ರಾಜ್ಯ ಸರ್ಕಾರ ಕೊರೋನಾ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ ; ವಾಟಾಳ್ ನಾಗರಾಜ್ ಆಕ್ರೋಶ

ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಚಾರಿ ಆಸ್ಪತ್ರೆ ಸಂಖ್ಯೆ ಹೆಚ್ಚಿಸಿ ತ್ವರಿತವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್ ಆಗ್ರಹಿಸಿದರು.

news18-kannada
Updated:July 6, 2020, 5:09 PM IST
ರಾಜ್ಯ ಸರ್ಕಾರ ಕೊರೋನಾ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ ; ವಾಟಾಳ್ ನಾಗರಾಜ್ ಆಕ್ರೋಶ
ಪ್ರತಿಭಟನೆ ನಡೆಸಿದ ವಾಟಾಳ್​​ ನಾಗರಾಜ್
  • Share this:
ರಾಮನಗರ(ಜುಲೈ.06): ಕೊರೋನಾ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ಯವನ್ನು ಹೇಳುತ್ತಿಲ್ಲ‌. ಕರ್ನಾಟಕ ಸಾವಿನ ಮನೆಯಾಗಿದೆ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೆದ್ದಾರಿ ಮಧ್ಯ ನಿಂತು ಪ್ರತಿಭಟನೆ ನಡೆಸಿದರು.

ರಾಮನಗರ ಐಜೂರು ವೃತ್ತದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ನ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸೋಂಕಿತರಿಗೆ ಪ್ರಾಣ ಉಳಿಸಬೇಕಾದ್ದು ಸರ್ಕಾರದ ಕರ್ತವ್ಯ. ಅದರೆ, ಕರ್ನಾಟಕ ಸಾವಿನ ಮನೆಯಾಗಿದೆ, ಸರ್ಕಾರ ಹೇಳುವುದು ಒಂದು ಮಾಡುವುದು ಮತ್ತೊಂದು. ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿದ್ದವಿದೆ ಎಂದು ಹೇಳಿಕೆ ನೀಡಿದ್ದಾರೆ. ಅದರೆ ಬೆಂಗಳೂರಿನ ರಸ್ತೆ ರಸ್ತೆಗಳಲ್ಲಿ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತರು ಸಾಯುತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಚಾರಿ ಆಸ್ಪತ್ರೆ ಸಂಖ್ಯೆ ಹೆಚ್ಚಿಸಿ ತ್ವರಿತವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್ ಆಗ್ರಹಿಸಿದರು.

ಇದನ್ನೂ ಓದಿ : ತಹಶೀಲ್ದಾರ್‌ಗೆ ಪಾಸಿಟಿವ್, ಶಾಸಕರು ಕ್ವಾರಂಟೈನ್​ನಲ್ಲಿ‌ ; ಮೈಸೂರಿನಲ್ಲಿ ಸಾವಿನ ಜೊತೆ ಕೊರೋನಾ ಸಂಖ್ಯೆಯೂ ಹೆಚ್ಚಳ

ಕೊರೋನಾ ಸೋಂಕಿನಿಂದ ಮರಣ ಮೃತಪಟ್ಟವರನ್ನು ಕಸದಂತೆ ಎಸೆಯುವುದು ತಪ್ಪಬೇಕು, ಉತ್ತಮ ರೀತಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಜಾಗ ಗುರುತು ಮಾಡಬೇಕು. ರಾಜ್ಯದ ಪ್ರತಿ ಜಿಲ್ಲೆಗೆ 10 ಎಕರೆ ಹಾಗೂ ಪ್ರತಿ ತಾಲ್ಲೂಕಿಗೆ ಎರಡು ಎಕರೆ  ಸೋಂಕಿತರ ಅಂತ್ಯ ಸಂಸ್ಕಾರ ಮಾಡಲು ಜಾಗ ನಿಗದಿ ಮಾಡಿ ಎಂದು ರಾಜ್ಯ ಸರ್ಕಾರವನ್ನು ವಾಟಾಳ್ ನಾಗರಾಜ್ ಒತ್ತಾಯಿಸಿದರು.

ಈ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ವಾಟಾಳ್​​ ನಾಗರಾಜ್​ ಎಚ್ಚರಿಕೆ ನೀಡಿದರು.
Published by: G Hareeshkumar
First published: July 6, 2020, 4:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading