

ಸಿಎಂ ಬಿಎಸ್​ವೈ ಸಭೆಯಲ್ಲಿ ಭಾಗಿಯಾದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು.

ಸಿಎಂ ಬಿಎಸ್​ವೈ ಸಭೆಯಲ್ಲಿ ಭಾಗಿಯಾದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು.

  • Share this:
ಗದಗ: ಸಿಎಂ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ನಿಯಂತ್ರಣ ಹೊಣೆ ನೀಡಿದ್ದಾರೆ. ಹೀಗಾಗಿ ಗದಗ ಜಿಲ್ಲೆಯಲ್ಲಿ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಇನ್ನು ಗದಗ ಜಿಲ್ಲೆಯಲ್ಲಿ 650 ಮಂದಿ ಕೋವಿಡ್ ಸೋಂಕಿನವರು ಇದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ 111 ರೋಗಿಗಳು ಇದ್ರೆ, ಖಾಸಗಿ ಆಸ್ಪತ್ರೆಯಲ್ಲಿ 72 ಸೋಂಕಿತರು ಇದ್ದಾರೆ. ಇನ್ನು 467 ಮಂದಿ ಹೋಮ್ ಐಸೋಲೇಶನ್ ನಲ್ಲಿ‌ ಇದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಿದ್ದು, 700 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ‌. ಕೋವಿಡ್ ರೋಗ ಲಕ್ಷಣಗಳು ಇಲ್ಲದ ಸೋಂಕಿತರಿಗೆ ಕೊವೀಡ್ ಕೇರ್ ಸೆಂಟರ್ ನಲ್ಲಿ  ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ‌ಆಸ್ಪತ್ರೆಗಳಲ್ಲಿ 500 ಹಾಸಿಗೆ ವ್ಯವಸ್ಥೆ ಇದೆ. ಇನ್ನೂ 200 ಹೆಚ್ಚುವರಿ ಹಾಸಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ‌. ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಹಾಸಿಗೆ, ಆಕ್ಸಿಜನ್ ಕೊರತೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸಮಸ್ಯೆ ಇದೆ. ಅದಕ್ಕೂ ವ್ಯವಸ್ಥೆ ಮಾಡಲಾಗಿದೆ. ಸಾಯಿಕುಮಾರ ಅವರು ಉಚಿತವಾಗಿ ಆಕ್ಸಿಜನ್ ನೀಡುವುದಾಗಿ‌ ಹೇಳಿದ್ದಾರೆ. ಆಕ್ಸಿಜನ್ ಜನರೇಷನ್ ಮಾಡುವ ಯಂತ್ರಕ್ಕೆ ಆರೋಗ್ಯ ಸಚಿವ ಸುಧಾಕರ್ ಅವರಿಗೆ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಸಿ.ಸಿ‌ ಪಾಟೀಲ್ ಹೇಳಿದರು.

ಇದನ್ನು ಓದಿ: ಉಚಿತ ಆಕ್ಸಿಜನ್ ನೀಡುವ ಮೂಲಕ ಅನೇಕ ಸೋಂಕಿತರ ಪ್ರಾಣ ಉಳಿಸಿದ ಬೆಳಗಾವಿಯ ಕೊರೋನಾ ವಾರಿಯರ್!

ಇನ್ನು ರೆಮ್ ಡಿಸಿವಿರ್ ಇಂಜೆಕ್ಷನ್ ಪಾಸಿಟಿವ್ ಬಂದಂತಹ ಎಲ್ಲಾ ರೋಗಿಗಳಿಗೆ ಕೊಡಬೇಕಾದ ಅವಶ್ಯಕತೆ ಇಲ್ಲ. ಕೋವಿಡ್ ನಿರ್ಮೂಲನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಯಾವ ರೋಗಿಗೆ ರೆಮ್ ಡಿಸಿವಿರ್ ಇಂಜೆಕ್ಷನ್ ಅವಶ್ಯಕತೆ ಇದೆ ಅವರಿಗೆ ನೀಡಿ ಎಂದು ಸಚಿವ ಸಿ.ಸಿ.ಪಾಟೀಲ್ ಮನವಿ ಮಾಡಿಕೊಂಡರು.

ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆ ಇಲ್ಲ. ಆದರೆ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಕೊರತೆ ಇದೆ. ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆ ಇದೆ. ಹೀಗಾಗಿ ಸರ್ಕಾರ ರೆಮ್ ಡಿಸಿವಿರ್ ಕೊರತೆ ಇರುವ ಕಾರಣ ಅವಿನಾಶ್ ಎಂಬ IAS ಅಧಿಕಾರಿಯನ್ನು ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಿದೆ. ಸರಿಯಾದ ವ್ಯವಸ್ಥೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಗದಗನಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಡೈರೆಕ್ ಇಂಡೆಕ್ಟ್ ನಿಂದ ಇನ್ನು ರೆಮ್ ಡಿಸಿವಿರ್ ಇಂಜೆಕ್ಷನ್ ಬಂದಿಲ್ಲ. ಇನ್ನು ಎರಡು ದಿನಗಳಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರಿಗೂ ರೆಮ್ ಡಿಸಿವಿರ್ ಇಂಜೆಕ್ಷನ್ ಸಿಗುತ್ತೇ ಎಂದು ಸಚಿವ ಸಿ.ಸಿ‌ ಪಾಟೀಲ್ ಭರವಸೆ ನೀಡಿದ್ದಾರೆ.

ವರದಿ: ಸಂತೋಷ ಕೊಣ್ಣೂರ
Published by:HR Ramesh
First published: