ಇನ್ನು ಮುಂದೆ ಬಿಜೆಪಿಯಲ್ಲಿ ಬಂಡಾಯ ಭುಗಿಲೇಳಲಿದೆ; ಪ್ರಿಯಾಂಕ್ ಖರ್ಗೆ, ಅಜಯಸಿಂಗ್ ಭವಿಷ್ಯ
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿಯೂ ಶೇ.60 ರಿಂದ 65 ರಷ್ಟು ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಆದರೆ ತಮ್ಮ ಬೆಂಬಲಿತ ಸದಸ್ಯರೇ ಹೆಚ್ಚು ಗೆದ್ದಿದ್ದಾರೆ ಎಂದು ಬಿಜೆಪಿ ಭ್ರಮಾ ಲೋಕದಲ್ಲಿದೆ. ಕಾಂಗ್ರೆಸ್ ಪಕ್ಷದ ಬೇರುಗಳು ಆಳವಾಗಿ ಬೇರೂರಿದ್ದು, ನೆಲ ಕಚ್ಚೋ ಪ್ರಶ್ನೆಯೇ ಇಲ್ಲ ಎಂದರು.
news18-kannada Updated:January 13, 2021, 5:20 PM IST

ಸುದ್ದಿಗೋಷ್ಠಿ ನಡೆಸಿದ ಅಜಯ್ ಸಿಂಗ್ ಮತ್ತು ಪ್ರಿಯಾಂಕ್ ಖರ್ಗೆ.
- News18 Kannada
- Last Updated: January 13, 2021, 5:20 PM IST
ಕಲಬುರ್ಗಿ; ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕೊನೆಗೂ ನಡೆದಿದೆ. ಸಚಿವ ಸ್ಥಾನ ಸಿಕ್ಕೋರಿಗೆ ಖುಷಿಯಾಗಿದ್ದರೆ, ಸಂಪುಟದಲ್ಲಿ ಸ್ಥಾನ ಗಿಟ್ಟಿಸದೇ ಇರೋರು ಮಾತ್ರ ಮನಸ್ಸಿನಲ್ಲಿಯೇ ಕುದಿಯುತ್ತಿದ್ದಾರೆ. ಇದೇ ಸಂದರ್ಭದಲ್ಲಿಯೇ ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಬಂಡಾಯ ಭುಗಿಲೇಳಲಿದೆ ಎಂದು ಕಾಂಗ್ರೆಸ್ ನಾಯಕರು ಭವಿಷ್ಯ ನುಡಿದಿದ್ದಾರೆ. ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಬಂಡಾಯ ಸ್ಫೋಟ ಗ್ಯಾರೆಂಟಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್ ಭವಿಷ್ಯ ನುಡಿದಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಉಭಯ ನಾಯಕರು, ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನ ಇದೆ. ಸಾಕಷ್ಟು ಗುಂಪುಗಾರಿಕೆ ನಡೆಯುತ್ತಿದೆ. ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಏನಾಗುತ್ತೆ ಅಂತಾ ನೀವೇ ನೋಡಿ ಎಂದಿದ್ದಾರೆ. ಅಸಮಾಧಾನ ಸ್ಫೋಟ ಆಗೋ ಮಾಹಿತಿ ನಮಗಿದೆ. ಪ್ರೈಮ್ ಟೈಂ ನಲ್ಲಿ ನಿಮ್ಮ ಟಿವಿಯಲ್ಲಿ ಏನ್ ಹಾಕ್ತಿರಾ ಅಂತಾ ನೀವೇ ನೋಡಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನಕ್ಕೆ ಒಂದೂ ಸಚಿವ ಸ್ಥಾನ ಸಿಕ್ಕಿಲ್ಲ. ಹಲವಾರು ಮೂಲ ಬಿಜೆಪಿಗರಿಗೆ ಸಚಿವ ಸ್ಥಾನದ ಭಾಗ್ಯವಿಲ್ಲ. ಹೀಗಾಗಿ ಹಲವಾರು ನಾಯಕರಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಸಂಪುಟ ವಿಸ್ತರಣೆಯ ನಂತರ ಅಸಮಾಧಾನ ಭುಗಿಲೆದ್ದು, ಬಂಡೇಳೋ ಲಕ್ಷಣಗಳಿವೆ ಎಂದಿದ್ದಾರೆ. ಕಲ್ಯಾಣ ಕರ್ನಾಟಕದ ಕುರಿತ ಶ್ವೇತ ಪತ್ರ ಹೊರಡಿಸಿ
ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದಿಂದ ಘೋರ ಅನ್ಯಾಯ ಆಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತ ಶ್ವೇತ ಪತ್ರ ಹೊರಡಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂದ ನಂತರ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದೆ. ಆದರೆ ಕಲ್ಯಾಣ ಕರ್ನಾಟಕದ ನಿಜವಾದ ಕಲ್ಯಾಣಕ್ಕೆ ಮಾತ್ರ ಶ್ರಮಿಸಿಲ್ಲ. ಕೆ.ಕೆ.ಆರ್.ಡಿ.ಬಿ.ಗೆ ಇದುವರೆಗೂ ಸಮಿತಿಯನ್ನೇ ರಚಿಸಿಲ್ಲ. ಒಂದೇ ಒಂದು ಸಭೆಯನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 7 ಮಂದಿಯ ಬಗ್ಗೆ ಇಲ್ಲಿದೆ ಕಿರುಪರಿಚಯ!
ಬಿಜೆಪಿ ಬರೀ ಘೋಷಣೆಗಳನ್ನು ಮಾಡುತ್ತಿದೆಯೇ ಹೊರತು ಒಂದೂ ಅಭಿವೃದ್ಧಿ ಕೆಲಸ ಮಾಡ್ತಿಲ್ಲ. ಕಾಂಗ್ರೆಸ್ ಮಾಡಿದ ಕೆಲಸಗಳನ್ನೇ ಉದ್ಘಾಟನೆ ಮಾಡಿದ್ದೇ ಅವರ ದೊಡ್ಡ ಸಾಧನೆ. ಬಿಜೆಪಿಯದ್ದು ಭಂಡ ಸರ್ಕಾರವಾಗಿದ್ದು, ಅದರ ಸಾಧನೆ ಶೂನ್ಯ. ಕಲ್ಯಾಣ ಕರ್ನಾಟಕದ ಬಗ್ಗೆ ಮಾತನಾಡೋಕೆ ಬಿಜೆಪಿಗೆ ನೈತಿಕತೆಯಿಲ್ಲ. ಬಿಜೆಪಿ ಸರ್ಕಾರ ಬಂದಾಗನಿಂದ ಕಲ್ಯಾಣ ಕರ್ನಾಟಕಕ್ಕೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎಂದು ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿಯೂ ಶೇ.60 ರಿಂದ 65 ರಷ್ಟು ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಆದರೆ ತಮ್ಮ ಬೆಂಬಲಿತ ಸದಸ್ಯರೇ ಹೆಚ್ಚು ಗೆದ್ದಿದ್ದಾರೆ ಎಂದು ಬಿಜೆಪಿ ಭ್ರಮಾ ಲೋಕದಲ್ಲಿದೆ. ಕಾಂಗ್ರೆಸ್ ಪಕ್ಷದ ಬೇರುಗಳು ಆಳವಾಗಿ ಬೇರೂರಿದ್ದು, ನೆಲ ಕಚ್ಚೋ ಪ್ರಶ್ನೆಯೇ ಇಲ್ಲ ಎಂದರು.
ಕಲಬುರ್ಗಿಯಲ್ಲಿ ಮಾತನಾಡಿದ ಉಭಯ ನಾಯಕರು, ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನ ಇದೆ. ಸಾಕಷ್ಟು ಗುಂಪುಗಾರಿಕೆ ನಡೆಯುತ್ತಿದೆ. ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಏನಾಗುತ್ತೆ ಅಂತಾ ನೀವೇ ನೋಡಿ ಎಂದಿದ್ದಾರೆ. ಅಸಮಾಧಾನ ಸ್ಫೋಟ ಆಗೋ ಮಾಹಿತಿ ನಮಗಿದೆ. ಪ್ರೈಮ್ ಟೈಂ ನಲ್ಲಿ ನಿಮ್ಮ ಟಿವಿಯಲ್ಲಿ ಏನ್ ಹಾಕ್ತಿರಾ ಅಂತಾ ನೀವೇ ನೋಡಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನಕ್ಕೆ ಒಂದೂ ಸಚಿವ ಸ್ಥಾನ ಸಿಕ್ಕಿಲ್ಲ. ಹಲವಾರು ಮೂಲ ಬಿಜೆಪಿಗರಿಗೆ ಸಚಿವ ಸ್ಥಾನದ ಭಾಗ್ಯವಿಲ್ಲ. ಹೀಗಾಗಿ ಹಲವಾರು ನಾಯಕರಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಸಂಪುಟ ವಿಸ್ತರಣೆಯ ನಂತರ ಅಸಮಾಧಾನ ಭುಗಿಲೆದ್ದು, ಬಂಡೇಳೋ ಲಕ್ಷಣಗಳಿವೆ ಎಂದಿದ್ದಾರೆ.