HOME » NEWS » District » VATAL NAGARAJ OPPOSES GOVERNMENTS DECISION TO RUN ONLINE CLASSROOM MASSIVE PROTEST IN RAMANAGARA MAK

ಆನ್‌ಲೈನ್‌ ತರಗತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ವಾಟಾಳ್ ವಿರೋಧ; ರಾಮನಗರದಲ್ಲಿ ಭಾರೀ ಪ್ರತಿಭಟನೆ

ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಮೊರೆಹೋಗಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ ಅಲ್ಲ. ಗ್ರಾಮಾಂತರ ಭಾಗದ ಎಷ್ಟೋ ವಿದ್ಯಾರ್ಥಿಗಳ ಬಳಿ ಲ್ಯಾಪ್‌ಟಾಪ್‌ ಇಲ್ಲ, ಇದ್ದರೂ ಅದನ್ನ ಉಪಯೋಗಿಸುವ ವಿಧಾನ ಗೊತ್ತಿಲ್ಲ. ಜೊತೆಗೆ ವಿದ್ಯುತ್ ಸಮಸ್ಯೆಯೂ ಇದೇ. ಇಷ್ಟೆಲ್ಲ ತೊಂದರೆಗಳಿದ್ದರೂ ಸಹ ರಾಜ್ಯ ಸರ್ಕಾರ ಈ ಕ್ರಮವಹಿಸಿರುವುದು ನಿಜಕ್ಕೂ ಅವೈಜ್ಞಾನಿಕ ಎಂದು ವಾಟಾಳ್‌ ನಾಗರಾಜ್‌ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

news18-kannada
Updated:July 10, 2020, 3:27 PM IST
ಆನ್‌ಲೈನ್‌ ತರಗತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ವಾಟಾಳ್ ವಿರೋಧ; ರಾಮನಗರದಲ್ಲಿ ಭಾರೀ ಪ್ರತಿಭಟನೆ
ಆನ್‌ಲೈನ್‌ ಶಿಕ್ಷಣದ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ.
  • Share this:
ರಾಮನಗರ (ಜುಲೈ 10); ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಜೋರಾಗಿರುವ ಹಿನ್ನೆಲೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ ಎಂದು ರಾಜ್ಯ ಸರ್ಕಾರ ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಮುಂದಾಗಿದೆ. ಆದರೆ, ಸರ್ಕಾರದ ಈ ಕ್ರಮವನ್ನ ಖಂಡಿಸಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ರಾಮನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಹಾಗೂ ಬೆಂಬಲಿಗರು ಆನ್‌ಲೈನ್‌ ಶಿಕ್ಷಣದ ಅಣಕು ಶವಕ್ಕೆ ಬೆಂಕಿ ಹಚ್ಚುವ ಮೂಲಕ ಆಕ್ರೋಶವ್ಯಕ್ತಪಡಿಸಿದರು. ಅಲ್ಲದೆ, "ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಮೊರೆಹೋಗಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ ಅಲ್ಲ. ಗ್ರಾಮಾಂತರ ಭಾಗದ ಎಷ್ಟೋ ವಿದ್ಯಾರ್ಥಿಗಳ ಬಳಿ ಲ್ಯಾಪ್‌ಟಾಪ್‌ ಇಲ್ಲ, ಇದ್ದರೂ ಅದನ್ನ ಉಪಯೋಗಿಸುವ ವಿಧಾನ ಗೊತ್ತಿಲ್ಲ.

ಇದನ್ನೂ ಓದಿ: ಅಕ್ಟೋಬರ್‌ 01 ರಿಂದ ಕಾಲೇಜು ಪ್ರಾರಂಭ, ಎಂದಿನಂತೆ ನಡೆಯಲಿವೆ ತರಗತಿಗಳು; ಸರ್ಕಾರದಿಂದ ಮಹತ್ವದ ನಿರ್ಧಾರ
Youtube Video

ಜೊತೆಗೆ ವಿದ್ಯುತ್ ಸಮಸ್ಯೆಯೂ ಇದೇ. ಇಷ್ಟೆಲ್ಲ ತೊಂದರೆಗಳಿದ್ದರೂ ಸಹ ರಾಜ್ಯ ಸರ್ಕಾರ ಈ ಕ್ರಮವಹಿಸಿರುವುದು ನಿಜಕ್ಕೂ ಅವೈಜ್ಞಾನಿಕ. ಕೂಡಲೇ ಈ ಕ್ರಮವನ್ನು ಸ್ಥಗಿತ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.
Published by: MAshok Kumar
First published: July 10, 2020, 3:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories