ಭೋರ್ಗರೆಯುತ್ತಿರುವ ಭರಚುಕ್ಕಿ: ಇನ್ನೆರಡು ದಿನಗಳಲ್ಲಿ ಪ್ರವಾಸಿಗಳ ಪ್ರವೇಶ ನಿರ್ಬಂಧ ತೆರವು

ಕೊರೋನಾ ಭೀತಿ ಹಿನ್ನಲೆಯಲ್ಲಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಭರಚುಕ್ಕಿ ಜಲಪಾತಕ್ಕೂ ಪ್ರವಾಸಿಗರ ಪ್ರವೇಶ ಇಲ್ಲದಂತಾಗಿದೆ. ಪ್ರವಾಸಿಗರಿಗೆ ಪ್ರವೇಶ   ನಿರ್ಬಂಧ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭರಚುಕ್ಕಿ  ಜಲಪಾತಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗಗನಚುಕ್ಕಿ-ಭರಚುಕ್ಕಿ.

ಗಗನಚುಕ್ಕಿ-ಭರಚುಕ್ಕಿ.

  • Share this:
ಚಾಮರಾಜನಗರ ( ಆಗಸ್ಟ್ 09) ವರುಣನ ಅಬ್ಬರ ಒಂದೆಡೆ ಅಪಾರ ಆಸ್ತಿ-ಪಾಸ್ತಿ ನಷ್ಟಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ರುದ್ರ ರಮಣೀಯ ದೃಶ್ಯಕ್ಕು ಸಾಕ್ಷಿಯಾಗಿದೆ. ಕೆಆರ್‌ಎಸ್‌ ಹಾಗು ಕಬಿನಿ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಚಾಮರಾಜನಗರ ಜಿಲ್ಲೆಯ ಭರಚುಕ್ಕಿ  ಭೋರ್ಗೆರೆದು ಧುಮ್ಮಿಕ್ಕುತ್ತಿದೆ.

ಕೊಡಗಿನಿಲ್ಲಿ ಹುಟ್ಟಿ, ಮೈಸೂರು ಮಂಡ್ಯ ಜಿಲ್ಲೆಗಳಲ್ಲಿ ಹರಿದು ಚಾಮರಾಜನಗರ ಜಿಲ್ಲೆಗೆ ಪ್ರವೇಶಿಸುವ ಕಾವೇರಿ ಕೊಳ್ಳೇಗಾಲ ತಾಲೋಕು  ಶಿವನಸಮುದ್ರದ ಬಳಿ ಎರಡು ಕವಲಾಗಿ  ಹರಿದು ಒಂದೆಡೆ ಗಗನಚುಕ್ಕಿಯಾಗಿ ಇನ್ನೊಂದೆಡೆ ಭರಚುಕ್ಕಿಯಾಗಿ ಭೋರ್ಗೆರೆದು ಧುಮ್ಮಿಕುತ್ತಿದೆ. ಕರ್ನಾಟಕದ ನಯಾಗಾರ ಎಂದೆ ಹೆಸರಾದ ಭರಚುಕ್ಕಿಯಲ್ಲಿ ಬೆಟ್ಟಗುಡ್ಡಗಳ ನಡುವೆ ಕವಲು ಕವಲಾಗಿ ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಕಣ್ಣೆಗಳೆರಡು ಸಾಲದಂತೆ ಭಾಸವಾಗುತ್ತಿದೆ.

ಆದರೆ  ಕೊರೋನಾ ಭೀತಿ ಹಿನ್ನಲೆಯಲ್ಲಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಭರಚುಕ್ಕಿ ಜಲಪಾತಕ್ಕೂ ಪ್ರವಾಸಿಗರ ಪ್ರವೇಶ ಇಲ್ಲದಂತಾಗಿದೆ. ಪ್ರವಾಸಿಗರಿಗೆ ಪ್ರವೇಶ   ನಿರ್ಬಂಧ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭರಚುಕ್ಕಿ  ಜಲಪಾತಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಲಪಾತದ ಸೊಬಗು ಸವಿಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಮಗೆ ಸೂಚನೆ ನೀಡಿದ್ದಾರೆ, ಈ  ಹಿನ್ನಲೆಯಲ್ಲಿ ಅರಣ್ಯ ಹಾಗು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ  ಕರೆದು ಇನ್ನೆರೆಡು ದಿನದಲ್ಲಿ ನಿರ್ಬಂಧ ತೆರವುಗೊಳಿಸಲಾಗುವುದು, ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ  ಕಬಿನಿ ಹಾಗೂ ಕೆ.ಆರ್.ಎಸ್. ಜಲಾಶಯಗಳಿಂದ  ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವುದರಿಂದ ಭರಚುಕ್ಕಿಗೆ ಮತ್ತೆ ಜೀವ ಕಳೆ ಬಂದಿದೆ. ಕಾವೇರಿಯ ಜಲವೈಭವ ಅನಾವರಣಗೊಂಡಿದೆ.

ಇದನ್ನೂ ಓದಿ : ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ದಾಳಿ; 7 ಜನರ ಮೇಲೆ ಪ್ರಕರಣ ದಾಖಲು

ಸುತ್ತಲೂ ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡಗಳು. ಬೆಟ್ಟಗುಡ್ಡಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿರುವ ಕಾವೇರಿ ಭರಚುಕ್ಕಿಯಲ್ಲಿ  ಅತ್ಯಂತ ವಿಶಾಲವಾಗಿ ಕವಲು ಕವಲಾಗಿ ರಭಸದಿಂದ ಧುಮ್ಮಿಕ್ಕುವ  ದೃಶ್ಯಕಾವ್ಯ ವರ್ಣನಾತೀತವಾಗಿದೆ.

ಒಟ್ಟಾರೆ ಕಳೆದ ಹಲವಾರು ದಿನಗಳಿಂದ  ನೀರಿಲ್ಲದೆ ಜೀವಕಳೆ ಮಾಯವಾಗಿದ್ದ ಭರಚುಕ್ಕಿಯಲ್ಲಿ ಈಗ ಝುಳುಝುಳು ನಿನಾದ ಕೇಳಿಬರುತ್ತಿದೆ. ಹಾಲ್ನೊರೆಯಂತ ಜಲಧಾರೆಗಳು ಧುಮ್ಮಿಕುತ್ತಿವೆ. ಮರಗಿಡಗಳು ಹಸಿರಿನಿಂದ ಕಂಗೊಳಿಸುತ್ತಾ ಕಾವೇರಿಯ ಸೊಬಗನ್ನು ಇಮ್ಮಡಿಗೊಳಿಸಿವೆ.
Published by:MAshok Kumar
First published: