ಮತಾಂತರದ ಆರೋಪ; ಉಡುಪಿ ಚರ್ಚ್​ ಮೇಲೆ ಬಿಜೆಪಿ ಬೆಂಬಲಿತ ಸಂಘಟನೆಯಿಂದ ದಾಳಿ, ಸ್ಥಳದಲ್ಲಿ ಉದ್ವಿಗ್ನತೆ

ದಾಳಿಯ ವೇಳೆ ಸ್ಥಳದಲ್ಲಿ ಹಲವಾರು ಮಹಿಳೆಯರು, ಮಕ್ಕಳು ಪ್ರಾರ್ಥನೆ ನಡೆಸುತ್ತಿದ್ದರು ಎಂದು ವರದಿಯಾಗಿದೆ. ಪ್ರಾರ್ಥನೆ ಮಾಡುತ್ತಿದ್ದಾಗ ಒಳ ನುಗ್ಗಿದ ದುಷ್ಕರ್ಮಿಗಳು ಅಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಚರ್ಚ್​ ಮೇಲೆ ದಾಳಿ.

ಚರ್ಚ್​ ಮೇಲೆ ದಾಳಿ.

 • Share this:
  ಉಡುಪಿ (ಸೆಪ್ಟೆಂಬರ್​ 10); ಕರಾವಳಿ ಭಾಗದಲ್ಲಿ ಇತ್ತೀಚೆಗೆ ಕೋಮು ಪ್ರಚೋಧನಾ ದಾಳಿಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂತಹದ್ದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನ ಕಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಪ್ರಗತಿ ಕ್ರೈಸ್ತ ಪ್ರಾರ್ಥನಾಲಯದಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ, ಬಿಜೆಪಿ ಬೆಂಬಲಿತ ಸಂಘ ಪರಿವಾರದ ಕಾರ್ಯಕರ್ತರು ಇಂದು ದಾಳಿ ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾರ್ಥನೆಯ ಸಮಯದಲ್ಲಿ ಸುಮಾರು 25 ಜನರು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಕಾರ್ಕಳ ನಗರ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿನ ನಕ್ರೆ ಆನಂದಿ ಮೈದಾನದ ಪ್ರಗತಿ ಪ್ರಾಥನಾಲಯ ಕಾರ್ಯಾಚರಿಸುತ್ತಿದೆ. ಅಲ್ಲಿ ಬೆನಡಿಕ್ಟ್ ಎಂಬವರು ಅಕ್ರಮವಾಗಿ ಮತಾಂತರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸಂಘಟನೆಯ ಕಾರ್ಯಕರ್ತರು, ಪ್ರಾರ್ಥನಾಲಯಕ್ಕೆ ಏಕಾಏಕಿ ನುಗ್ಗಿ ಗಲಾಟೆ ನಡೆಸಿದ್ದಾರೆ.  ದಾಳಿಯ ವೇಳೆ ಸ್ಥಳದಲ್ಲಿ ಹಲವಾರು ಮಹಿಳೆಯರು, ಮಕ್ಕಳು ಪ್ರಾರ್ಥನೆ ನಡೆಸುತ್ತಿದ್ದರು ಎಂದು ವರದಿಯಾಗಿದೆ. ಪ್ರಾರ್ಥನೆ ಮಾಡುತ್ತಿದ್ದಾಗ ಒಳ ನುಗ್ಗಿದ ದುಷ್ಕರ್ಮಿಗಳು ಅಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ ಎಂದು ವರದಿಯಾಗಿದೆ.

  ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಕಳ ನಗರ ಠಾಣೆಯ ಎಸ್‌ಐ, "ಘಟನೆಗೆ ಸಂಬಂಧಿಸಿ ಬೆನಡಿಕ್ಟ್‌ ಎಂಬುವವರು ದೂರು ನೀಡಿದ್ದಾರೆ. ಪ್ರಾರ್ಥನೆ ನಡೆಸುತ್ತಿದ್ದಾಗ ಸುಮಾರು 25 ರಷ್ಟು ಮಂದಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ತನಿಖೆ ನಡೆಸುತ್ತಿದ್ದೇವೆ" ಎಂದು ತಿಳಿಸಿದ್ದಾರೆ.
  Published by:MAshok Kumar
  First published: