ಬೆಳಗಾವಿ (ಏ. 14); ಬೆಳಗಾವಿ ಲೋಕಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನ ಉಳಿದಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಎರಡು ದಿನ ವಾಸ್ತವ್ಯ ಮಾಡಿ ಸಿಎಂ ಬಿ ಎಸ್ ಯಡಿಯೂರಪ್ಪ ಭರ್ಜರಿ ಮತ ಬೇಟೆ ನಡೆಸಲಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಸ್ವಕ್ಷೇತ್ರ ಗೋಕಾಕ್ ನಲ್ಲಿ ಸಿಎಂ ಪ್ರಚಾರ ನಡೆಸಲಿದ್ದು, ರಮೇಶ ಜಾರಕಿಹೊಳಿ ಭಾಗವಹಿಸುವ ಸಾಧ್ಯತೆ ಇದೆ. ಇನ್ನೂ ಎಂಇಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯ ಪರವಾಗಿ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ ರಾವಲ್ ಸಹ ಪ್ರಚಾರ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಕೊನೆಯ ಮೂರು ದಿನ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ಮತ ಬೇಟೆ ನಡೆಸಲಿವೆ.
ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಏಪ್ರಿಲ್ 15ರ ಸಂಜೆ ತೆರೆ ಬಿಳಲಿವೆ. ಏ. 17ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಹಂತದಲ್ಲಿ ಎರಡು ದಿನ ಭರ್ಜರಿ ಪ್ರಚಾರ ಮಾಡಲು ರಾಜಕೀಯ ಪಕ್ಷಗಳು ಸಿದ್ದತೆಯನ್ನು ಮಾಡಿಕೊಂಡಿವೆ. ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿಗೆ ಆಗಮಿಸಲಿದ್ದಾರೆ. ಎರಡು ದಿನ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಪ್ರಚಾರ ಕಾರ್ಯ ನಡೆಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಪರವಾಗಿ ನಾಲ್ಕು ಬಹಿರಂಗ ಸಮಾವೇಶದಲ್ಲಿ ಸಿಎಂ ಬಿಎಸ್ವೈ ಭಾಗವಹಿಸಲಿದ್ದಾರೆ.
ಇದನ್ನು ಓದಿ: ರಾಮನಗರ- ಚನ್ನಪಟ್ಟಣ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಹವಾ, ಕಾಂಗ್ರೆಸ್ ಸೇಫ್ ಜೋನ್, ಬಿಜೆಪಿ ಫುಲ್ ಫೈಟ್!
ದಿನಾಂಕ 14ರಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ ನಂತರ ಹೆಲಿಕಾಪ್ಟರ್ ಮೂಲಕ ಮೂಡಲಗಿ ಪ್ರಯಾಣ ಬೆಳಸಲಿದ್ದಾರೆ. ಮೂಡಲಗಿ ಪಟ್ಟಣದಲ್ಲಿ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಪರವಾಗಿ ಮತ ಪ್ರಚಾರ ನಡೆಸಲಿದ್ದಾರೆ. ನಂತರ ಗೋಕಾಕ್ ಆಗಮಿಸಿ ಕೊಳವಿ ಹಣಮಂತ ದೇವಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ರೋಡ್ ಶೋ ನಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಈ ವೇಳೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಜಗದೀಶ ಶೆಟ್ಟರ್ ಸಾಥ್ ನೀಡಲಿದ್ದಾರೆ. ಇನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಹ ಭಾಗವಹಿಸುವ ಸಾಧ್ಯತೆ ಇದೆ. ಏ. 15ರಂದು ಸಹ ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿಯ ದಕ್ಷಿಣ ಮತ ಕ್ಷೇತ್ರ ಹಾಗೂ ಗ್ರಾಮೀಣದಲ್ಲಿ ಪ್ರಚಾರ ನಡೆಸಲಿದ್ದಾರೆ.
ವರದಿ: ಚಂದ್ರಕಾಂತ್ ಸುಗಂದಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ