ರೈತರ ನೆರವಿಗೆ ಮುಂದಾದ ವಿಜಯಪುರ ಜಿಲ್ಲಾಡಳಿತ ; ಆರು ತಾಲೂಕುಗಳಲ್ಲಿ ಹೆಸರು ಖರೀದಿ ಕೇಂದ್ರ ಆರಂಭ

ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರು ಕಾಳು ಖರೀದಿಸಬಾರದು. ಈ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು

ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

  • Share this:
ವಿಜಯಪುರ(ಸೆಪ್ಟೆಂಬರ್​. 22): ಜಿಲ್ಲೆಯ 6 ತಾಲೂಕು ಕೇಂದ್ರಗಳಲ್ಲಿ ಹೆಸರು ಕಾಳು ಬೆಳೆಗಳ ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಹೆಸರು ಕಾಳು ಬೆಳೆಗಳು ಮಾರಾಟವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರೈತರಿಗೆ ನೆರವಾಗಲು ಜಿಲ್ಲೆಯ ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಹಾಗೂ ಇಂಡಿ ತಾಲೂಕುಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಮತ್ತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 6,712 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರುಬೆಳೆ ಬಿತ್ತನೆಯಾಗಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ ಸುಮಾರು 50,340 ಕ್ವಿಂಟಲ್ ಹೆಸರು ಬೆಳೆ ಬರುವ ನಿರೀಕ್ಷೆಯಿದೆ. ಆದುದರಿಂದ ಜಿಲ್ಲೆಯ ಯಾವ ರೈತರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿನೆ ನೀಡಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರಕಾರ ಪ್ರತಿ ಕ್ವಿಂಟಾಲ್‍ಗೆ ಹೆಸರು ಕಾಳು ಬೆಳೆಗೆ 7,196 ರೂಪಾಯಿಯನ್ನು ನಿಗದಿ ಪಡಿಸಿದೆ. ಪ್ರತಿಯೊಬ್ಬ ರೈತರಿಂದ ಗರಿಷ್ಠ 4 ಕ್ವಿಂಟಾಲ್ ಹೆಸರು ಕಾಳು ಖರೀದಿಸಲು ಅವಕಾಶವಿದೆ. ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಐ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರಿನ ಸೌಂದರ್ಯ ಹಾಳಾಗದಂತೆ ತಡೆಯಲೇಬೇಕಿದೆ ; ಅಪಾರ್ಟ್‌ಮೆಂಟ್‌ ಮಾಲೀಕರ ಜತೆ ಡಿಸಿಎಂ ಸಂವಾದ

ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರು ಕಾಳು ಖರೀದಿಸಬಾರದು. ಈ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತ ನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೊರೋನಾ ಹಿನ್ನೆಲೆ ಸಾಮಾಜಿಕ ಅಂತರ ನಿಯಮ ಪಾಸಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ. ಸುನಿಲ್​​ ಕುಮಾರ್ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ

ಈ ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎ.ಪಿ.ಎಂ.ಸಿ ಸಹಾಯಕ ನಿರ್ದೇಶಕ ಶ್ರೀ ಛಬನೂರ ಸೇರಿದಂತೆ ಇತರರು ಇದ್ದರು.

ವಿಜಯಪುರ ಜಿಲ್ಲೆಯಲ್ಲಿ ಕಳೆದ 8-10 ದಿನಗಳಿಂದ ಆಗಾಗ ಧಾರಾಕಾರ ಮಳೆಯಾಗುತ್ತಿದ್ದು, ರೈತರು ಬೆಳೆದ ಉತ್ಪನ್ನಗಳನ್ನು ಸಾಗಾಟ ಮತ್ತು ಮಾರಾಟ ಮಾಡಲು ತೀವ್ರ ತೊಂದರೆಯಾಗಿದೆ. ಅಲ್ಲದೇ, ಹಲವಾರು ರೈತರು ಬೆಳೆದಿರುವ ತೊಗರಿ, ಈರುಳ್ಳಿ, ಮಕ್ಕೆಜೋಳ, ಸೋಯಾಬಿನ್ ಸೇರಿದಂತೆ ನಾನಾ ಬೆಳೆಗಳು ಈಗ ಮಳೆಯ ನೀರಿನಲ್ಲಿ ನಿಂತು ಹಾಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೆಸರುಕಾಳು ಖರೀದಿಗೆ ವಿಜಯಪುರ ಜಿಲ್ಲಾಡಳಿತ ಮುಂದಾಗಿರುವ ಹೆಸರು ಕಾಳು ಬೆಳೆಗಾರರಲ್ಲಿ ಸ್ವಲ್ಪ ಮಟ್ಟಿಗೆ ನೆಮ್ಮದಿ ಮೂಡಿಸಿದೆ.
Published by:G Hareeshkumar
First published: