ಕೊರೋನಾ ರೋಗಿಗಳ ಮಾಹಿತಿ ನೀಡದ ಆರೋಪ ; ಕಲಬುರ್ಗಿಯ ಎರಡು ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು

ಕೆಲ ವ್ಯಕ್ತಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗಂಭೀರ ಸ್ವರೂಪ ಪಡೆದುಕೊಂಡ ನಂತರ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ. ಇದರಿಂದಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ.

news18-kannada
Updated:July 10, 2020, 2:53 PM IST
ಕೊರೋನಾ ರೋಗಿಗಳ ಮಾಹಿತಿ ನೀಡದ ಆರೋಪ ; ಕಲಬುರ್ಗಿಯ ಎರಡು ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು
ಸಾಂದರ್ಭಿ ಚಿತ್ರ
  • Share this:
ಕಲಬುರ್ಗಿ(ಜುಲೈ.10): ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,901ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಕೊರೋನಾ ರಣಕಹಳೆ ಮೊಳಗಿಸುತ್ತಿದ್ದರೂ ಕೆಲ ಖಾಸಗಿ ಆಸ್ಪತ್ರೆಗಳು ಮಾತ್ರ ಬೇಜವಾಬ್ದಾರಿಯಿಂದ ವರ್ತಿಸುತ್ತಿವೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಮಾಹಿತಿ ನೀಡದ ಆರೋಪದ ಮೇಲೆ ಕಲಬುರ್ಗಿಯ ಎರಡು ಖಾಸಗಿ ಆಸ್ಪತ್ರೆಗಳ ನೋಂದಣಿ ರದ್ದು ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಎ.ಜಬ್ಬಾರ್, ಕೆ.ಪಿ.ಎಂ.ಇ. ಕಾಯ್ದೆ 2017ರ ಅನ್ವಯ ಮಾನ್ಯತೆ ರದ್ದು ಮಾಡಲಾಗಿದೆ ಎಂದಿದ್ದಾರೆ. ILI ಹಾಗೂ SARI ರೋಗಿಗಳ ಮಾಹಿತಿ ನೀಡದ ಆರೋಪ ಎರಡೂ ಆಸ್ಪತ್ರೆಗಳ ವಿರುದ್ಧ ಕೇಳಿಬಂದಿದೆ. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕಗೊಳ್ಳುತ್ತಿದೆ. ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ಬಂದು ಸಾಯುವವರ ಸಂಖ್ಯೆಯೂ ಹೆಚ್ಚಳವಾಗಿದೆ.

ಕೆಲ ವ್ಯಕ್ತಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗಂಭೀರ ಸ್ವರೂಪ ಪಡೆದುಕೊಂಡ ನಂತರ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ. ಇದರಿಂದಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ಸಂಬಂಧ ಕೊರೋನಾಗೆ ಸಂಬಂಧಿಸಿದ ಎಲ್ಲ ರೋಗಿಗಳ ಮಾಹಿತಿ ನೀಡುವತೆ ಸೂಚಿಸಿದ್ದ ಆರೋಗ್ಯ ಇಲಾಖೆ. ಇದರ ಹೊರತಾಗಿಯೂ ILI ಹಾಗೂ SARI ರೋಗಿಗಳ ಮಾಹಿತಿಯನ್ನು ಅಂತರ್ಜಾಲ ಅಥವಾ ಲಿಖಿತವಾಗಿ ಸಲ್ಲಿಸದ ಆಸ್ಪತ್ರೆಗಳು ನಿರ್ಲಕ್ಷ್ಯ ವಹಿಸಿದ್ದವು. ಈ ಹಿನ್ನೆಲೆಯಲ್ಲಿ ಎರಡು ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು ಮಾಡಿ ಖಾಸಗಿ ಆಸ್ಪತ್ರೆಗಳಿಗೆ ಚುರುಕು ಮುಟ್ಟಿಸಲಾಗಿದೆ.

ಈ ಹಿಂದೆಯೂ ಕೊರೋನಾ ರೋಗಿಗಳ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಕೆಲ ಆಸ್ಪತ್ರೆಗಳನ್ನು ಕೆಲ ದಿನ ಬಂದ್ ಮಾಡಿಸಿದ್ದ ಆರೋಗ್ಯ ಇಲಾಖೆ. ಇಷ್ಟಾದರೂ ಕೆಲ ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗ ಲಕ್ಷಣ ಹೊಂದಿದವರಿಗೆ ಚಿಕಿತ್ಸೆ ನೀಡಿ, ಅದರ ಬಗ್ಗೆ ಮಾಹಿತಿಯನ್ನೂ ನೀಡದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ :  ವಿಜಯಪುರ ಜನರ ವಿಮಾನಯಾನ ಕನಸು ನನಸಾಗುವತ್ತ ಮೊದಲ ಹೆಜ್ಜೆ ; ಮೊದಲ ಹಂತದ ಕಾಮಗಾರಿಗೆ ಸಚಿವ ಸಂಪುಟ ಸಭೆ ಅನುಮತಿ

ಸೇವಾ ಸಿಂಧುವಿನಲ್ಲಿ ನೋಂದಣಿ ಮಾಡಲು ಹಣ ವಸೂಲಿ ಮಾಡಿದ ಹಿನ್ನೆಲೆ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಮಲ್ಲಿನಾಥ್ ತಡಕಲ್ ಅಮಾನತ್ತಾದ ಗ್ರಾಮ ಲೆಕ್ಕಾಧಿಕಾರಿ. ಹೊರ ರಾಜ್ಯದಿಂದ ಬರುವ ಪ್ರಯಾಣಿಕರಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಲು ಹಣ ಪಡೆದಿದ್ದ ಆರೋಪ ಕೇಳಿಬಂದಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಕಲಬುರ್ಗಿ ಸಹಾಯಕ ಆಯುಕ್ತರು ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Published by: G Hareeshkumar
First published: July 10, 2020, 2:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading