Water Adventure Games: ಕೊನೆಗೂ ಶುರುವಾಯ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸಕ್ರೀಡೆಗಳು; ಪ್ರವಾಸೋದ್ಯಮಕ್ಕೆ ಮತ್ತೆ ಕಳೆ!

ದಾಂಡೇಲಿ, ಜೋಯಿಡಾ ಭಾಗಗಳಿಗೆ ಕಾಳಿ ನದಿಯಲ್ಲಿನ ವಿವಿಧ ಜಲಸಾಹಸ ಕ್ರೀಡೆಗಳನ್ನ ಆಡೋದಕ್ಕೆ ಅಂತಾನೇ ದೂರದೂರುಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಅನ್‌ಲಾಕ್ ಜಾರಿಯಾಗಿದ್ದರೂ ಸಹ ಕೊರೋನಾ ಕಾರಣದಿಂದ ಜಲಸಾಹಸ ಕ್ರೀಡೆಗಳಿಗೆ ಬ್ರೇಕ್ ಹಾಕಿದ್ದು ಪ್ರವಾಸಿಗರ ಸಂಖ್ಯೆ ಇಳಿಮುಖವಾಗುವಂತಾಗಿತ್ತು.

ಕಾಳಿ ನದಿಯಲ್ಲಿ ಜಲಸಾಹಸ ಕ್ರೀಡೆ.

ಕಾಳಿ ನದಿಯಲ್ಲಿ ಜಲಸಾಹಸ ಕ್ರೀಡೆ.

  • Share this:
ಕಾರವಾರ: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ (State Tourism) ಹೆಸರುವಾಸಿಯಾದ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆ (Uttara Kannada District Tourism) ಸಹ ಒಂದು. ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳಿಂದಲೇ ಪ್ರವಾಸಿಗರ ಹಾಟ್‌ ಫೇವರೇಟ್ ಆಗಿರುವ ಜಿಲ್ಲೆಯ ಕಡಲ ತೀರಗಳಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಸದ್ಯ ಕೊರೋನಾ ಲಾಕ್‌ಡೌನ್ ಬಳಿಕ ಪ್ರವಾಸಿ ತಾಣಗಳು ಅನ್‌ಲಾಕ್ ಆಗಿದ್ದರೂ ಸಹ ಯಾವುದೇ ರೀತಿಯ ಜಲ ಸಾಹಸ ಕ್ರೀಡೆಗಳಿಗೆ (Water Adventure Game) ಅವಕಾಶ ಇಲ್ಲದ್ದರಿಂದ ಹೆಚ್ಚಿನ ಪ್ರವಾಸಿಗರು ಬರದೇ ಪ್ರವಾಸೋದ್ಯಮ ಮಂಕಾಗಿತ್ತು. ಆದರೆ ಇದೀಗ ಜಿಲ್ಲಾಡಳಿತ ನದಿ ಹಾಗೂ ಸಮುದ್ರ ತೀರಗಳಲ್ಲಿ ವಾಟರ್‌ ಸ್ಪೋರ್ಟ್ಸ್ ನಡೆಸಲು ಅವಕಾಶ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಕಾರವಾರ, ಗೋಕರ್ಣ, ಹೊನ್ನಾವರ ಹಾಗೂ ಮುರ್ಡೇಶ್ವರ ಸೇರಿ ಹತ್ತಾರು ಕಡಲ ತೀರಗಳಿವೆ. ಇಲ್ಲಿನ ಬೀಚ್‌ಗಳಲ್ಲಿ ನೀರಿಗಿಳಿದು ಆಟವಾಡಿ ಎಂಜಾಯ್ ಮಾಡೋದಕ್ಕೆ ಅಂತಾನೇ ರಾಜ್ಯ, ಹೊರರಾಜ್ಯಗಳಿಂದಲೂ ಪ್ರವಾಸಿಗರು ಇಲ್ಲಿನ ಕಡಲ ತೀರಗಳಿಗೆ ಭೇಟಿ ನೀಡುತ್ತಾರೆ. ಅಲ್ಲದೇ ದಾಂಡೇಲಿ, ಜೋಯಿಡಾ ಭಾಗಗಳಿಗೆ ಕಾಳಿ ನದಿಯಲ್ಲಿನ ವಿವಿಧ ಜಲಸಾಹಸ ಕ್ರೀಡೆಗಳನ್ನ ಆಡೋದಕ್ಕೆ ಅಂತಾನೇ ದೂರದೂರುಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಅನ್‌ಲಾಕ್ ಜಾರಿಯಾಗಿದ್ದರೂ ಸಹ ಕೊರೋನಾ ಕಾರಣದಿಂದ ಜಲಸಾಹಸ ಕ್ರೀಡೆಗಳಿಗೆ ಬ್ರೇಕ್ ಹಾಕಿದ್ದು ಪ್ರವಾಸಿಗರ ಸಂಖ್ಯೆ ಇಳಿಮುಖವಾಗುವಂತಾಗಿತ್ತು. ಇದೀಗ ಕೊರೋನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನಲೆ ಜಲಸಾಹಸ ಕ್ರೀಡೆಗಳನ್ನ ನಡೆಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದ್ದು ಕೊರೋನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ವಾಟರ್ ಸ್ಪೋರ್ಟ್ಸ್ ಆಯೋಜಿಸುವಂತೆ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ನದಿ ಮತ್ತು ಕಡಲತೀರದಲ್ಲಿ ಆರಂಭವಾಯ್ತು ಜಲಸಾಹಸ ಕ್ರೀಡೆಗಳು

ಇನ್ನು ಜಿಲ್ಲೆಯ ಕಾರವಾರ ರವೀಂದ್ರನಾಥ ಠಾಗೋರ್ ಕಡಲತೀರ, ಗೋಕರ್ಣದ ಓಂ ಬೀಚ್, ಕುಡ್ಲೇ ಬೀಚ್ ಹಾಗೂ ಮುರ್ಡೇಶ್ವರ ಕಡಲತೀರಗಳಲ್ಲಿ ಹಿಂದಿನಿಂದಲೂ ಜಲಸಾಹಸ ಕ್ರೀಡೆಗಳನ್ನು ನಡೆಸಲಾಗುತ್ತಿತ್ತು. ಬೋಟ್ ರೈಡ್, ಜೆಟ್ ಸ್ಕೀ ಸೇರಿದಂತೆ ದಾಂಡೇಲಿ, ಜೋಯಿಡಾ ಭಾಗಗಳಲ್ಲಿ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್, ಕಯಾಕಿಂಗ್‌ನಂತಹ ವಾಟರ್ ಸ್ಪೋರ್ಟ್ಸ್‌ಗಳನ್ನ ಆಯೋಜಿಸಲಾಗುತ್ತಿತ್ತು. ಆದರೆ ಕಳೆದ ಬಾರಿ ಕೊರೋನಾ ಕಾರಣದಿಂದ ಕೇವಲ ಮೂರು ತಿಂಗಳು ಮಾತ್ರ ವಾಟರ್ ಸ್ಪೋರ್ಟ್ಸ್ ನಡೆಸಲಾಗಿದ್ದು ಅಲ್ಲಿಂದ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಸಂಪೂರ್ಣ ನೆಲಕಚ್ಚಿದ್ದು ಜಲ ಸಾಹಸ ಕ್ರೀಡೆಗಳನ್ನು ನಡೆಸುತ್ತಿದ್ದವರು ನಷ್ಟ ಅನುಭವಿಸುವಂತಾಗಿತ್ತು. ಪ್ರತಿವರ್ಷ ಮಳೆಗಾಲದ ಬಳಿಕ ಬಹುತೇಕ 9 ತಿಂಗಳುಗಳ ಕಾಲ ಜಲಸಾಹಸ ಕ್ರೀಡೆಗಳನ್ನ ನಡೆಸುತ್ತಿದ್ದವರಿಗೆ ಕೊರೋನಾ ಶಾಕ್ ನೀಡಿದ್ದು ಇದೀಗ ಮತ್ತೆ ಅನುಮತಿ ನೀಡಿರುವುದಕ್ಕೆ ಆಯೋಜಕರು ಸಂತಸಗೊಂಡಿದ್ದಾರೆ.

ಈಗಾಗಲೇ ಜಲಸಾಹಸ ಕ್ರೀಡೆಗಳನ್ನ ಪ್ರಾರಂಭಿಸಲಾಗಿದೆ ಕೆಲವಡೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು ಈ ಬಾರಿಯಾದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿದ್ದಾರೆ. ಜಲಸಾಹಸ ಕ್ರೀಡೆಯನ್ನೇ ನೆಚ್ಚಿಕೊಂಡು ಬರುತ್ತಿದ್ದ ಪ್ರವಾಸಿಗರಿಗೆ ಖುಷಿಯೋ ಖುಷಿ. ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಯಿಂದ ಕಾರ್ಮಿಕರು ಕೂಡ ಹೊಸ ಆಶಾಭಾವನೆ ಹೊಂದಿದ್ದಾರೆ.

ಇದನ್ನು ಓದಿ: CM Basavaraja Bommai: ಜನರ ಸುತ್ತಲೂ ಅಭಿವೃದ್ಧಿ ಆಗಬೇಕು, ಅಭಿವೃದ್ಧಿ ಸುತ್ತಲೂ ಜನರು ಓಡಾಡಬೇಕು; ಸಿಎಂ ಬಸವರಾಜ ಬೊಮ್ಮಾಯಿ

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
Published by:HR Ramesh
First published: