HOME » NEWS » District » THREE SSLC STUDENTS MET WITH AN ACCIDENT WHEN RETURNING HOME AFTER EXAMINATION AT GADAG SNVS

SSLC ಪರೀಕ್ಷೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಅಪಘಾತ; ಮೂವರಿಗೆ ಗಂಭೀರ ಗಾಯ

ಇಂದು SSLC ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್ನಲ್ಲಿ ತಮ್ಮೂರಿಗೆ ತೆರಳುವ ವೇಳೆ ಈ ಅಪಘಾತವಾಗಿದೆ.

news18-kannada
Updated:June 25, 2020, 5:20 PM IST
SSLC ಪರೀಕ್ಷೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಅಪಘಾತ; ಮೂವರಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
  • Share this:
ಗದಗ (ಜೂನ್ 25): ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಸಂಭವಿಸಿದೆ. ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಅನ್ನೋ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು SSLC ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ ತಮ್ಮೂರಿಗೆ ತೆರಳುವ ವೇಳೆ ಈ ಅಪಘಾತವಾಗಿದೆ. ಮುಂಡರಗಿ ಮಾರ್ಗವಾಗಿ ಹೋಗುತ್ತಿದ್ದ ಲಾರಿ, ಟಿಪ್ಪರ್ ಓವರ್​ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯರೊಬ್ಬರ ವಾಹನಕ್ಕೂ ಲಾರಿ ಡಿಕ್ಕಿ ಹೊಡೆದಿಯಿತು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೋನಾ ವಿಚಾರದಲ್ಲಿ ಬೆಂಗಳೂರು ಈವರೆಗೆ ಸೇಫ್ ಆಗಿಯೇ ಇದೆ, ಪರಿಸ್ಥಿತಿ ಕೈಮೀರಿಲ್ಲ; ಆರ್. ಅಶೋಕ್

Youtube Video


ಸದ್ಯ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಮುಂಡರಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ‌ ಬಳಿಕ ಗದಗನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಜರುಗಿದೆ.

ವರದಿ: ಸಂತೋಷ ಕೊಣ್ಣೂರ
First published: June 25, 2020, 5:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories