ವಿಜಯಪುರ(ಡಿಸೆಂಬರ್. 17) : ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಘಟಕ ಹಾಗೂ ಗಿರಿಜನ ಯೋಜನೆಯಡಿಯ ಅನುದಾನವನ್ನು ಬಳಸಲು ನಿರ್ಲಕ್ಷ್ಯ ತೋರಿ ಆ ಹಣ ಲ್ಯಾಪ್ಸ್ ಆದರೆ, ಅದಕ್ಕೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಡಿ ಅವಕಾಶವಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2020-21 ನೇ ಆರ್ಥಿಕ ವರ್ಷದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರದ ನಿಯಮಾನುಸಾರ ಅನುದಾನವನ್ನು ಬಳಸಿ. ಈ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಬೇಡಿ. ಸರಕಾರದ ಆದೇಶ, ನಿರ್ದೇಶನ ಅನ್ವಯ ಅನುದಾನ ಬಳಸಬೇಕು. ಎಸ್ಸಿ ಮತ್ತು ಎಸ್ಟಿ ಕಾಯ್ದೆ ಅನ್ವಯ ಅರ್ಹ ಫಲಾನುಭವಿಗಳಿಗೆ ಮಾಸಿಕವಾಗಿ ಅನುದಾನವನ್ನು ತಲುಪಿಸಬೇಕು. ಮಾರ್ಚ್ ಮಾಸಾಂತ್ಯದೊಳಗೆ ಅನುದಾನ ಬಳಸಬೇಕು. ಇಲ್ಲದಿದ್ದರೆ ಎಸ್ಸಿ ಮತ್ತು ಎಸ್ಟಿ ಕಾಯ್ದೆಯ ಪ್ರಕಾರ ಅದು ಅಪರಾಧವಾಗುತ್ತದೆ ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳಿಗೂ ಅಗತ್ಯ ಕ್ರಮ ಕೈಗೊಳ್ಳಿ. ಯಾವುದೇ ದೂರುಗಳು ಬರದಂತೆ ನಿಗಾವಹಿಸಿ,. ಸಕಾಲದ ಬಾಕಿ ಅರ್ಜಿಗಳನ್ನು ಕೂಡಲೇ ಪೂರ್ಣಗೊಳಿಸಿ. ತಾಂತ್ರಿಕ ವಿಷಯಗಳನ್ನು ತಮಗೂ ತಿಳಿಸಿ ಎಂದು ಡಾ. ಔದ್ರಾಮ್ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಸ್ ಓ ಪಿ ಪಾಲಿಸಲು ಸೂಚನೆ :
ಮತ್ತೋಂದು ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ವಿಡಿಯೋ ಸಂವಾದ ನಡೆಸಿದ ಅವರು, ಇದೇ ವೇಳೆ, ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ನಡೆಸಿ. ಇದರ ಮೇಲ್ವಿಚಾರಣೆಗಾಗಿ ಪ್ರತಿ ತಾಲೂಕಿಗೆ ನೇಮಿಸಲಾದ ನೋಡಲ್ ಹೆಲ್ತ್ ಅಧಿಕಾರಿಗಳು ತಾಲೂಕುಗಳಲ್ಲಿರುವ ಆಶಾ ಕಾರ್ಯಕರ್ತರು, ಆರೋಗ್ಯಾಧಿಕಾರಿಗಳು, ಎ.ಎನ್.ಎಂ ಗಳು ಹಾಗೂ ಅಗತ್ಯ ಆ್ಯಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಇತ್ಯಾದಿಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಡಾ. ಔದ್ರಾಮ್ ಸೂಚನೆ ನೀಡಿದರು.
ಕೊರೋನಾ ಸೋಂಕಿತರು ಮತ್ತು ಮತದಾನದ ದಿನ ತಪಾಸಣೆ ಸಂದರ್ಭದಲ್ಲಿ ಕೊರೋನಾ ಶಂಕಿತರು ಮತಗಟ್ಟೆಗಳಿಗೆ ಬಂದು ಖುದ್ದು ಮತದಾನ ಮಾಡಲು ಇಚ್ಛಿಸಿದರೆ ಆ ಬಗ್ಗೆ ರಿಟರ್ನಿಂಗ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಬೇಕು,
ಇದನ್ನೂ ಓದಿ : ಗ್ರಾಮದ ಜನರಿಗಾಗಿ ಗರ್ಭಿಣಿ ಮಹಿಳೆ ಚುನಾವಣೆ ತ್ಯಾಗ: ಹೆರಿಗೆ ದಿನವೇ ನಾಮಪತ್ರ ವಾಪಸ್
ಕೋವಿಡ್ ಕೇರ್ ಕೇಂದ್ರದ ಆರೋಗ್ಯಾಧಿಕಾರಿಗಳು ಇಂಥ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಮತಿ ನೀಡಿದ್ದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು.ಜೊತೆಗೆ ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಸೂಚನೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ