HOME » NEWS » District » VATAL NAGARAJ DEMANDS BAN OF MES ORGANIZATION IN KARNATAKA ATVR SNVS

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗಬೇಕು: ವಾಟಾಳ್ ನಾಗರಾಜ್ ಆಗ್ರಹ

ಕರ್ನಾಟಕದ ಅನ್ನ ನೀರಿನಲ್ಲಿ ಬದುಕುತ್ತಿರುವ ಎಂಇಎಸ್ ಸಂಘಟನೆಯವರು ಗಡಿವಿಚಾರ ಬಂದಾಗ ಮಹಾರಾಷ್ಟ್ರದ ಪರವಾಗಿ ಮಾತನಾಡುತ್ತಾರೆ. ನಮ್ಮ ರಾಜ್ಯದಲ್ಲಿ ಇವರನ್ನ ಯಾಕೆ ಉಳಿಸಿಕೊಳ್ಳಬೇಕು. ಈ ಸಂಘಟನೆಯನ್ನ ನಿಷೇಧಿಸಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

news18-kannada
Updated:January 28, 2021, 8:43 AM IST
ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗಬೇಕು: ವಾಟಾಳ್ ನಾಗರಾಜ್ ಆಗ್ರಹ
ವಾಟಾಳ್ ನಾಗರಾಜ್
  • Share this:
ರಾಮನಗರ: ರಾಜ್ಯದಲ್ಲಿ ಕರ್ನಾಟಕ ವಿರೋಧಿ ಚಟುವಟಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಇಲ್ಲಿಯ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ರಾಜ್ಯದಲ್ಲಿ ಯಾವುದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಇರಬಾರದು ಎಂದು ಒತ್ತಾಯಿಸಿದ್ದಾರೆ.

ಇಲ್ಲಿನ ಅನ್ನ, ನೀರಿನಲ್ಲಿ ಬದುಕುತ್ತಿದ್ದಾರೆ. ಆದರೆ ಅಲ್ಲಿನ ಕೆಲವರು ಕರ್ನಾಟಕದ ಪರವಾಗಿ ಮಾತನಾಡುವುದನ್ನ ಬಿಟ್ಟು ಮಹಾರಾಷ್ಟ್ರದ ಪರವಾಗಿ ಮಾತನಾಡುತ್ತಾರೆ. ಜೊತೆಗೆ ಗಡಿ ವಿಚಾರ ಬಂದಾಗ ಕರ್ನಾಟಕದ ಪರವಾಗಿ ಇರೋದಿಲ್ಲ. ಹಾಗಾಗಿ ನಮ್ಮ ರಾಜ್ಯದಲ್ಲಿ ಮಹಾರಾಷ್ಟ್ರದ ಸಮಿತಿ ಯಾಕೆ ಇರಬೇಕು ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.

ಬೆಳಗಾವಿಯಲ್ಲಿ ಕೆಲವರು ರಾಜ್ಯ ವಿರೋಧಿ ಕೆಲಸ ಮಾಡ್ತಿದ್ದಾರೆ. ಎಂ.ಇ.ಎಸ್ ಸಂಘಟನೆ ಹೆಸರಿನಲ್ಲಿ ರಾಜ್ಯದ ವಿರುದ್ಧವಾಗಿ ನಡೆಯುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ಆ ಸಂಘಟನೆಯನ್ನ ನಿಷೇಧ ಮಾಡಬೇಕು. ಇದರ ಜೊತೆಗೆ ಮರಾಠ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ನಿರ್ಧಾರ ಸರಿಯಿಲ್ಲ. ಇದು ರಾಜ್ಯದ ಜನರಿಗೆ ಮಾಡಿರುವ ಅಪಮಾನ. ಹಾಗಾಗಿ ಕೂಡಲೇ ಮರಾಠ ಪ್ರಾಧಿಕಾರವನ್ನ ರದ್ದು ಮಾಡಬೇಕು ಎಂದೂ ಅವರು ಒತ್ತಾಯಿಸಿದರು.

ಮರಾಠಾ ಪ್ರಾಧಿಕಾರ ಸಂಪೂರ್ಣವಾಗಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಹೋರಾಟ ಮಾಡಲಾಗುತ್ತದೆ. ಈ ಸಂಬಂಧ ಗುರುವಾರ ಖಾಸಗಿ ಹೋಟೆಲ್​ನಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳ ಮುಖ್ಯಸ್ಥರ ಜೊತೆಗೆ ಸಭೆ ಕರೆಯಲಾಗಿದೆ. ಜ. 30ರಂದು ರಾಜ್ಯಾದ್ಯಂತ ರೈಲು ತಡೆದು ಹೋರಾಟ ಮಾಡಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: HD Kumarswamy: ಬೆಳಗಾವಿ ಮರಾಠಿಗರದ್ದಲ್ಲ, ವೀರ ಕನ್ನಡಿಗರದ್ದು: ಠಾಕ್ರೆಗೆ ಎಚ್​ಡಿ ಕುಮಾರಸ್ವಾಮಿ ತಿರುಗೇಟು

ದೆಹಲಿ ಗಲಭೆ, ಕೇಂದ್ರದ ವೈಫಲ್ಯ:

ನವದೆಹಲಿಯಲ್ಲಿ ಮೊನ್ನೆ ನಡೆದ ಗಲಭೆ ಪ್ರಕರಣವನ್ನ ತಡೆಯುವುದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಆಗಿದೆ ಎಂದು ಈ ವೇಳೆ ವಾಟಾಳ್ ನಾಗರಾಜ್ ಆರೋಪಿಸಿದರು. ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜ ಬದಲಾವಣೆ ಮಾಡುವ ಘಟನೆ ನಡೆದಿದೆ. ಆದರೆ ಕೇಂದ್ರದ ಇಂಟೆಲಿಜೆನ್ಸ್ ಏನ್ ಮಾಡ್ತಿತ್ತು? ಇದು ಕೇಂದ್ರದ ಗುಪ್ತಚರ ವೈಫಲ್ಯವಾಗಿದೆ. ಈ ವಿಚಾರವಾಗಿ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಮಂತ್ರಿ, ಗೃಹಮಂತ್ರಿ, ರಕ್ಷಣಾ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ವಾಟಾಳ್ ಅಭಿಪ್ರಾಯಪಟ್ಟರು.ದೇಶದ ಉದ್ದಗಲಕ್ಕೂ ಗಣರಾಜ್ಯೋತ್ಸವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತೆ. ಆದರೆ ಈ ಬಾರಿ ಅವಮಾನ ಮಾಡಿದ್ದಾರೆ. ಆದರೆ ಇಷ್ಟೆಲ್ಲ ಆಗುತ್ತಿದ್ದರೂ ಸಹ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಸುಮ್ಮನೆ ಇದ್ದದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಈ ಕೂಡಲೇ ಕೇಂದ್ರ ಗುಪ್ತಚರ ಇಲಾಖೆಯವರು ಗಲಭೆ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಹಿಸಬೇಕು. ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ ಅವರು ರೈತರ ಪರವಾಗಿ ಕೇಂದ್ರ ಸರ್ಕಾರ ನಿಲ್ಲಬೇಕೆಂದರು.

ವರದಿ : ಎ.ಟಿ.ವೆಂಕಟೇಶ್
Published by: Vijayasarthy SN
First published: January 28, 2021, 8:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories