Yadagiri: ಅರ್ಧಕ್ಕೆ ನಿಂತ ವಂದೇ ಮಾತರಂ ಹಾಡು, ಡಿಕೆಶಿ ನೇತೃತ್ವದ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗೆ ಅಗೌರವ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆ ಅರ್ಧಕ್ಕೆ ನಿಲ್ಲಿಸಿ ಅಗೌರವ, ಕಾರ್ಯಕ್ರಮದಲ್ಲಿಯೇ ಈ ರೀತಿ ನಿರ್ಲಕ್ಷ್ಯ ತೋರಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ

ಕಾಂಗ್ರೆಸ್​ ನಾಯಕರು

ಕಾಂಗ್ರೆಸ್​ ನಾಯಕರು

  • Share this:
ಯಾದಗಿರಿ (ಮಾ.23): ನಗರದ ಇಂಪೀರಿಯಲ್ ಗಾರ್ಡನ್​ನಲ್ಲಿ ಕಾಂಗ್ರೆಸ್​ನ (Congress) ಡಿಜಿಟಲ್ ನೊಂದಣಿ ಅಭಿಯಾನ ಪರಿಶೀಲನಾ ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ ಶಿವಕುಮಾರ್, (D.K Shivakumar) ಈಶ್ವರ್​ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು (Congress Leadress) ಸಭೆಯಲ್ಲಿ ಭಾಗಿಯಾಗಿದ್ರು. ಈ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಂದೇ ಮಾತರಂ (Vande Mataram) ಗೀತೆಯನ್ನು ಅರ್ಧಕ್ಕೆ ನಿಲ್ಲಿಸಿ ಅಗೌರವ ತೋರಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿಯೇ ಈ ರೀತಿ ನಿರ್ಲಕ್ಷ್ಯ ತೋರಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ಚಿತ್ರಿಕರಣ ವೇಳೆ ಕೈ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಮಾಧ್ಯಮದವರ ಮೇಲೆ ಹಲ್ಲೆಗ ಮುಂದಾಗಿದ್ದಾರೆ. ಡಿಕೆ ಶಿವಕುಮಾರ್ ಎದುರೇ ಕಾರ್ಯಕರ್ತರು ಗೂಂಡಾವರ್ತನೆ

ಕೈ ಕಾರ್ಯಕರ್ತರಿಂದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ

ಯಾದಗಿರಿ ನಗರದ ಇಂಪಿರಿಯಲ್ ಗಾರ್ಡನ್​ನಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನದ ಪರಿಶೀಲನಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಮಾಧ್ಯಮದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ವಿಡಿಯೋ ಚಿತ್ರಿಕರಣ ವೇಳೆ ಕೈ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದರಿಂದ ಇದನ್ನು ಖಂಡಿಸಿ ಪತ್ರಕರ್ತರು ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷಗೆ ಗೌರವ ಕೊಡದ ಕಾಂಗ್ರೆಸ್ ಕಾರ್ಯಕರ್ತರು

ಯಾದಗಿರಿ ನಗರದ ಇಂಪಿರಿಯಲ್ ಗಾರ್ಡನ್​ನಲ್ಲಿ ನಡೆದ ಸಭೆ ಕಾಂಗ್ರೆಸ್ ಡಿಜಿಟಲ್ ನೊಂದಣಿ ಅಭಿಯಾನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಕಾಂಗ್ರೆಸ್ ಕಾರ್ಯಕರ್ತರು ಅಗೌರವ ತೋರಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮಾತಿಗೆ ಕಿಮ್ಮತ್ತು ಕೊಡಲಿಲ್ಲ. ಎಲ್ಲರೂ ಆಸನದ ಮೇಲೆ ಕುಳಿತುಕೊಳ್ಳಬೇಕು. ಇಲ್ಲದಿದ್ರೆ ನಾನು ವಾಪಸ್ ಹೋಗುತ್ತೇನೆ. ಎಲ್ಲರೂ ಸೈಲೆಂಟ್ ಆಗುವವರೆಗೆ ಕಾರ್ಯಕ್ರಮ ಆರಂಭಿಸಲ್ಲ ಎಂದು ಡಿಕೆಶಿ ಕಾಂಗ್ರೆಸ್​ ಕಾರ್ಯಕರ್ತರ ಅಶಿಸ್ತಿಗೆ ಗರಂ ಆಗಿದ್ದಾರೆ. ಇನ್ನು ಡಿಕೆ ಶಿವಕುಮಾರ್​ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಮಾಧ್ಯಮದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಇದನ್ನೂ ಓದಿ: ಇಟಲಿ ಮೂಲದವರನ್ನು ಮೆಚ್ಚಿಸುವುದಕ್ಕಾಗಿ ಈ ಸದಾರಮೆ ನಾಟಕವೇ? DK Shivakumarಗೆ ಬಿಜೆಪಿ ಪ್ರಶ್ನೆ

ಪಕ್ಷ ಬಲಪಡಿಸಲು ಡಿಕೆಶಿ ಪ್ರವಾಸ

ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪಾಲ್ಗೊಂಡು ಪಕ್ಷದ ನಾಯಕರ ಬಲಪಡಿಸುವುದಕ್ಕಿಂತ ಪಕ್ಷ ಸಂಘಟನೆ ಮುಖ್ಯ ಎಂಬ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್   ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ನಿನ್ನೆ ಹಾಗೂ ಇಂದು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ‌ಯಿಂದ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಾದ್ಯಂತ ಡಿಕೆಶಿ ಪ್ರವಾಸ ಕೈಗೊಂಡಿದ್ದಾರೆ. ಬೀದರ್‌ನಲ್ಲಿ ಬಸವಕಲ್ಯಾಣ, ಹುಮನಾಬಾದ್, ಬೀದರ್‌ ದಕ್ಷಿಣ, ಬೀದರ್, ಬಾಲ್ಕಿ, ಔರಾದ್ ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ರು.

ಇದನ್ನೂ ಓದಿ: Chikkamagaluru ಕಾಂಗ್ರೆಸ್ ಮುಖಂಡರ ಮೇಲೆ KPCC ಅಧ್ಯಕ್ಷರು ಗರಂ, ಮೋಟಮ್ಮ ಜೊತೆ ಮುನಿಸಿಕೊಂಡ ಡಿಕೆಶಿ

ಅಧಿವೇಶನ ಕಡೆಗಣನೆ 

ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನ ಪ್ರಭಾವಿ ಶಾಸಕರಾಗಿರುವ ಡಿ ಕೆ ಶಿವಕುಮಾರ್ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಪಕ್ಷದ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕಿತ್ತು. ಆದರೆ 2023 ವಿಧಾನಸಭೆ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷ ಸಂಘಟನೆ ಹಾಗೂ ಸದಸ್ಯತ್ವ ನೋಂದಣಿಗೆ ಹೆಚ್ಚು ಒತ್ತು ನೀಡಲು ಸೂಚಿಸಿರುವ ಹಿನ್ನೆಲೆ ಅಧಿವೇಶನ ಸಂದರ್ಭದಲ್ಲಿಯೂ ಅನಿವಾರ್ಯವಾಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವುದಾಗಿ ತಿಳಿದುಬಂದಿದೆ.
Published by:Pavana HS
First published: