ಆತ್ಮ ನಿರ್ಭರ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ವಿಜಯಪುರ ಜಿಲ್ಲಾಡಳಿತ ಕಾರ್ಯತಂತ್ರ

ದೇಶದ ಆರ್ಥಿಕ ವ್ಯವಸ್ಥೆಯನ್ನು ಪುನಃಶ್ಚೇತನಗೊಳಿಸಲು ಕೇಂದ್ರ ಸರಕಾರ ಮತ್ತು  ಪ್ರಧಾನ ಮಂತ್ರಿಗಳು ಆತ್ಮನಿರ್ಭರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.  ಈ ಯೋಜನೆಯ ಯಶಸ್ಸಿಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್​ ತಿಳಿಸಿದ್ದಾರೆ.

news18-kannada
Updated:September 24, 2020, 7:14 AM IST
ಆತ್ಮ ನಿರ್ಭರ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ವಿಜಯಪುರ ಜಿಲ್ಲಾಡಳಿತ ಕಾರ್ಯತಂತ್ರ
ವಿಜಯಪುರ ಜಿಲ್ಲಾ ಪಂಚಾಯತ್.
  • Share this:
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಮುಂದಡಿ ಇಟ್ಟಿದೆ.  ಈ ಯೋಜನೆಯಡಿ ಉದ್ಯಮಿಗಳನ್ನು ಸೆಳೆಯಲು ಮತ್ತು ಪರಾವಲಂಬನೆಯನ್ನು ಕಡಿಮೆ ಮಾಡಲು ನಾನಾ ಕಾರ್ಯತಂತ್ರಗಳನ್ನು ರೂಪಿಸಿದೆ. ಕೊರೋನಾ ಎಮರ್ಜೆನ್ಸಿ ಮತ್ತು ಲಾಕಡೌನ್ ಬಳಿಕ ಉಂಟಾಗಿರುವ ಆರ್ಥಿಕ ಅಸಮತೋಲನವನ್ನು ಸರಿದೂಗಿಸಲು ಆತ್ಮನಿರ್ಭರ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದು, ಇದರಿಂದ ಹೊಸ ಉದ್ಯಮಗಳ ಸೃಷ್ಠಿಗೆ ಮತ್ತು ಉದ್ಯೋಗ ದೊರೆಯಲು ನೆರವಾಗಲಿದೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ವಿಜಯಪುರ ನಗರದ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಆಡಳಿತ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ ಕೆನರಾ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಆತ್ಮನಿರ್ಭರ ಹಾಗೂ ಎಮರ್ಜೆನ್ಸಿ ಕ್ರೆಡಿಟ್‌ಲೈನ್ ಗ್ಯಾರೆಂಟಿ ಸ್ಕೀಮ್ ಟು ಎಮ್‌ಎಸ್‌ಎಮ್‌ಇ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. 

ಈ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ್​ ಕುಮಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ದೇಶದ ಆರ್ಥಿಕ ವ್ಯವಸ್ಥೆಯನ್ನು ಪುನಃಶ್ಚೇತನಗೊಳಿಸಲು ಕೇಂದ್ರ ಸರಕಾರ ಮತ್ತು  ಪ್ರಧಾನ ಮಂತ್ರಿಗಳು ಆತ್ಮನಿರ್ಭರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.  ಈ ಯೋಜನೆಯ ಯಶಸ್ಸಿಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ಹೇಳಿದರು.

ಇದು ಕೇಂದ್ರ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.  ಈ ಯೋಜನೆಯ ಸಂಪೂರ್ಣ ಯಶಸ್ಸಿಗೆ ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.  ಈ ಯೋಜನೆಯ ಬಗ್ಗೆ ಆಸಕ್ತಿ ಹೊಂದಿದವರಿಗೆ ಮತ್ತು ಉದ್ದಿಮೆದಾರರಿಗೆ ಬ್ಯಾಂಕು‌ಗಳು ತಡ ಮಾಡದೇ ಸೂಕ್ತವಾಗಿ ಸ್ಪಂದಿಸಬೇಕು. ಅಲ್ಲದೇ, ಉದ್ದಿಮೆದಾರರೂ ಕೂಡ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : Suresh Angadi Passes Away: ಕೊರೋನಾಗೆ ತುತ್ತಾಗಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ನಿಧನ!

ಮುಂಬರುವ ದಿನಗಳಲ್ಲಿ ಬ್ಯಾಂಕಿನವರ ಸಭೆ ಕರೆದು ಇದರ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸಲಾಗುವುದು.  ಅಲ್ಲದೇ ಚರ್ಚೆ ನಡೆಸಿ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದರು.
ಕೆನರಾ ಬ್ಯಾಂಕಿನ ಸ್ಥಾನಿಕ ಮ್ಯಾನೇಜರ್ ನಿತ್ಯಾನಂದ ಪ್ರಭು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.  ವಿಜಯಪುರ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಟಿ, ಸಿದ್ದಣ್ಣ, ನಾನಾ ಬ್ಯಾಂಕುಗಳ ಹಿರಿಯ ಅಧಿಕಾರಿಗಳು, ಉದ್ದಿಮೆದಾರರು ಈ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದು ಸಂವಾದದಲ್ಲಿ ಪಾಲ್ಗೋಂಡರು.
Published by: MAshok Kumar
First published: September 24, 2020, 7:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading